Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಂಕನಾಡಿ ಮಸೀದಿ ರಸ್ತೆಯಲ್ಲಿ ಪ್ರಾರ್ಥನೆ:...

ಕಂಕನಾಡಿ ಮಸೀದಿ ರಸ್ತೆಯಲ್ಲಿ ಪ್ರಾರ್ಥನೆ: ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ29 May 2024 9:22 PM IST
share

ಮಂಗಳೂರು, ಮೇ 29: ನಗರದ ಕಂಕನಾಡಿ ಮಸೀದಿಯಲ್ಲಿ ಶುಕ್ರವಾರದ ಸಾಮೂಹಿಕ ನಮಾಝನ್ನು ರಸ್ತೆಯಲ್ಲಿ ನಡೆಸಿರುವ ಬಗ್ಗೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ವ್ಯಕ್ತವಾಗಿರುವ ವರದಿ ಮತ್ತು ಪ್ರತಿಕ್ರಿಯೆಗಳ ಬಗ್ಗೆ ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುನ್ನಾಸಿರ್ ಲಕ್ಕಿಸ್ಟಾರ್ ಮಾಧ್ಯಮ ಹೇಳಿಕೆಯ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಮುಸ್ಲಿಮರು ಶುಕ್ರವಾರ ಮಧ್ಯಾಹ್ನ ನಮಾಜನ್ನು ಸಾಮೂಹಿಕವಾಗಿ ನಿರ್ವಹಿಸಬೇಕಾಗಿದೆ. ಅದಕ್ಕಾಗಿ ತಮ್ಮ ಮನೆ ಪರಿಸರದ ಅಥವಾ ಕೆಲಸ ಮಾಡುವ ಸ್ಥಳಕ್ಕೆ ಸಮೀಪದ ಮಸೀದಿಗೆ ತೆರಳಿ ನಮಾಝ್ ನಿರ್ವಹಿಸುತ್ತಾರೆ. ಸಾಮಾನ್ಯ ವಾಗಿ ಎಲ್ಲ ಮಸೀದಿಗಳಲ್ಲೂ ಏಕಕಾಲದಲ್ಲಿ ಸಾಮೂಹಿಕ ನಮಾಜು ನಿರ್ವಹಿಸಲು ಸಾಕಷ್ಟು ಸ್ಥಳಾವಕಾಶ ಇರುತ್ತದೆ. ನಗರ ಪ್ರದೇಶಗಳಿಗೆ ಹೆಚ್ಚಿನ ಸಾರ್ವಜನಿಕರು ಆಗಮಿಸುವುದರಿಂದ ನಗರದ ಮಸೀದಿಗಳಲ್ಲಿ ಹೆಚ್ಚಿನ ಜನಸಂದಣಿ ಇರುತ್ತದೆ. ಹಾಗಾಗಿ ಅಧಿಕ ಜನರು ಸೇರಿದಾಗ ಕಾಂಪೌಂಡ್ ಒಳಗಡೆ ಇರುವ ಮಸೀದಿ ಕಟ್ಟಡದ ಹೊರಭಾಗದ ಖಾಲಿ ಸ್ಥಳದಲ್ಲಿ ಚಾಪೆ ಹಾಕಿ ನಮಾಝ್ ನಿರ್ವಹಿಸಲು ಬಹುತೇಕ ಮಸೀದಿಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ಹೀಗಾಗಿ ಸಾರ್ವಜನಿಕ ರಸ್ತೆಯಲ್ಲಿ ನಮಾಜು ನಿರ್ವಹಿಸುವ ಅಗತ್ಯವೇ ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಮಸೀದಿಯ ಕಾಂಪೌಂಡ್ ಹೊರಗಡೆ ಅಥವಾ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುವಂತೆ ನಮಾಝ್ ನಿರ್ವಹಿಸಲು ಇಸ್ಲಾಮಿನ ನಿಯಮಗಳಲ್ಲಿ ಅವಕಾಶ ಇಲ್ಲ. ಆದರೆ ಕಂಕನಾಡಿ ಮಸೀದಿಯ ಒಳಭಾಗದಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಲು ಸ್ಥಳಾವಕಾಶದ ಕೊರತೆಯಾದಾಗ ಮಸೀದಿಯ ಪಕ್ಕದ ರಸ್ತೆಯ ಒಂದು ಬದಿಯಲ್ಲಿ ನಮಾಝ್ ನಿರ್ವಹಿಸಿದ್ದಾರೆ. ಆದರೆ ಈ ಘಟನೆ ತಕ್ಷಣಕ್ಕೆ ಮಸೀದಿ ಸಮಿತಿಯ ಗಮನಕ್ಕೆ ಬಂದಿರುವುದಿಲ್ಲ. ಮುಂದಿನ ದಿನಗಳಲ್ಲಿ ಈ ಮಸೀದಿ ಆವರಣದ ಹೊರಗಿನ ರಸ್ತೆಯಲ್ಲಿ ಯಾರೂ ನಮಾಝ್ ನಿರ್ವಹಿಸದಂತೆ ಸೂಕ್ತ ವ್ಯವಸ್ಥೆಯನ್ನು ಮಸೀದಿ ಆಡಳಿತ ಸಮಿತಿ ಮಾಡಲಿದೆ ಎಂದು ತಿಳಿಸಿದ್ದಾರೆ.

ಆದರೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿರುವುದು ಖಂಡನೀಯವಾಗಿದೆ. ಜಿಲ್ಲೆಯಲ್ಲಿ ನಡೆಯುವ ಹಲವು ಧಾರ್ಮಿಕ ಉತ್ಸವ, ಕಾರ್ಯಕ್ರಮಗಳಲ್ಲಿ ಪೂರ್ತಿ ರಸ್ತೆಯನ್ನೇ ಬಂದ್ ಮಾಡಿ, ವಾಹನ ಸಂಚಾರವನ್ನು ಬೇರೆ ರಸ್ತೆಗೆ ತಿರುಗಿಸುವ ವಿದ್ಯಮಾನಗಳು ನಿರಂತರವಾಗಿ ನಡೆಯುತ್ತವೆ. ಹಾಗಾಗಿ ಪೊಲೀಸ್ ಇಲಾಖೆಯ ಈ ಕ್ರಮವನ್ನು ಮತ್ತು ನಿಯಮವನ್ನು ಜಿಲ್ಲೆಯಲ್ಲಿ ಸಾರ್ವಜನಿಕ ರಸ್ತೆಯಲ್ಲಿ ನಡೆಯುವ ಎಲ್ಲ ಧಾರ್ಮಿಕ ಸ್ಥಳಗಳು, ಆಚರಣೆ, ಉತ್ಸವಗಳಿಗೂ ಅನ್ವಯಿಸಿ ಕ್ರಮ ತೆಗೆದುಕೊಳ್ಳಬೇಕು‌ ಎಂದು ಅಬ್ದುನ್ನಾಸಿರ್ ಲಕ್ಕಿಸ್ಟಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X