Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ...

ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ ಪ್ರಕಟ

ಶ್ರೀಧರ ಹಂದೆ, ಎಂ.ಕೆ.ರಮೇಶ್ ಆಚಾರ್ಯರಿಗೆ ಯಕ್ಷಮಂಗಳ ಪ್ರಶಸ್ತಿ, ಕಲ್ಚಾರ್ ಅವರ ಪೀಠಿಕಾ ಪ್ರಕರಣ ಗ್ರಂಥಕ್ಕೆ ಕೃತಿ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ20 Jun 2024 3:54 PM IST
share
ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ ಪ್ರಕಟ

ಕೊಣಾಜೆ, ಜೂ.20: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2022-23ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಯು ಪ್ರಕಟಗೊಂಡಿದ್ದು, ಯಕ್ಷಮಂಗಳ ಪ್ರಶಸ್ತಿಗೆ ಮಕ್ಕಳ ಮೇಳ ಸಾಲಿಗ್ರಾಮದ ಸಂಚಾಲಕರು, ಹಿರಿಯ ಯಕ್ಷಗಾನ ಕಲಾವಿದ, ಸಂಘಟಕ ಶ್ರೀಧರ ಹಂದೆ ಹಾಗೂ ತೆಂಕು ಮತ್ತು ಬಡಗುತಿಟ್ಟಿನ ಹಿರಿಯ ಸ್ತ್ರೀವೇಷ ಕಲಾವಿದ ಎಂ.ಕೆ.ರಮೇಶ್ ಆಚಾರ್ಯ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ರಾಧಾಕೃಷ್ಣ ಕಲ್ಚಾರ್ ಅವರ 'ಪೀಠಿಕಾ ಪ್ರಕರಣ' ಕೃತಿಯು ಆಯ್ಕೆಯಾಗಿದೆ.

ಯಕ್ಷಮಂಗಳ ಪ್ರಶಸ್ತಿಯು 25,000 ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಸನ್ಮಾನಗಳನ್ನೊಳಗೊಂಡಿದೆ. ಯಕ್ಷಮಂಗಳ ಕೃತಿ ಪ್ರಶಸ್ತಿಯು 10,000 ನಗದು, ಪ್ರಶಸ್ತಿ, ಸ್ಮರಣಿಕೆಗಳನ್ನು ಒಳಗೊಂಡಿದೆ.

ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ನೇತೃತ್ವದಲ್ಲಿ ಪ್ರೊ.ಪಾದೆಕಲ್ಲು ವಿಷ್ಣುಭಟ್ , ಯಕ್ಷಗಾನ ಸಂಘಟಕರ ಮುರಲೀ ಕಡೇಕಾರ್ ಹಾಗೂ ಕೇಂದ್ರದ ನಿರ್ದೇಶಕರಾದ ಡಾ.ಧನಂಜಯ ಕುಂಬ್ಳೆ ಯವರನ್ನು ಒಳಗೊಂಡಿರುವ ಆಯ್ಕೆ ಸಮಿತಿಯ ಸಭೆಯಲ್ಲಿ ಈ ಹೆಸರುಗಳನ್ನು ಸರ್ವಾನುಮತದಿಂದ ಶಿಫಾರಸು ಮಾಡಲಾಯಿತು.

ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಯಕ್ಷಮಂಗಳ ಪ್ರಶಸ್ತಿ ಪ್ರದಾನ ಮಾಡಲಾಗುವುದು ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ವಿಜೇತರ ಪರಿಚಯ

ಶ್ರೀಧರ ಹಂದೆ:

ಬಡಗುತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ ಹಿರಿಯ ಕಲಾವಿದರಾಗಿ, ಯಕ್ಷಗಾನ ಸಂಘಟಕರಾಗಿ ಗುರುತಿಸಿರುವ ಶ್ರೀಧರ ಹಂದೆ ಮಕ್ಕಳ ಯಕ್ಷಗಾನ ಮೇಳವೆಂಬ ಪರಿಕಲ್ಪನೆಯನ್ನು ಮೊಟ್ಟ ಮೊದಲ ಬಾರಿ ಸಾಕಾರಗೊಳಿಸಿದವರು. ಉಪನ್ಯಾಸಕರಾಗಿ, ಮುಖ್ಯೋಪಧ್ಯಾಯರಾಗಿ ಸೇವೆ ಸಲ್ಲಿಸಿದ ಇವರು 1991ರಲ್ಲಿ ರಾಷ್ಟ್ರಪತಿ ಶಂಕರ್ ದಯಾಳ್ ಶರ್ಮರಿಂದ ಅತ್ಯುತ್ತಮ ಶಿಕ್ಷಕ ರಾಷ್ಟ್ರಪತಿ ಪಡೆದಿರುತ್ತಾರೆ. ಮಕ್ಕಳಿಗೆ ಯಕ್ಷಕಲೆಯನ್ನು ಶಾಸ್ತ್ರೀಯವಾಗಿ ತರಬೇತಿ ನೀಡಿದ್ದಾರೆ. ಭಾರತ ಮಾತ್ರವಲ್ಲ ಅಮೆರಿಕ, ಬಹರೈನ್, ಲಂಡನ್, ಮ್ಯಾಂಚೆಸ್ಟರ್ ಮುಂತಾದೆಡೆ ಪ್ರದರ್ಶನ ನೀಡುವ ಮೂಲಕ ಯಕ್ಷಗಾನವನ್ನು ವಿಶ್ವ ವ್ಯಾಪಿಗೊಳಿಸಲು ಶ್ರಮಿಸಿದವರು. ಕಳೆದ 43 ವರ್ಷಗಳಲ್ಲಿ 2000ಕ್ಕೂ ಮಿಕ್ಕಿ ಮಕ್ಕಳ ಯಕ್ಷ ಪ್ರದರ್ಶನ ನೀಡಿದ ಕೀರ್ತಿ ಇವರದ್ದು. ಯಕ್ಷಗಾನ ಭಾಗವತ, ಗಮಕಿ, ಕವಿ, ನಟ-ನಿರ್ದೆಶಕ, ನಾಟಕಕಾರ, ಸಂಘಟಕನಾಗಿಯೂ ಗುರುತಿಸಿಕೊಂಡಿರುವ ಇವರು ಯಕ್ಷಗಾನ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ.

ಎಂ.ಕೆ.ರಮೇಶ್ ಆಚಾರ್ಯ:

ತೆಂಕು ಹಾಗೂ ಬಡಗುತಿಟ್ಟು ಯಕ್ಷಗಾನ ರಂಗದ ಸರ್ವ ಸಮರ್ಥ ಸ್ತ್ರೀವೇಷ ಕಲಾವಿದರಾಗಿರುವ ಎಂ.ಕೆ.ರಮೇಶ್ ಆಚಾರ್ಯ ಯಕ್ಷಗಾನ ತಾಳಮದ್ದಳೆಯ ಅರ್ಥಧಾರಿ, ಯಕ್ಷಗುರು, ಪ್ರಸಂಗಕರ್ತರಾಗಿಯೂ ಗುರುತಿಸಿದ್ದಾರೆ. ಸಾಂಪ್ರದಾಯಿಕ ನೆಲೆಯಲ್ಲಿಯೇ ಪೌರಾಣಿಕ ಪಾತ್ರಗಳನ್ನು ಯಕ್ಷಗಾನ ರಂಗಭೂಮಿಯಲ್ಲಿ ಪ್ರದರ್ಶಿಸುವ. ಎಂ.ಕೆ.ಆಚಾರ್ಯ ಅವರು ಸ್ತ್ರೀಪಾತ್ರಕೊಪ್ಪುವ ರೂಪ, ಮಧುರ ಕಂಠ, ಆಂಗಿಕ ಲಾಲಿತ್ಯ, ಪ್ರಗಲ್ಭ ಪಾಂಡಿತ್ಯ, ಸಶಕ್ತ ರಂಗನಡೆಯೊಂದಿಗೆ ಸ್ತ್ರೀಪಾತ್ರಧಾರಿಯಾಗಿ ಜನಮೆಚ್ಚುಗೆ ಗಳಿಸಿದ್ದರು. ಮಂದಾರ್ತಿ, ಧರ್ಮಸ್ಥಳ, ಸುರತ್ಕಲ್, ಸಾಲಿಗ್ರಾಮ, ಸೌಕೂರು, ಪೆರ್ಡೂರು, ಮಂಗಳಾದೇವಿ ಮೇಳಗಳಲ್ಲಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಇವರ ಚಂದ್ರಮತಿ, ದ್ರೌಪದಿ, ರುಕ್ಮಿಣಿ, ಶಾಂತಲೆ, ಸೀತೆ, ಮೇನಕೆ, ಸೈರೇಂದ್ರಿ ಮೊದಲಾದ ಸ್ತ್ರೀಪಾತ್ರಗಳು ಕಲಾರಸಿಕರ ಮನೆಗೆದ್ದಿವೆ. ಉತ್ತಮ ಅರ್ಥಧಾರಿಯಾಗಿ, ಪ್ರಸಂಗಕರ್ತರಾಗಿಯೂ ಗುರುತಿಸಿಕೊಂಡಿರುವ ಇವರು ಅನೇಕ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣವನ್ನೂ ನೀಡಿ ಯಕ್ಷಗಾನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಕಲಾವಿದರಾಗಿದ್ದಾರೆ.

'ಪೀಠಿಕಾ ಪ್ರಕರಣ' ಗ್ರಂಥ:

ಖ್ಯಾತ ಅರ್ಥಧಾರಿ ಹಾಗೂ ಲೇಖಕರಾಗಿರುವ ರಾಧಾಕೃಷ್ಣ ಕಲ್ಚಾರ್ ಅವರು ಈಗಾಗಲೇ ಪರಕಾಯ ಪ್ರವೇಶ, ಉಲಿಯ ಉಯ್ಯಾಲೆ, ಅರ್ಥಾಲೋಕ ಮೊದಲಾದ ಕೃತಿಗಳ ಮೂಲಕ ಪ್ರಸಿದ್ಧರಾಗಿದ್ದು 'ಪೀಠಿಕಾ ಪ್ರಕರಣ' ಇವರ ಇತ್ತೀಚೆಗಿನ ಒಂದು ಅಪೂರ್ವ ಕೃತಿಯಾಗಿದೆ. ಇದರಲ್ಲಿ ಮೂವತ್ತೆಂಟು ಪ್ರಸಂಗಗಲ್ಲಿ ಬರುವ ಆಯ್ದ 140 ಪಾತ್ರಗಳ ಈ ಪೀಠಿಕೆ ಯಕ್ಷಗಾನ ಅರ್ಥಧಾರಿಗಳಿಗೆ ಮತ್ತು ವೇಷಧಾರಿಗಳಿಗೆ ಕೈ ದೀವಿಗೆಯಾಗಿದೆ. ಯಕ್ಷಗಾನ ಅರ್ಥಗಾರಿಕೆಯ ಮೌಲಿಕ ಸಂಗತಿಗಳನ್ನು, ವಿಶಿಷ್ಟ ಶಕ್ತಿ ಸಾಮರ್ಥ್ಯವನ್ನು ಕಲ್ಚಾರ್ ಈ ಪೀಠಿಕೆಗಳಲ್ಲಿ ನಿರೂಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X