Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತುಂಬೆಯಲ್ಲಿ ಸಂಸ್ಥಾಪಕರ ದಿನಾಚರಣೆ| ಡಾ....

ತುಂಬೆಯಲ್ಲಿ ಸಂಸ್ಥಾಪಕರ ದಿನಾಚರಣೆ| ಡಾ. ತುಂಬೆ ಮೊಯ್ದಿನ್‌ರಿಗೆ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ24 Jun 2024 5:03 PM IST
share
ತುಂಬೆಯಲ್ಲಿ ಸಂಸ್ಥಾಪಕರ ದಿನಾಚರಣೆ| ಡಾ. ತುಂಬೆ ಮೊಯ್ದಿನ್‌ರಿಗೆ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ

ತುಂಬೆ: ಡಾ. ಬಿ. ಅಹ್ಮದ್ ಹಾಜಿ ಅವರು ತುಂಬೆ ಗ್ರಾಮೀಣ ಪರಿಸರದಲ್ಲಿ 1964ರಲ್ಲಿ ಉದ್ಯಮವನ್ನು ಸ್ಥಾಪಿಸಿ, 1988ರಲ್ಲಿ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳಿಗೆ ಬುನಾದಿ ಹಾಕಿ ಅರ್ಹ ಪ್ರತಿಭಾವಂತ ಮತ್ತು ಗ್ರಾಮೀಣ ಬಡ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿರುವುದು ಗಮನಾರ್ಹ ಸಂಗತಿಯಾಗಿದೆ. ಯಾವುದೇ ಭೇದವಿಲ್ಲದೆ ಸದ್ಭಾವ- ಸಾಮರಸ್ಯದ ಹಾದಿಯಲ್ಲಿ ನಡೆದ ಹಾಜಿ ಅವರ ನಡೆ ಎಲ್ಲರಿಗೂ ಆದರ್ಶ ಹಾಗೂ ಸ್ಫೂರ್ತಿಯಾಗಿದೆ ಎಂಬುದಾಗಿ ಮಂಗಳೂರು ವಿಶ್ವವಿದ್ಯಾನಿಲಯದಿಂದ 2024ರ ವರ್ಷದ ಗೌರವ ಡಾಕ್ಟರೇಟ್ ಪಡೆದ ಅಲ್ಮಾನ್ ಯು.ಎ.ಇ ಯಲ್ಲಿನ ಗಲ್ಫ್ ಮೆಡಿಕಲ್ ಯುನಿವರ್ಸಿಟಿಯ ಕುಲಾಧಿಪತಿ ಹಾಗೂ ತುಂಬೆ ಗ್ರೂಪ್ ನ ಸಂಸ್ಥಾಪಕ ಡಾ. ತುಂಬೆ ಮೊಯ್ದಿನ್ ಹೇಳಿದರು.

ಅವರು ತುಂಬೆ ಪದವಿ ಪೂರ್ವ ಕಾಲೇಜಿನ ಶಬನಾ ಬ್ಲಾಕ್ ಅಡಿಟೋರಿಯಂನಲ್ಲಿ ಏರ್ಪಡಿಸಿದ್ದ ಸಂಸ್ಥಾಪಕರ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಅವರು ಮಾತನಾಡುತ್ತ, ತಾನು ತನ್ನ ತಂದೆಯವರು ಸದುದ್ದೇಶದಿಂದ ಹಾಗೂ ದೂರ ದೃಷ್ಟಿಯನ್ನಿರಿಸಿ ಗ್ರಾಮೀಣ ಫಲಾನುಭವಿಗಳಿಗಾಗಿಯೇ ಸ್ಥಾಪಿಸಿದ ಈ ಸಂಸ್ಥೆಯ ಅಭಿವೃದ್ಧಿಗಾಗಿ ಕೋವಿಡ್ ಪೂರ್ವದಲ್ಲಿ ನೀಡುತ್ತಿದ್ದ ಸಹಾಯವನ್ನು ಮತ್ತೆ ಮುಂದುವರಿಸುವುದಾಗಿ ಹೇಳಿದರಲ್ಲದೆ, ತುಂಬೆ ಕಾಲೇಜಿನೊಂದಿಗೆ ಈ ಹಿಂದೆ ಮಾಡಿರುವ ಒಡಂಬಡಿಕೆಯಂತೆ ಓರ್ವ ಪ್ರತಿಭಾನ್ವಿತ ವಿದ್ಯಾರ್ಥಿ/ನಿಗೆ ಉಚಿತ ಎಂ.ಬಿ.ಬಿ.ಎಸ್. ವೈದ್ಯಕೀಯ ಶಿಕ್ಷಣಕ್ಕೆ ಈ ವರ್ಷವೂ ಆಯ್ಕೆ ಮಾಡಿರುತ್ತೇನೆ ಎಂದರು.


ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಬಿ. ಅಬ್ದುಲ್ ಸಲಾಂ ಮಾತನಾಡಿ ಗಲ್ಸ್ ಮೆಡಿಕಲ್ ಯುನಿವರ್ಸಿಟಿಯ ಕುಲಾಧಿಪತಿ ಡಾ. ತುಂಬೆ ಮೊಯ್ದಿನ್ ಅವರು ನಮ್ಮ ಸಂಸ್ಥೆಯ ಓರ್ವ ವಿದ್ಯಾರ್ಥಿಗೆ ನೀಡುವ ಎಂ.ಬಿ.ಬಿ.ಎಸ್. ಉಚಿತ ಸೀಟು ಅಲ್ಲದೆ ಮುಂದಿನ ಶೈಕ್ಷಣಿಕ ವರ್ಷದಿಂದ ಫಾರ್ಮಸಿ, ಫಿಸಿಯೋಥೆರಪಿ ಹಾಗೂ ಹೆಲ್ತ್ ಕೇರ್ ಮ್ಯಾನೆಜ್ ಮೆಂಟ್ ನಲ್ಲಿ ತಲಾ ಒಂದು ಸೀಟನ್ನು ಮೆರಿಟ್ ಆಧಾರದಲ್ಲಿ ನೀಡಲು ಒಪ್ಪಿರುತ್ತಾರೆ ಎಂದು ತಿಳಿಸಿದರು ಹಾಗೂ ಡಾ. ತುಂಬೆ ಮೊಯ್ದಿನ್ ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ದ್ವಿತೀಯ ಪಿ.ಯು.ಸಿ. ಕಲಾ, ವಿಜ್ಞಾನ ವಿಭಾಗದ 100% ವಾಣಿಜ್ಯ ವಿಭಾಗದ 99% ಹಾಗೂ ಅಂಗ್ಲ ಮತ್ತು ಕನ್ನಡ ಮಾಧ್ಯಮದ 10ನೇ ತರಗತಿಯಲ್ಲಿ 100% ಫಲಿತಾಂಶ ತಂದ ಬೋಧಕರನ್ನು ಮತ್ತು ಸಾಧನೆಗೆ ಶ್ರಮಿಸಿದ ಬೋಧಕ -ಬೋಧಕೇತರ ಸಿಬ್ಬಂದಿಗಳಿಗೆ ಗೌರವ ಧನವನ್ನು ನೀಡಿ ಪುರಸ್ಕರಿಸಿದರು.

ಇದೇ ವೇಳೆ ವಿಭಾಗವಾರು ಟಾಪರ್ ಸ್ಥಾನ ಗಳಿಸಿದ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಾದ ಅಮಿತ್ ಶುಕ್ಲ, ಖತೀಜತ್ ರಾಹಿಲ, ಪ್ರಸನ್ನ ಕುಮಾರ್ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಾದ ಅಮೀನಾ ಶಹಬ, ಥೋಮನ್ ರೆಕ್ಸ್ ಫೆರ್ನಾಂಡಿಸ್‌, ಕಾವ್ಯಶ್ರೀ ಇವರನ್ನು ನಗದು ಪುರಸ್ಕಾರದೊಂದಿಗೆ ಗೌರವಿಸಲಾಯಿತು. ತುಂಬೆ ಪದವಿ ಪೂರ್ವ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲರಾದ ಕೆ. ಎನ್. ಗಂಗಾಧರ ಆಳ್ವ, ಶುಭಾಶಂಸನೆಗೈದರು.

ಇದೇ ಸಮಾರಂಭದಲ್ಲಿ ಮಂಗಳೂರು ವಿ.ವಿ. ಗೌರವ ಡಾಕ್ಟರೇಟ್‌ಗೆ ಪಾತ್ರರಾದ ಡಾ. ತುಂಬೆ ಮೊಯ್ದಿನ್ ಅವರಿಗೆ ಅವರ ತಾಯಿ ಬೀಪಾತುಮ್ಮ ಅಹ್ಮದ್ ಹಾಜಿಯವರು ಹಾರ ಹಾಕಿ ಸನ್ಮಾನಿಸಿದರು. ಟ್ರಸ್ಟೀ ಬಿ. ಎಂ. ಅಶ್ರಫ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹ್ಮದ್, ಉಪಾಧ್ಯಕ್ಷೆ ಮೋಹಿನಿ ಸುವರ್ಣ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಬಶೀರ್ ತಂಡೇಲ್, ಮ್ಯಾಕ್ಸಿಂ ಕುವೆಲ್ಲೊ, ಶಾಫಿ ಅಮೆಮಾರ್ ಹಾಗೂ ಬಿ.ಎ. ಐ.ಟಿ.ಐ.ಪ್ರಾಂಶುಪಾಲರಾದ ನವೀನ್ ಕುಮಾರ್, ನಿವೃತ್ತ ಶಿಕ್ಷಕರಾದ ಶ್ರೀನಿವಾಸ್ ಕೆ.. ರಾಜ ಶೆಟ್ಟಿ ಉಪಸ್ಥಿತರಿದ್ದರು.

ಅಂಗ್ಲ ಮಾಧ್ಯಮ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮಲ್ಲಿಕಾ ಶೆಟ್ಟಿ ಪ್ರತಿಭಾನ್ವಿತರ ಪಟ್ಟಿ ವಾಚಿಸಿ, ಪರಿಚಯಿಸಿದರು. ಕಚೇರಿ ಅಧೀಕ್ಷಕ ಬಿ. ಅಬ್ದುಲ್ ಕಬೀರ್ ಪ್ರಸ್ತಾವನೆಗೈದರು. ಪ್ರಾಂಶುಪಾಲ ವಿ. ಸುಬ್ರಹ್ಮಣ್ಯ ಭಟ್ ಸ್ವಾಗತಿಸಿದರು. ಶಿಕ್ಷಕ ಪದ್ಮನಾಭ ಉಪಾಧ್ಯಾಯ ನಿರೂಪಿಸಿದರು. ಕನ್ನಡ ಮಾಧ್ಯಮ ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಿದ್ಯಾ ಕೆ ವಂದಿಸಿದರು. ಶಿಕ್ಷಕಿಯರಾದ ಮೋಲಿ ಎಡ್ನಾ ಗೊನ್ಸಾಲ್ವಿಸ್, ಪ್ರತಿಮಾ, ಸೌಮ್ಯ ಪ್ರಾರ್ಥನೆಗೈದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X