Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಕ್ರಮ ಮರಳುಗಾರಿಕೆ ತಡೆಗಟ್ಟಲು ಆಗ್ರಹಿಸಿ...

ಅಕ್ರಮ ಮರಳುಗಾರಿಕೆ ತಡೆಗಟ್ಟಲು ಆಗ್ರಹಿಸಿ ದ.ಕ. ಡಿಸಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ24 Jun 2024 8:40 PM IST
share
ಅಕ್ರಮ ಮರಳುಗಾರಿಕೆ ತಡೆಗಟ್ಟಲು ಆಗ್ರಹಿಸಿ ದ.ಕ. ಡಿಸಿಗೆ ಮನವಿ

ಮಂಗಳೂರು, ಜೂ.24: ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು ಹಾಗೂ ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕೆಂದು ಒತ್ತಾಯಿಸಿ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ಹಾಗೂ ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದ ನಿಯೋಗ ದ.ಕ.ಜಿಲ್ಲಾಧಿಕಾರಿ ಅವರನ್ನು ಸೋಮವಾರ ಭೇಟಿಯಾಗಿ ಮನವಿ ಅರ್ಪಿಸಿದೆ.

ಉಳ್ಳಾಲ ತಾಲೂಕು, ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಪಾವೂರು ಉಳಿಯ ದ್ವೀಪ(ಕುದ್ರು) ದಲ್ಲಿ ಯಾವುದೇ ತರಹದ ಮರಳುಗಾರಿಕೆಗೆ ಅನುಮತಿ ಇಲ್ಲದಿದ್ದರೂ ಬಲಾಢ್ಯ ಮರಳು ಮಾಫಿಯಾ ಅಕ್ರಮವಾಗಿ ಮರಳುಗಾರಿಕೆ ವ್ಯಾಪಕವಾಗಿ ನಡೆಸುತ್ತಿರುವುದರಿಂದ ಇಡೀ ಉಳಿಯ ದ್ವೀಪ ಕೊಚ್ಚಿಹೋಗುವ ಭೀತಿಗೆ ಗುರಿಯಾಗಿದೆ.ಸುಮಾರು 55 ಕುಟುಂಬಗಳು ಹಲವು ತಲೆಮಾರುಗಳಿಂದ ವಾಸ ಇರುವ, ಕಾಂಡ್ಲಾ ಜಾತಿಯ ಸಸ್ಯವರ್ಗಗಳಿರುವ ಪರಿಸರದ ದೃಷ್ಟಿಯಿಂದ ಅತಿ ಸೂಕ್ಷ್ಮ ವಾಗಿರುವ ಉಳಿಯ ದ್ಚೀಪವನ್ನು ರಕ್ಷಿಸಲು ತಕ್ಷಣದಿಂದಲೇ ಅಕ್ರಮ ಮರಳುಗಾರಿಕೆಗೆ ಪೂರ್ಣ ರೀತಿಯ ಕಡಿವಾಣ ಹಾಕಬೇಕು, ಈ ವರೆಗೆ ನಿಯಮಗಳನ್ನು ಪೂರ್ತಿ ಉಲ್ಲಂಘಿಸಿ ಅರ್ಧ ದ್ವೀಪವನ್ನೇ ಕಬಳಿಸಿರುವ ಅಕ್ರಮ ಮರಳುಗಾರಿಕೆಯ ಹಿಂದಿರುವ ಶಕ್ತಿಗಳನ್ನು ಬಯಲಿಗೆಳೆಯಲು ತನಿಖೆಗೆ ಆದೇಶಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಪರಿಸರ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಗಳು ಈ ದ್ವೀಪದಲ್ಲಿ ಸರ್ವೇ ನಡೆಸಿ ಉಳಿಯ ದ್ವೀಪ (ಕುದ್ರು) ಪರಿಸರದ ದೃಷ್ಟಿಯಿಂದ ಅತಿ ಸೂಕ್ಷ್ಮ ಪ್ರದೇಶವಾಗಿದ್ದು, ಸಿಆರ್ ಜೆಡ್ - 1 ರಲ್ಲಿದೆ, ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ 2011 ರಂತೆ ಇಲ್ಲಿ ಮರಳುಗಾರಿಕೆಗೆ ಅವಕಾಶ ಇರುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದರೂ ಕಳೆದ ಎರಡು ದಶಕಗಳಿಂದ ಉಳಿಯ ಕುದ್ರುವಿನಲ್ಲಿ ಪೊಲೀಸ್ ಹಾಗೂ ವಿವಿಧ ಇಲಾಖೆಗಳು, ರಾಜಕೀಯ ಹಿತಾಸಕ್ತಿಗಳ ಬೆಂಬಲದೊಂದಿಗೆ ವ್ಯಾಪಕ ಪ್ರಮಾಣದಲ್ಲಿ ಮರಳು ದಂಧೆ ನಡೆಸುತ್ತಾ ಬಂದಿರುತ್ತಾರೆ. 2014ರಲ್ಲಿ ದ.ಕ. ಜಿಲ್ಲಾಧಿಕಾರಿಯಾಗಿದ್ದ ಎ.ಬಿ. ಇಬ್ರಾಹಿಂ ರವರು ಅಕ್ರಮ ಮರಳುಗಾರಿಕೆ ಕುರಿತಾದ ಸತತ ದೂರಿನ ಹಿನ್ನಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ ಆಗಿರುವ ಅನಾಹುತಗಳನ್ನು ಕಂಡು ದ್ವೀಪದ ಸುತ್ತಲ ಒಂದು ಕೀ ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮರಳುಗಾರಿಕೆ ನಿಷೇಧಿಸಿ 2014, ನ.28ರಂದು ಆದೇಶ ಹೊರಡಿಸಿರುತ್ತಾರೆ.

ಒಂದಿಷ್ಟು ಕಾಲ ಸ್ಥಗಿತಗೊಂಡಿದ್ದ ಮರಳುಗಾರಿಕೆ ದಂಧೆ ಇತ್ತೀಚಿನ ವರ್ಷಗಳಲ್ಲಿ ಮತ್ತೆ ಆರಂಭಗೊಂಡಿದೆ. ಈಗಿನ ಒಂದೆ ರಡು ವರ್ಷಗಳಲ್ಲಿ ಉಳಿಯ ಕುದ್ರುವಿನ ಸುತ್ತಲೂ ದಿಬ್ಬದಂತಿದ್ದು ದ್ವೀಪದ ರಕ್ಷಾ ಕವಚದಂತಿರುವ ದಿಬ್ಬದಂತಹ ಭಾಗದಲ್ಲಿ ರುವ ಕಾಂಡ್ಲಾ ಜಾತಿಯ ಸಸ್ಯಗಳನ್ನು ಕಿತ್ತು ಹಾಕಿ ಅಲ್ಲಿಂದ ಹಾರೆ, ಪಿಕಾಸಿಗಳ ಮೂಲಕ ನೇರವಾಗಿ ಮರಳನ್ನು ದಂಧೆ ಕೋರರು ಕಬಳಿಸುತ್ತಿದ್ದಾರೆ. ಈ ದಂಧೆಗೆ ಸ್ಥಳೀಯ ಪೊಲೀಸ್ ಠಾಣೆಯ ಶ್ರೀ ರಕ್ಷೆಯೂ ಇರುತ್ತದೆ. ದೂರು ನೀಡಿದಲ್ಲಿ ದೂರು ನೀಡಿದವರ ಪೂರ್ತಿ ವಿವರಗಳನ್ನು ಪೊಲೀಸರೇ ದಂಧೆಕೋರರಿಗೆ ತಲುಪಿಸುತ್ತಾರೆ.ಈ ರೀತಿಯ ಮರಳುಗಾರಿಕೆ ಯಿಂದ ಈಗಾಗಲೆ ಕುದ್ರುವಿನ ಭೂಪ್ರದೇಶ ಅರ್ಧಕ್ಕಿಳಿದಿದೆ. ನದಿಯ ಪಾತ್ರ ಅಗಲ, ಆಳಗೊಂಡಿದ್ದು ನದಿ ನೀರು ಒಳ ಭಾಗಕ್ಕೆ ಹರಿಯುತ್ತಿದೆ. ರಭಸದ ನೆರೆ ನೀರಿನ ಸಂದರ್ಭ ಉಳಿದ ಭಾಗಗಳು ಸವೆಯುವ ಸಾಧ್ಯತೆಗಳಿವೆ. ಹೀಗೆಯೆ ಮುಂದುವರಿದಲ್ಲಿ ಇಡೀ ಉಳಿಯ ದ್ವೀಪ ಕೆಲವೇ ವರ್ಷಗಳಲ್ಲಿ ಕಣ್ಮರೆಯಾಗುವ ಭೀತಿ ಎದುರಾಗಿದೆ ಎಂದು ಉಭಯ ಸಂಘಟನೆಗಳ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.

ಕೆಥೊಲಿಕ್ ಸಭಾದ ಅಧ್ಯಕ್ಷ ಆಲ್ವಿನ್ ಡಿಸೋಜ, ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ಸಂಚಾಲಕ ಮುನೀರ್ ಕಾಟಿಪಳ್ಳ, ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ವಿವಿಧ ಸಂಘಟನೆ ಗಳ ಮುಖಂಡರಾದ ಮಂಜುಳಾ ನಾಯಕ್, ಬಿ.ಶೇಖರ್,ಸುನಿಲ್ ಕುಮಾರ್ ಬಜಾಲ್,ಸಂತೋಷ್ ಬಜಾಲ್, ಸ್ಟಾನಿ ಲೋಬೋ, ಆಲ್ವಿನ್ ಮೊಂತೆರೋ, ಜೋನ್ ಡಿಸೋಜ, ಸ್ಟಾನ್ಲಿ ಡಿಕುನ್ನಾ ಹಾಗೂ ಸ್ಥಳೀಯರಾದ ಗಿಲ್ಬರ್ಟ್ ಡಿಸೋಜ, ಲವೀನಾ ಡಿಸೋಜ ಮುಂತಾದವರು ನಿಯೋಗದಲ್ಲಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X