Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಬಿಎಸ್‌ಎನ್‌ಎಲ್ ಜಮೀನು ಮಾರಾಟ!

ಮಂಗಳೂರು: ಬಿಎಸ್‌ಎನ್‌ಎಲ್ ಜಮೀನು ಮಾರಾಟ!

ವಾರ್ತಾಭಾರತಿವಾರ್ತಾಭಾರತಿ27 Jun 2024 8:34 PM IST
share
ಮಂಗಳೂರು: ಬಿಎಸ್‌ಎನ್‌ಎಲ್ ಜಮೀನು ಮಾರಾಟ!

ಮಂಗಳೂರು, ಜೂ.27: ನಷ್ಟದಲ್ಲಿರುವ ಭಾರತ್ ಸಂಚಾರ್ ನಿಗಮ ಲಿಮಿಟೆಡ್ (ಬಿಎಸ್‌ಎನ್‌ಎಲ್) ತನ್ನ ಆದಾಯವನ್ನು ವೃದ್ಧಿಸುವ ಸಲುವಾಗಿ ನಗರದ ಕದ್ರಿ ಹಿಲ್ಸ್ ಪಾರ್ಕ್ ರಸ್ತೆಯಲ್ಲಿರುವ ತನ್ನ ಜಮೀನನ್ನು ಮಾರಾಟ ಮಾಡುವ ಪ್ರಕ್ರಿಯೆ ನಡೆಸಲಾಗಿದೆ ಎಂದು ಬಿಎಸ್‌ಎನ್‌ಎಲ್ ಚೀಫ್ ಜನರಲ್ ಮ್ಯಾನೇಜರ್ ಉಜ್ವಲ್ ಗುಲ್ವಾನೆ ಹೇಳಿದ್ದಾರೆ.

ಬಿಎಸ್‌ಎನ್‌ಎಲ್ ಮಂಗಳೂರು ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕದ್ರಿಯಲ್ಲಿರುವ ಈ ಜಮೀನು ಸುಮಾರು 2 ಎಕರೆ ವಿಸ್ತೀರ್ಣ ಹೊಂದಿದೆ. ಹರಾಜಿನಲ್ಲಿ ಪಾಲ್ಗೊಳ್ಳುವವರು ಜುಲೈ 1ರ ಅಪರಾಹ್ನ 3 ಗಂಟೆಯೊಳಗೆ ಬಿಡ್ ಸಲ್ಲಿಸಬಹುದಾಗಿದೆ ಎಂದು ಹೇಳಿದರು.

ಅದಲ್ಲದೆ ಬಜಾಲ್ ಗ್ರಾಮದ ಎಕ್ಕೂರು ಸಮೀಪದ ಕೆಎಸ್ ರಾವ್ ನಗರ ಮತ್ತು ಕುಂಜತ್ತಬೈಲ್‌ನ ಮೈಕ್ರೋವೇವ್ ಸ್ಟಾಫ್ ಕ್ವಾಟ್ರಸ್ ಕಾಂಪೌಂಡ್ ಹಾಗೂ ಬೋಳಾರದ ಟೆಲಿಫೊನ್ ಎಕ್ಸ್‌ಚೇಂಜ್ ಕಾಂಪೌಂಡ್‌ನ ಜಮೀನನ್ನು ಕೂಡ ಮುಂದಿನ ದಿನಗಳಲ್ಲಿ ಮಾರಾಟ ಮಾಡುವ ಪ್ರಕ್ರಿಯೆ ನಡೆಸಲಾಗುವುದು ಎಂದು ಉಜ್ವಲ್ ಗುಲ್ವಾನೆ ಹೇಳಿದರು.

4ಜಿ ನೆಟ್‌ವರ್ಕ್: ಬಿಎಸ್‌ಎನ್‌ಎಲ್ 4ಜಿ ನೆಟ್‌ವರ್ಕ್‌ನ್ನು ದ.ಕ.ಜಿಲ್ಲಾದ್ಯಂತ ವಿಸ್ತರಿಸಲಾಗುವುದು. ಮುಂದಿನ ದಿನಗಳಲ್ಲಿ ಇದನ್ನು 5ಜಿಗೆ ಪರಿವರ್ತಿಸಬಹುದಾಗಿದೆ. ದ.ಕ.ಜಿಲ್ಲೆಯಲ್ಲಿ 4ಜಿ ಇದರ 412 ಮತ್ತು ಉಡುಪಿ ಜಿಲ್ಲೆಯಲ್ಲಿ 198 ಸಹಿತ ಒಟ್ಟು 610 ಟವರ್‌ಗಳನ್ನು ನಿರ್ಮಿಸುವ ಉದ್ದೇಶವಿದೆ. ಈಗಾಗಲೆ ಎರಡು ಜಿಲ್ಲೆಗಳಲ್ಲಿ 20 ಟವರ್‌ಗಳ್ನು 4ಜಿಗಾಗಿ ಪ್ರಯೋಗ ಪರೀಕ್ಷೆ ಮಾಡಲಾಗಿದೆ. ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮೊಬೈಲ್ ಸಂಪರ್ಕವೇ ಇಲ್ಲದ 173 ಹಳ್ಳಿಗಳಿಗೆ ನೇರವಾಗಿ 4ಜಿ ಸಂಪರ್ಕ ನೀಡಲಾಗುವುದು. ದ.ಕ.ಜಿಲ್ಲೆಯ ಎಳನೀರು ಗ್ರಾಮಕ್ಕೂ 4ಜಿ ಸಂಪರ್ಕ ನೀಡಲಾಗುತ್ತದೆ ಎಂದರು.

ಕೇಂದ್ರ ಸರಕಾರದ 4ಜಿ ಸ್ಯಾಚುರೇಶನ್ ಯೋಜನೆಯನ್ನು ಬಿಎಸ್‌ಎನ್‌ಎಲ್ ಕೈಗೆತ್ತಿಕೊಂಡಿವೆ. ಇದರ ಮೇಲ್ವಿಚಾರಣೆ ಯನ್ನು ಪ್ರಧಾನ ಮಂತ್ರಿ ಕಾರ್ಯಾಲಯದಿಂದ ನಡೆಸಲಾಗುತ್ತಿದೆ. ಈ ಯೋಜನೆಯ ಮೊದಲ ಹಂತದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡಿರುವ ಕಾರ್ಯಕ್ಷೇತ್ರದ ಗ್ರಾಮಾಂತರ ಭಾಗದಲ್ಲಿ 76 ಸ್ಥಳಗಳನ್ನು ಗುರುತಿಸಲಾಗಿದೆ. ಈವರೆಗೆ ಈ ಸ್ಥಳದಲ್ಲಿ ಯಾವುದೇ ಖಾಸಗಿ ಮೊಬೈಲ್ ಆಪರೇಟರ್‌ಗಳಿಂದ ನೆಟ್‌ವರ್ಕ್ ಕವರೇಜ್ ಲಭ್ಯವಿರುವುದಿಲ್ಲ. ದ.ಕ.ಜಿಲ್ಲೆಯಲ್ಲಿ 43 ಸ್ಥಳಗಳ ಪೈಕಿ 40 ಕಡೆಗಳಲ್ಲಿ ಮತ್ತು ಉಡುಪಿ ಜಿಲ್ಲೆಯಲ್ಲಿ 33 ಸ್ಥಳಗಳ ಪೈಕಿ 30 ಕಡೆ ಟವರ್ ನಿರ್ಮಾಣ ಕಾರ್ಯ ಪೂರ್ಣಗೊಂಡಿವೆ ಎಂದು ಉಜ್ವಲ್ ಗುಲ್ವಾನೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಎಸ್ಸೆನ್ನೆಲ್ ಹೊಸದಿಲ್ಲಿಯ ಸಿಜಿಎಂ ಪರಮೇಶ್ವರಿ ದಯಾಳ್, ಮಂಗಳೂರಿನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಎಸ್.ಜಿ. ದೇವಾಡಿಗ, ಹಿರಿಯ ಅಧಿಕಾರಿಗಳಾದ ನವೀನ್ ಗುಪ್ತಾ, ದೀಪಕ್ ಶರ್ಮಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X