Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ತುಂಬಿ ಹರಿಯಲಾರಂಭಿಸಿದ...

ಉಪ್ಪಿನಂಗಡಿ: ತುಂಬಿ ಹರಿಯಲಾರಂಭಿಸಿದ ಕುಮಾರಧಾರಾ, ನೇತ್ರಾವತಿ ನದಿ

ವಾರ್ತಾಭಾರತಿವಾರ್ತಾಭಾರತಿ27 Jun 2024 8:56 PM IST
share
ಉಪ್ಪಿನಂಗಡಿ: ತುಂಬಿ ಹರಿಯಲಾರಂಭಿಸಿದ ಕುಮಾರಧಾರಾ, ನೇತ್ರಾವತಿ ನದಿ

ಉಪ್ಪಿನಂಗಡಿ: ಇಲ್ಲಿ ಹರಿಯುತ್ತಿರುವ ಜೀವ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ಜೂ. 26ರ ಸಂಜೆಯ ಬಳಿಕ ತುಂಬಿ ಹರಿಯಲಾರಂಭಿಸಿದೆ. ತುಂಬಿ ಹರಿಯುವ ನದಿಯ ಪ್ರವಾಹದ ನೀರು ನದಿ ಪಾತ್ರದಿಂದ ಹೊರಗೆ ತೋಟಗಳಿಗೆ ನುಗ್ಗಿರುವುದು ಕಂಡು ಬಂದಿದೆ.

ಉಪ್ಪಿನಂಗಡಿಯಲ್ಲಿ ಹವಾಮಾನ ಇಲಾಖೆಯ ಪ್ರಕಾರ ಜೂ. 26ರಂದು 14 ಸೆಂಟಿ ಮೀಟರ್., 25ರಂದು 9 ಸೆ.ಮೀ., 24ರಂದು 5 ಸೆ.ಮೀ. ಮಳೆ ಸುರಿದಿರುವುದು ದಾಖಲಾಗಿದೆ. ಕುಮಾರಧಾರಾ ಮತ್ತು ನೇತ್ರಾವತಿ ಎರಡೂ ನದಿ ಸಂಗಮ ಸ್ಥಾನದ ಬಳಿಯಲ್ಲಿ ಶಂಭೂರು ಡ್ಯಾಂನವರು ಅಳವಡಿಸದಿರುವ ಅಳತೆ ಮಾಪನದಲ್ಲಿ ದಾಖಲಾಗಿರುವ ಪ್ರಕಾರ ನದಿ ಸಮುದ್ರ ಮಟ್ಠದಿಂದ 27 ಮೀಟರ್ ಎತ್ತರದಲ್ಲಿ ಹರಿಯುತ್ತಿರುವುದು ಕಂಡು ಬಂದಿದೆ. ಇಲ್ಲಿನ ಅಪಾಯದ 31 ಮೀಟರ್ ಆಗಿರುತ್ತದೆ.

ನೇತ್ರಾವತಿ ನದಿ ಪಾತ್ರದಲ್ಲಿರುವ ಪಂಜಾಲ, ಮಠ, ಹಳೇಗೇಟು, ಕೂಟೇಲು ಮೊದಲಾದ ತಗ್ಗು ಪ್ರದೇಶದಲ್ಲಿ ಪ್ರವಾಹದ ನೀರು ನದಿ ಪಾತ್ರದಿಂದ ಹೊರಗೆ ಹರಿದು ಬರುತ್ತಿದ್ದುದು ಕಂಡು ಬಂದಿದೆ. ಕೂಟೇಲು ಸೇತುವೆ ಬಳಿಯಿಲ್ಲಿ ಕೆಮ್ಮಾರ ಕಡೆ ಯಿಂದ ಬರುವ ತೋಡಿನ ನೀರನ್ನು ನೇತ್ರಾವತಿ ನದಿ ತುಂಬಿರುವುದರಿಂದಾಗಿ ಆ ಕಡೆಯಿಂದ ಬಂದ ನೀರನ್ನು ತನ್ನತ್ತ ಸೆಳೆದೆಕೊಳ್ಳದೆ ತಡೆ ಒಡ್ಡಿ ನಿಂತಿರುವುದು ಕಂಡು ಬಂದಿದೆ.

ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ಉಕ್ಕಿ ಹರಿಯುತ್ತಿರುವ ಪ್ರವಾಹದ ನೀರು ಅಡೇಕಲ್, ಕುರ್ಪೇಲು, ನಟ್ಟಿ ಬೈಲು ಇನ್ನೊಂದು ಭಾಗದಲ್ಲಿ ನೆಕ್ಕಿಲಾಡಿ, ಪಂಪುಹೌಸ್, ದರ್ಬೆ, ಮೈಂದಡ್ಕ ಮೊದಲಾದ ಕಡೆಯಲ್ಲಿ ಕೃಷಿ ತೋಟದೊಳಗೆ ನುಗ್ಗಿ ತೋಟಗಳು ಜಲಾವೃತವಾಗಿರುತ್ತದೆ.

ಜೂ. 26ರ ಮಧ್ಯಾಹ್ನದ ಬಳಿಕ ಎರಡೂ ನದಿಯಲ್ಲಿ ಒಂದೇ ರೀತಿಯಲ್ಲಿ ನೀರು ಏರಿಕೆಯಾಗಿದ್ದು, ಪ್ರವಾಹದ ರೀತಿಯಲ್ಲಿ ಹರಿದು ಬಂದಿತ್ತು. ನೇತ್ರಾವತಿ ನದಿ ಪಾತ್ರದಲ್ಲಿರುವ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸ್ನಾನಘಟ್ಟದ 36 ಮೆಟ್ಟಿಲುಗಳ ಪೈಕಿ ಸಂಜೆಯ ಹೊತ್ತಿಗೆ 18 ಮೆಟ್ಟಿಲು ಮುಳುಗಡೆಯಾಗಿತ್ತು. ಆ ಬಳಿಕ ಪ್ರವಾಹ ಕಡಿಮೆ ಆಗುತ್ತಾ ಬಂದು ಜೂ. 27ರಂದು ಬೆಳಿಗ್ಗೆ 17 ಮೆಟ್ಟಿಲು ಮುಳುಗಡೆ ಆಗಿತ್ತು. ಆ ಬಳಿಕ ಮಧ್ಯಾಹ್ನ ಹೊತ್ತಿಗೆ ಮತ್ತೆ ನದಿ ನೀರು ಏರಿಕೆಯಾಗಿ 21 ಮೆಟ್ಟಿಲು ಮುಳುಗಡೆಯಾಗಿ 15 ಮೆಟ್ಟಿಲು ಕಾಣುತ್ತಿತ್ತು. ರಾತ್ರಿ 7 ಗಂಟೆಯ ಹೊತ್ತಿಗೆ ನೀರಿನ ಪ್ರವಾಹ ಮತ್ತೆ ಕಡಿಮೆಯಾಗಿದ್ದು, 19 ಮೆಟ್ಟಿಲು ಮುಳುಗಡೆಯಾಗಿ, 17 ಮೆಟ್ಟಿಲು ಕಾಣುವಂತಿತ್ತು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X