Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಪತ್ರಕರ್ತರ ಯೋಗ ತರಬೇತಿ ಶಿಬಿರ...

ಮಂಗಳೂರು: ಪತ್ರಕರ್ತರ ಯೋಗ ತರಬೇತಿ ಶಿಬಿರ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ29 Jun 2024 4:09 PM IST
share
ಮಂಗಳೂರು: ಪತ್ರಕರ್ತರ ಯೋಗ ತರಬೇತಿ ಶಿಬಿರ ಸಮಾರೋಪ

ಮಂಗಳೂರು, ಜೂ.29: ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಇಲಾಖೆಯ ಎಸ್ಪಿ ನಟರಾಜ್ ಹೇಳಿದ್ದಾರೆ.

ಅವರು ಶನಿವಾರ ಪತ್ರಿಕಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದೇವಿಕಾ ಯೋಗ ಕ್ಲಾಸ್ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ಇವರ ನೇತೃತ್ವದಲ್ಲಿ ಆಯೋಜಿಸಿದ್ದ ಪತ್ರಕರ್ತರ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಯೋಗಾಭ್ಯಾಸ ಎಂದರೆ ಕೇವಲ ದೈಹಿಕ ಅಂಗಾಂಗಗಳನ್ನು ಬಳಸಿ ಆಸನಗಳನ್ನು ಮಾಡುವುದು ಮಾತ್ರವಲ್ಲ, ಯೋಗದಿಂದ ನಮ್ಮ ಮನಸ್ಸು ಹಾಗೂ ನಮ್ಮ ಚಟುವಟಿಕೆಗಳನ್ನು ಹೆಚ್ಚು ಉತ್ಸಾಹದಿಂದ ಮಾಡಲು ಸಹಕಾರಿ. ಯೋಗ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಪೂರಕವಾಗಿದೆ ಎಂದರು.

ದೇವಿಕಾ ಯೋಗ ತರಬೇತಿ ಕೇಂದ್ರದ ಶಿಕ್ಷಕಿ ದೇವಿಕಾ ಪುರುಷೋತ್ತಮ ಮಾತನಾಡಿ, ಯೋಗ ತರಬೇತಿ ನೀಡುವವರು ವ್ಯಕ್ತಿಯ ಮಾನಸಿಕ, ದೈಹಿಕ ಸ್ಥಿತಿಯನ್ನು ಅರಿತುಕೊಂಡು ಪೂರಕವಾದ ಯೋಗ ತರಬೇತಿ ನೀಡಿದಾಗ ಆತನ ದೇಹದ ಅಂಗಾಂಗಗಳಲ್ಲಿ ಶಕ್ತಿ ತುಂಬಲು ಸಾಧ್ಯ ಮತ್ತು ಮಾನಸಿಕ ಆರೋಗ್ಯ ವರ್ಧನೆಗೆ ಸಹಾಯವಾಗುತ್ತದೆ ಎಂದರು.

ಐಎಂಎ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ.ಅವಿನ್ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, ಯೋಗದ ಮೂಲಕ ಮಾಡುವ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪೂರಕವಾದ ಚಟುವಟಿಕೆ ವೈದ್ಯಕೀಯ ಚಿಕಿತ್ಸೆಯಲ್ಲೂ ರೋಗಿಯ ರೋಗ ಗುಣಮುಖವಾಗಲು ಸಹಕಾರಿ ಎಂದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಉಪಾಧ್ಯಕ್ಷ ಆರಿಫ್ ಪಡುಬಿದ್ರೆ, ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿಯ ಸದಸ್ಯ ದಯಾ ಕುಕ್ಕಾಜೆ, ಪತ್ರಕರ್ತ ಗಿರಿಧರ ಶೆಟ್ಟಿ ಉಪಸ್ಥಿತರಿದ್ದರು.

ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

ಪತ್ರಕರ್ತರಿಗೆ ಯೋಗ ತರಬೇತಿ ಶಿಬಿರ ನಡೆಸಿಕೊಟ್ಟ ದೇವಿಕಾ ಪುರುಷೋತ್ತಮ್ ಅವರನ್ನು ಇದೇ ಸಂದರ್ಭ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ತಮಗೆ ನೀಡಿದ ಗೌರವಧನ, ಗುರು ಕಾಣಿಕೆಯನ್ನು ದೇವಿಕಾ ಪುರುಷೋತ್ತಮ ಇದೇ ಸಂದರ್ಭದಲ್ಲಿ ಅನ್ನಪೂರ್ಣೇಶ್ವರಿ ಅಂಧ ಕಲಾವಿದರ ಸಂಘದ ಕಲಾವಿದರಿಗೆ ಹಸ್ತಾಂತರಿಸಿದರು.

Tags

pressclub
share
ವಾರ್ತಾಭಾರತಿ
ವಾರ್ತಾಭಾರತಿ
Next Story
X