ಮಂಗಳೂರು: ಅಪಹರಣಕ್ಕೊಳಗಾದ ಕಾಲೇಜು ವಿದ್ಯಾರ್ಥಿನಿ ಕಾಸರಗೋಡಿನಲ್ಲಿ ಪತ್ತೆ
ಸಾಂದರ್ಭಿಕ ಚಿತ್ರ
ಮಂಗಳೂರು, ಜು.10: ನಗರದ ಪಾಂಡೇಶ್ವರ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಕಾಸರಗೋಡಿನ ಯುವಕ ಅಪಹರಿಸಿದ್ದು, ಈ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಸರಗೋಡಿನ ವಿದ್ಯಾನಗರ ನಿವಾಸಿ ಅಶ್ಫಾಕ್ ಎಂಬಾತ ಪ್ರಕರಣದ ಆರೋಪಿ ಎನ್ನಲಾಗಿದೆ.
ಯುವತಿ ಉಳ್ಳಾಲದ ಸಂಬಂಧಿಕರ ಮನೆಯಿಂದ ಕಾಲೇಜಿಗೆ ಹೋಗುತ್ತಿದ್ದು, ಜೂ.30ರಂದು ವಿದ್ಯಾರ್ಥಿನಿಯನ್ನು ಉಳ್ಳಾಲದಿಂದಲೇ ಅಪಹರಿಸಿ ಕೊಚ್ಚಿಗೆ ಕರೆದೊಯ್ದಿದ್ದ ಎಂದು ತಿಳಿದು ಬಂದಿದೆ.
ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಮತ್ತು ಯುವತಿಯನ್ನು ಕಾಸರಗೋಡಿನಲ್ಲಿ ಪತ್ತೆ ಮಾಡಿದ್ದಾರೆ. ಯುವತಿಯನ್ನು ನಗರದ ಸಲಹಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಆರೋಪಿ ಅಸ್ಫಾಕ್ ವಿರುದ್ಧ ಕಾಸರಗೋಡಿನ ನಾನಾ ಪೊಲೀಸ್ ಠಾಣೆಯಲ್ಲಿ 15ಕ್ಕೂ ಅಧಿಕ ಪ್ರಕರಣವಿದೆ. ಈತನಿಗೆ ಈ ಹಿಂದೆಯೇ ಮದುವೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Next Story