ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಮಂಗಳೂರು : ಪ್ರಸಕ್ತ (2024-25ನೇ) ಸಾಲಿನಲ್ಲಿ ಕರ್ನಾಟಕ ಹಜ್ ಭವನದಲ್ಲಿ ನಡೆಯಲಿರುವ ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅರ್ಜಿದಾರರು ಆ.31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣವನ್ನು ವೀಕ್ಷಿಸಬಹುದು ಅಥವಾ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ದ.ಕ.ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





