ಮಾದಕ ವಸ್ತು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪ; ಮೂವರ ಬಂಧನ

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಮೂವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ನಡೆದಿದೆ.
ಬಂಧಿತ ಆರೋಪಿಗಳನ್ನು ಮಂಚಿ ಗ್ರಾಮದ ನಿವಾಸಿ ದಾವೂದುಲ್ ಅಮೀರ್ (26), ಸಜಿಪ ಮುನ್ನೂರು ಗ್ರಾಮದ ನಂದಾವರ ಕೋಟೆ ನಿವಾಸಿ ರಾಫಿ (19), ಬಿ.ಮೂಡಾ ಗ್ರಾಮದ ಇರ್ಷಾದ್ (23) ಎಂದು ಹೆಸರಿಸಲಾಗಿದೆ.
ಇವರು ಕುಕ್ಕಾಜೆ ಜಂಕ್ಷನ್ ನಲ್ಲಿ ಮಾದಕ ವಸ್ತು ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದ್ದು ಮಾದಕ ವಸ್ತು ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಇವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Next Story





