ಬಂಟ್ವಾಳ: ದೇವಸ್ಥಾನದಿಂದ ನಗ - ನಗದು ಕಳವು

ಬಂಟ್ವಾಳ : ದೇವಸ್ಥಾನವೊಂದರಿಂದ ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮೂಡು ನಡುಗೋಡು ಗ್ರಾಮದ ಕರೆಂಕಿ ಎಂಬಲ್ಲಿ ನಡೆದಿದೆ.
ಮೂಡುನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬಾಗಿಲು ತೆರದು ಗರ್ಭಗುಡಿಗೆ ನುಗ್ಗಿದ ಕಳ್ಳರು ಗರ್ಭಗುಡಿಯಲ್ಲಿದ್ದ ದೇವರ ಮೂರ್ತಿಗೆ ಧರಿಸಿದ್ದ ಚಿನ್ನದ ಕರಿಮಣಿ ಸರ ಹಾಗೂ ಡಬ್ಬಿಯಲ್ಲಿದ್ದ ಹಣವನ್ನು ಕಳವು ಮಾಡಿದ್ದಾರೆ.
ಸುಮಾರು 2.5 ಪವನ್ ತೂಕದ ಚಿನ್ನದ ಕರಿಮಣಿ ಮತ್ತು ದೇವಸ್ಥಾನದ ಒಳಾಂಗಣದಲ್ಲಿದ್ದ ಕಾಣಿಕೆ ಡಬ್ಬಿಯಿಂದ ಅಂದಾಜು ರೂ.2000 ನಗದು ಕಳವು ಮಾಡಿದ್ದಾರೆ. ಕಳವಾಗಿರವ ಸೊತ್ತಿನ ಮೌಲ್ಯ ರೂಪಾಯಿ 1.42 ಲಕ್ಷ ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಠಾಣಾ ನಿರೀಕ್ಷಕ ಶಿವಕುಮಾರ್ ಹಾಗೂ ಎಸ್.ಐ. ಹರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





