ಸುರತ್ಕಲ್ ಬಂಟರ ಸಂಘದಿಂದ "ಆಟಿದ ಪೊರ್ಲು" ಅಭಿನಂದನಾ ಕಾರ್ಯಕ್ರಮ

ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ "ಆಟಿದ ಪೊರ್ಲು ಮತ್ತು ಅಭಿನಂದನಾ ಸಮಾರಂಭ"ವು ರವಿವಾರ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಚೇರ್ ಮ್ಯಾನ್ ವಿಕೆ ಸಮೂಹ ಸಂಸ್ಥೆಯ ಅಧ್ಯಕ್ಷ ಹಾಗೂ ಉದ್ಯಮಿ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಅವರು ಉದ್ಘಾಟಿಸಿ ಮಾತನಾಡಿ ಶುಭಹಾರೈಸಿದರು.
ಸಮಾರಂಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ವಿಶ್ವನಾಥ ಶೆಟ್ಟಿ ಕಟ್ಲ ಬಾಳಿಕೆ, ಸಮಾಜ ಸೇವಾ ಕ್ಷೇತ್ರದ ಸಾಧಕ ಉಮೇಶ್ ದೇವಾಡಿಗ, ಪೌರ ಕಾರ್ಮಿಕ ಅನ್ನು ಪಡ್ರೆ, ನಾಟಿವೈದ್ಯೆ ಸೇಸಮ್ಮ ಸುಭಾಷಿತ ನಗರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿದರು. ಅಭಿಮತ ಟಿವಿಯ ಆಡಳಿತ ನಿರ್ದೇಶಕಿ ಡಾ.ಮಮತಾ ಪಿ.ಶೆಟ್ಟಿ ದಿಕ್ಸೂಚಿ ಭಾಷಣಗೈದರು.
ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿ ಗಳಾಗಿ ಚಂದ್ರಿಕಾ ಹರೀಶ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಡಾ.ಸಚ್ಚಿದಾ ನಂದ ರೈ, ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯೆಕ್ಷೆ ಭವ್ಯ ಎ.ಶೆಟ್ಟಿ, ಉಪಾಧ್ಯಕ್ಷೆ ಸರೋಜ ತಾರಾನಾಥ್ ಶೆಟ್ಟಿ, ಕೋಶಾಧಿಕಾರಿ ಜ್ಯೋತಿ ಪ್ರವೀಣ್ ಶೆಟ್ಟಿ, ಸಂಘದ ಉಪಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಕೋಶಾಧಿಕಾರಿ ಅವಿನಾಶ್ ಶೆಟ್ಟಿ, ಮಾಜಿ ಅಧ್ಯಕ್ಷ ಸುಧಾಕರ್ ಎಸ್. ಪೂಂಜಾ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಸುಧಾಚಂದ್ರಶೇಖರ ಶೆಟ್ಟಿ, ಸವಿತಾ ಭವಾನಿ ಶಂಕರ್ ಶೆಟ್ಟಿ, ಅನೂಪ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಆಶಾ ಶೆಟ್ಟಿ ಶಿಬರೂರು ಪ್ರಾರ್ಥನೆಗೈದರು. ಮಹಿಳಾ ವೇದಿಕೆಯ ಕಾರ್ಯದರ್ಶಿ ಸುಜಾತ ಶೆಟ್ಟಿ ಕೃಷ್ಣಾಪುರ ಧನ್ಯವಾದ ಸಮರ್ಪಿಸಿದರು. ಬಳಿಕ ಸಂಘದ ಮಹಿಳಾ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.







