ಮಾದಕ ದ್ರವ್ಯ ಸೇವನೆ: ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರುತ್ತಿದ್ದ ಇಬ್ಬರು ಆರೋಪಗಳನ್ನು ಪುತ್ತೂರು ನಗರ ಠಾಣೆಯ ಪೊಲೀಸರು ರವಿವಾರ ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ತಾಲೂಕಿನ ಪಡ್ನೂರು ನಿವಾಸಿ ಮಹೇಶ್(26) ಮತ್ತುಪುತ್ತೂರು ತಾಲೂಕಿನ ಕಬಕ ನಿವಾಸಿ ಪ್ರಕಾಶ(36) ಬಂಧಿತ ಆರೋಪಿಗಳು.
ಪುತ್ತೂರು ನಗರ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಆಂಜನೇಯ ರೆಡ್ಡಿ, ಜಿ ವಿ ನೇತ್ರತ್ವದಲ್ಲಿ ನ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿತ್ತು. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
Next Story





