ದೇರಳಕಟ್ಟೆ: ಪಬ್ಲಿಕ್ ಸ್ಕೂಲ್ ನಲ್ಲಿ ಗಾಂಧಿ ಜಯಂತಿ ಆಚರಣೆ
ದೇರಳಕಟ್ಟೆ: ದೇರಳಕಟ್ಟೆ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಹಾಗೂ ಬದ್ರಿಯಾ ಜುಮಾ ಮಸೀದಿ ದೇರಳಕಟ್ಟೆ ಇದರ ಅಧೀನದಲ್ಲಿ ಇರುವ ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ನಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಯನ್ನು ಆಚರಿಸಲಾಯಿತು.
ಟ್ರಸ್ಟ್ ಅಧ್ಯಕ್ಷ ಹಾಜಿ ಡಿ.ಎಂ.ಸಿದ್ದೀಕ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಆರ್ ಅಹ್ಮದ್ , ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಐ., ಉಪಾಧ್ಯಕ್ಷ ಮೊಹಮ್ಮದ್ ಪುಷ್ಠಿ, ಸದಸ್ಯರಾದ ಡಿ.ಎಂ.ರಶೀದ್, ಹಾಜಿ ಅಬೂಬಕ್ಕರ್ ನಾಟೆಕಲ್,ಹಂಝ ಎಚ್.ಆರ್.,ಡಿ.ಇಲ್ಯಾಸ್ ಉಪಸ್ಥಿತರಿದ್ದರು.
ಸಹ ಶಿಕ್ಷಕಿ ರಹನಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶೃತಿ ಹೆಗ್ಡೆ ಸ್ವಾಗತಿಸಿದರು. ಟ್ರಸ್ಟ್ ಜೊತೆ ಕಾರ್ಯದರ್ಶಿ ಅಬ್ದುಲ್ ಮುತ್ತಲಿಬ್ ವಂದಿಸಿದರು.
Next Story