Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಟ್ಟಡ ಕಾರ್ಮಿಕರ ಪಿಂಚಣಿ ಬಿಡುಗಡೆಗೆ...

ಕಟ್ಟಡ ಕಾರ್ಮಿಕರ ಪಿಂಚಣಿ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ14 Oct 2024 10:51 PM IST
share
ಕಟ್ಟಡ ಕಾರ್ಮಿಕರ ಪಿಂಚಣಿ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ಮೂಡುಬಿದಿರೆ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ 2024ರ ಆಗಸ್ಟ್- ಸಪ್ಟೆಂಬರ್ ತಿಂಗಳಿಂದ ಮಾಸಿಕ ಪಿಂಚಣಿ ಸಿಗುತ್ತಿಲ್ಲ. ಕೂಡಲೇ ಪಿಂಚಣಿ ಹಣ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಶನ್ ದ.ಕ ಜಿಲ್ಲಾ ಸಮಿತಿ ಸೋಮವಾರ ತಾಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಶನ್ ದ.ಕ ಜಿಲ್ಲಾ ಸಮಿತಿ ಅಧ್ಯಕ್ಷ ವಸಂತ ಆಚಾರಿ ಅವರು, 1996ರ ಕೇಂದ್ರ ಮಟ್ಟದ ಕಾಯ್ದೆ ಮತ್ತು ಪೆಸ್ ಕಾಯ್ದೆಯನ್ನು ರಕ್ಷಿಸ ಬೇಕು. ಅಂತರರಾಜ್ಯ ವಲಸೆ ಕಾರ್ಮಿಕರ ಕಾಯ್ದೆ 1979ನ್ನು ಉಳಿಸಿ ಹಾಗೂ ಬಲಪಡಿಸಬೇಕು. ನಿರ್ಮಾಣ ಸಾಮಗ್ರಿಗಳು ಮತ್ತು ಸಲಕರಣೆಗಳ ಮೇಲಿನ ಜಿಎಸ್ ಟಿಯನ್ನು ಕಡಿಮೆ ಮಾಡಬೇಕು. ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಬಂದಿಲ್ಲ. ಈ ಕೂಡಲೇ ಅದನ್ನು ಪಾವತಿಸಬೇಕು. ನೈಜ ಕಾರ್ಮಿಕರ ನೋಂದಣಿ ಮತ್ತು ಮರು ನೋಂದಣಿ ಅರ್ಜಿಗಳನ್ನು ತಿರಸ್ಥರಿಸಬಾರದು. ಬಾಕಿ ಇರುವ ಅರ್ಜಿಗಳನ್ನು ಕೂಡಲೇ ವಿಲೇಮಾರಿ ಮಾಡಬೇಕು ಎಂದು ಆಗ್ರಹಿಸಿದರು.

ಟೆಂಡರ್ ಆಧಾರಿತ ಎಲ್ಲಾ ಖರೀದಿ ವ್ಯವಹಾರಗಳನ್ನು ನಿಲ್ಲಿಸಬೇಕು. ಶಿಟ್ ಹಾಗೂ ಇತರೆ ಖರೀದಿಗಳಲ್ಲಿ ಅವ್ಯವಹಾರಗಳು ನಡೆದಿದ್ದು ಈ ಬಗೆ ನ್ಯಾಯಾಂಗ ತನಿಖೆಯಾಗಬೇಕು. ಹೊಸ ತಂತ್ರಾಂಶದಲ್ಲಿನ ತಾಂತ್ರಿಕ ತೊಂದರೆಗಳು ಹಾಗೂ ಸರ್ವರ್ ಸಮಸ್ಯೆಗಳನ್ನು ಪರಿಹರಿಸಬೇಕು. ಕಲ್ಯಾಣ ಮಂಡಳಿಯನ್ನು ಮತ್ತು ಸಲಹಾ ಮಂಡಳಿಯನ್ನು ಪುನರ್ ರಚಿಸಿ ಕೇಂದ್ರ ಕಾರ್ಮಿಕರ ಸಂಘಗಳಿಗೆ ಪ್ರಾತಿನಿಧ್ಯ ನೀಡಬೇಕು. ಪಿಂಚಾಣಿದಾರರ ಅರ್ಜಿ ಸಲ್ಲಿಸಲು ಇರುವ ಪ್ರಾಯದ ದಿನಾಂಕದ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಅವರು ಒತ್ತಾಯಿಸಿದರು.

ಪೆಡರೇಶನ್ ತಾಲೂಕು ಕಾರ್ಯದರ್ಶಿ ಶಂಕರ್ ಪ್ರಾಸ್ತಾವಿಕವಾಗಿ ಮಾತಾನಾಡಿದರು. ಇದೇ ಸಂದರ್ಭ ತಹಶೀಲ್ದಾರ್ ಮೂಲಕ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಮನವಿ ನೀಡಲಾಯಿತು.

ಪ್ರತಿಭಟನೆಯ ನೇತೃತ್ವವನ್ನು ಮುಂದಾಳುಗಳಾದ ಕೃಷ್ಣಪ್ಪ ಬಿರಾವು, ಸೀತಾರಾಮ ಶೆಟ್ಟಿ, ಸಂಜೀವ ಪೂಜಾರಿ, ಜಯಾನಂದ ಪೂಜಾರಿ, ದಿವಾಕರ ನಿಡ್ಡೋಡಿ, ಸುಂದರ ನಿಡ್ಡೋಡಿ, ಶ್ರೀಧರ ಆಚಾರಿ, ಪಾಂಡು ಪೂಜಾರಿ ಸದಾನಂದ ಮಾರ್ನಾಡು ವಹಿಸಿದ್ದರು. ರಾಧಾ ಸ್ವಾಗತಿಸಿದರು. ಕೃಷ್ಣಪ್ಪ ನಡಿಗುಡ್ಡೆ ಧನ್ಯವಾದಗೈದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X