Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ಕೋಟೆಪುರದ ಕಲ್ಲಿದ್ದಲು ಆಧಾರಿತ...

ಉಳ್ಳಾಲ ಕೋಟೆಪುರದ ಕಲ್ಲಿದ್ದಲು ಆಧಾರಿತ ಫಿಶ್ ಮಿಲ್ ಕಂಪೆನಿ ಮುಚ್ಚಲು ಡಿವೈಎಫ್ಐ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 Oct 2024 10:07 AM IST
share
ಉಳ್ಳಾಲ ಕೋಟೆಪುರದ ಕಲ್ಲಿದ್ದಲು ಆಧಾರಿತ ಫಿಶ್ ಮಿಲ್ ಕಂಪೆನಿ ಮುಚ್ಚಲು ಡಿವೈಎಫ್ಐ ಆಗ್ರಹ

ಉಳ್ಳಾಲ: ನಗರಸಭೆ ವ್ಯಾಪ್ತಿಯ ಕೋಟೆಪುರದಲ್ಲಿ ಕಾರ್ಯಾಚರಿಸುತ್ತಿರುವ ಕೆಲವು ಫಿಶ್ ಮಿಲ್ ಕಂಪೆನಿಗಳು ಕಲ್ಲಿದ್ದಲು ಬಳಸುತ್ತಿದ್ದು, ಪರಿಸರದ ಜನರ ಆರೋಗ್ಯದ ಮೇಲೆ ಇದು ತುಂಬಾ ದುಷ್ಪರಿಣಾಮ ಬೀರುತ್ತಿದೆ. ಇಂತಹ ಕಾರ್ಖಾನೆಗಳನ್ನು ಮುಚ್ಚದಿದ್ದರೆ ಡಿವೈಎಫ್ಐ ಉಗ್ರ ಹೋರಾಟ ನಡೆಸಲಿದೆ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಎಚ್ಚರಿಸಿದ್ದಾರೆ.

ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅನಧಿಕೃತ ಫಿಶ್ ಮಿಲ್ ವಿರುದ್ಧ ಹಲವು ಬಾರಿ ಪ್ರತಿಭಟನೆ ನಡೆಸಿದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಸಿಆರ್ ಝೆಡ್ ಕಾನೂನುಗಳನ್ನು ಗಾಳಿಗೆ ತೂರಿ ಅಕ್ರಮ ಕಟ್ಟಡ ನಿರ್ಮಿಸಲಾಗಿದೆ. ಬಂದರು ಇಲಾಖೆಯ ಭೂಮಿಯನ್ನು ಅತಿಕ್ರಮಣ ಮಾಡಲಾಗಿದೆ ಎಂದು ಆರೋಪಿಸಿದರು.

ಕಲ್ಲಿದ್ದಲು ಬಳಕೆಯಿಂದ ದೀರ್ಘ ಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ ಮತ್ತು ರಕ್ತದೊತ್ತಡ, ಹೃದ್ರೋಗ, ತುರಿಕೆ, ಅಲರ್ಜಿ ಮುಂತಾದ ಕಾಯಿಲೆಗಳು ಬರುವ ಸಾಧ್ಯತೆ ದಟ್ಟವಾಗಿದೆ. ಆರೋಗ್ಯದ ಮೇಲೆ ಮಹತ್ತರ ಪರಿಣಾಮ ಬೀರುತ್ತದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ವರದಿ ತಿಳಿಸಿದೆ ಎಂದು ಹೇಳಿದರು.

ಸಿಆರ್ ಝಡ್ ಕಾನೂನು ಉಲ್ಲಂಘಿಸಿ ಅಕ್ರಮವಾಗಿ ಕಟ್ಟಿರುವ ಕಟ್ಟಡಕ್ಕೆ ಬಾಯ್ಲರ್ ಅಳವಡಿಸಲು ಸರಕಾರದ ಅಧೀನದ ಕಾರ್ಖಾನೆಗಳು, ಬಾಯ್ಲರುಗಳ ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯವರು ಅನುಮತಿ ನೀಡಿರುವುದು ಸರಿಯಲ್ಲ. ಜನವಸತಿ ಪ್ರದೇಶದಲ್ಲಿ ಆಗಬಹುದಾದ ಸಂಭವನೀಯ ಅಪಘಾತಗಳನ್ನು ಗಮನದಲ್ಲಿಟ್ಟುಕೊಳ್ಳದೇ ಬಾಯ್ಲರ್ ಅಳವಡಿಕೆಗೆ ಅನುಮತಿ ನೀಡಿರುವುದು ಎಷ್ಟು ಸರಿ ಎಂದು ಇಮ್ತಿಯಾಝ್ ಪ್ರಶ್ನಿಸಿದರು.

ಅಲ್ಲದೇ ಮೀನಿನ ಕಾರ್ಖಾನೆ ವಿಸ್ತರಣೆ ಮಾಡುವ ನಿಮಿತ್ತ ಕಾರ್ಖಾನೆಯಿಂದ ಸಾರ್ವಜನಿಕರಿಂದ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಮೀನಿನ ಕಾರ್ಖಾನೆ ಮುಚ್ಚಲು 2007ರಲ್ಲೇ ಬಂದರು ಅಧಿಕಾರಿ ಆದೇಶ ನೀಡಿದ್ದರೂ ಇದುವರೆಗೆ ಆದೇಶ ಪಾಲನೆ ಆಗುತ್ತಿಲ್ಲ. ಅಲ್ಲದೇ ಇಲ್ಲಿನ ಮಲಿನ ನೀರನ್ನು ನದಿಗೆ ಬಿಡಲಾಗುತ್ತದೆ. ಇದರಿಂದ ಬಹಳಷ್ಟು ಮೀನುಗಳು ಸಾವನ್ನಪ್ಪುತ್ತವೆ. ಈ ಘಟನೆಗೆ ಸಂಬಂಧಿಸಿದ ವೀಡಿಯೋ ವೈರಲ್ ಕೂಡ ಆಗಿದೆ. ಅಧಿಕಾರಿಗಳು ಬಂದಾಗ ಮಲಿನ ನೀರು ಬಿಡುವುದು ಸ್ಥಗಿತಗೊಳಿಸುತ್ತಾರೆ ಎಂದು ದೂರಿದರು.

ಈ ಕಾರ್ಖಾನೆ ಮುಚ್ಚಲು ಸಂಬಂಧಪಟ್ಟ ಇಲಾಖೆ ವಿಫಲಗೊಂಡರೆ ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ, ಕೋಶಾಧಿಕಾರಿ ಮುಹಮ್ಮದ್ ಅಶ್ರಫ್, ಕೋಟೆಪುರ ಘಟಕ ಅಧ್ಯಕ್ಷ ಮುಹಮ್ಮದ್ ಮುಸಾಫಿರ್ ವಾಕರ್, ಕಾರ್ಯದರ್ಶಿ ನೌಫಲ್, ಉಳ್ಳಾಲ ತಾಲೂಕು ಉಪಾಧ್ಯಕ್ಷ ರಝಾಕ್ ಮುಡಿಪು, ಮುಖಂಡ ಅಶ್ಫಾಕ್ ಕೋಟೆಪುರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X