Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿ| ತುಳು ಎಂಎ ಅಧ್ಯಯನ...

ಮಂಗಳೂರು ವಿವಿ| ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಚೌಟ ಮನವಿ

ವಾರ್ತಾಭಾರತಿವಾರ್ತಾಭಾರತಿ23 Oct 2024 7:56 PM IST
share
ಮಂಗಳೂರು ವಿವಿ| ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಚೌಟ ಮನವಿ

ಮಂಗಳೂರು: ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿ ರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಖಂಡಿಸಿದ್ದು, ಸರಕಾರ ಕೂಡಲೇ ಶುಲ್ಕ ಕಡಿತಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಈ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ಗೆ ಪತ್ರ ಬರೆದಿರುವ ಸಂಸದ ಚೌಟ ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ ವಿಭಾಗದ 2024-25ನೇ ಸಾಲಿನ ಪ್ರವೇಶ ಶುಲ್ಕವನ್ನು 22,410 ರೂ. ಏರಿಸುವ ಮೂಲಕ ತುಳು ಭಾಷೆ ಅಧ್ಯಯನ ಮಾಡಬಯಸುವವರಿಗೆ ಆರ್ಥಿಕ ಹೊರೆಯುಂಟು ಮಾಡಲಾಗಿದೆ. ಆರಂಭದಲ್ಲಿ ತುಳು ಎಂಎ ಕೋರ್ಸ್‌ಗೆ 15 ಸಾವಿರ ರೂ. ಪ್ರವೇಶ ಶುಲ್ಕ ಇತ್ತು. ಮೂರು ವರ್ಷದ ಬಳಿಕ 22,410 ರೂ.ಗೆ ಶುಲ್ಕ ಏರಿಕೆ ಮಾಡಿರುವುದರಿಂದ ತುಳು ಎಂಎ ಅಧ್ಯಯನಕ್ಕೆ ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ತುಳು ಭಾಷೆಗೆ ಅಧಿಕೃತ ಭಾಷೆ ಮಾನ್ಯತೆ ಪಡೆಯುವುದಕ್ಕೆ ಪ್ರಯತ್ನಗಳು ನಡೆಯುತ್ತಿರಬೇಕಾದರೆ, ರಾಜ್ಯ ಸರಕಾರವು ತುಳು ಭಾಷೆ ಉತ್ತೇಜನಕ್ಕೆ ಸಹಕಾರಿಯಾಗಿರುವ ಎಂಎ ಅಧ್ಯಯನ ಕೋರ್ಸ್‌ನ ಪ್ರವೇಶ ಶುಲ್ಕ ಹೆಚ್ಚಿಸಿರುವುದು ಸರಿ ಯಲ್ಲ. ಸ್ಥಳೀಯ ಭಾಷೆಗೆ ನೆರವು ನೀಡುವ ನಿಟ್ಟಿನಲ್ಲಿ ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡಬೇಕೆಂಬ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ 2020-21ನೇ ಸಾಲಿನಿಂದ 4 ಸಾವಿರ ರೂ. ಕಡಿತಗೊಳಿಸಲಾಗಿತ್ತು. ಆದರೆ 3 ವರ್ಷದ ಬಳಿಕ ವಿವಿಯು ಪ್ರವೇಶ ಶುಲ್ಕ ಹೆಚ್ಚಿಸುವ ಮೂಲಕ ತುಳು ಭಾಷೆ ಅಧ್ಯಯನಾಸಕ್ತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದೆ. ಹೀಗಾಗಿ ಕೂಡಲೇ ಶುಲ್ಕ ರಿಯಾಯಿತಿ ನೀಡಲು ಕ್ರಮ ಕೈಗೊಳ್ಳಬೇಕೆಂದು ಕ್ಯಾ. ಚೌಟ ಮನವಿ ಮಾಡಿದ್ದಾರೆ.

ತುಳು ಎಂಎ ವಿಭಾಗಕ್ಕೆ ಕನಿಷ್ಠ 15 ವಿದ್ಯಾರ್ಥಿಗಳು ಪ್ರವೇಶ ಪಡೆದರೆ ಮಾತ್ರ ವಿವಿಯು ತುಳು ಸ್ನಾತಕೋತ್ತರ ವಿಭಾಗ ವನ್ನು ಮುಂದುವರಿಸುವುದಕ್ಕೆ ಸಾಧ್ಯ. ಇಂತಹ ಪರಿಸ್ಥಿತಿಯಲ್ಲಿ ಶುಲ್ಕವನ್ನು ಏಕಾಏಕಿ ಹೆಚ್ಚಳ ಮಾಡಿದರೆ ತುಳು ಎಂಎ ಅಧ್ಯಯನಕ್ಕೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆಯೂ ಕುಸಿಯುವ ಆತಂಕವಿದೆ. ಹಾಗಾಗಿ ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ ಪದವಿ ತರಗತಿಗಳು ಯಶಸ್ವಿಯಾಗಿ ಮುಂದುವರಿಯಬೇಕಾದರೆ ರಾಜ್ಯ ಸರಕಾರ ಮಧ್ಯಪ್ರವೇಶ ಮಾಡಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕವನ್ನು ಈ ಮೊದಲಿನಂತೆ ಕಡಿತಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಸಚಿವ ಡಾ.ಎಂ.ಸಿ ಸುಧಾಕರ್‌ಗೆ ಬರೆದಿರುವ ಪತ್ರದಲ್ಲಿ ಕ್ಯಾ. ಚೌಟ ಒತ್ತಾಯಿಸಿದ್ದಾರೆ.

ವಿವಿ ಕುಲಪತಿಗೂ ಮನವಿ: ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ ಕೂಡ ತುಳು ಎಂಎ ಅಧ್ಯಯನ ಕೋರ್ಸ್‌ನ ಪ್ರವೇಶ ಶುಲ್ಕವನ್ನು ಕಡಿತಗೊಳಿಸುವುದಕ್ಕೆ ಸಂಬಂಧಪಟ್ಟ ಇಲಾಖೆ ಮೂಲಕ ಸರಕಾರದ ಮಟ್ಟದಲ್ಲಿ ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸಬೇಕು. ಆ ಮೂಲಕ ತುಳು ಭಾಷೆ ಕಲಿಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಜತೆಗೆ ತುಳು ಭಾಷೆಯ ಪ್ರೋತ್ಸಾಹಕ್ಕೆ ಕೈಜೋಡಿಸಬೇಕು ಎಂದು ಸಂಸದ ಚೌಟ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X