Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ: ಭಾರತ ಸಂವಿಧಾನ ಅಮೃತ ಮಹೋತ್ಸವದ...

ಉಳ್ಳಾಲ: ಭಾರತ ಸಂವಿಧಾನ ಅಮೃತ ಮಹೋತ್ಸವದ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ26 Nov 2024 8:36 PM IST
share
ಉಳ್ಳಾಲ: ಭಾರತ ಸಂವಿಧಾನ ಅಮೃತ ಮಹೋತ್ಸವದ ಉಪನ್ಯಾಸ

ಉಳ್ಳಾಲ: ಸಂವಿಧಾನಕ್ಕೆ ಮಹತ್ವದ ಸ್ಥಾನ ಇದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಒಬ್ಬಂಟಿಯಾಗಿ, ನಿರ್ಭಯ ವಾಗಿ ಓಡಾಡಲು ಅಂಬೇಡ್ಕರ್ ಅವರು ಬರೆದ ಸಂವಿಧಾನ ಕಾರಣವೇ ಹೊರತು ಸರ್ಕಾರವಲ್ಲ. ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕು ಇದೆ. ಈ ವಿಚಾರ ವಿದ್ಯಾರ್ಥಿಗಳಿಗೂ ಗೊತ್ತಿದೆ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು.

ಅವರು ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ಉಳ್ಳಾಲ ನಗರ ಸಭೆ ಕೌನ್ಸಿಲ್ ಹಾಲ್ ನಲ್ಲಿ ನಡೆದ ಭಾರತ ಸಂವಿಧಾನ ಅಮೃತ ಮಹೋತ್ಸವ 75 ನೇ ಸಂಭ್ರಮದ ಉಪನ್ಯಾಸ ಹಾಗೂ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂವಿಧಾನಕ್ಕೆ ಸಂಬಂಧಿಸಿದಂತೆ ಬಹಳಷ್ಟು ಬಹಿರಂಗ ಚರ್ಚೆ ನಡೆದಿದೆ. ಈ ಬಹಿರಂಗ ಚರ್ಚೆ, ಸಭೆ ಹಾಗೂ ಸಂವಿಧಾನ ಗ್ರಂಥ ವನ್ನು ಅಧ್ಯಯನ ಮಾಡಿದರೆ ಮಾತ್ರ ಈವಿಚಾರ ತಿಳಿದು ಕೊಳ್ಳಲು ಸಾಧ್ಯ ಎಂದು ಹೇಳಿದರು.

ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕ ಡಾ.ಬಿ.ಕೆ. ರವೀಂದ್ರ ಮಾತನಾಡಿ, ನಮಗೆ ಎಲ್ಲಾ ಭಾಷೆ ಜನಾಂಗ ಬೇಕು. ನಮಗೆ ಆ ಭಾಷೆ ಬೇಕು, ಈ ಭಾಷೆ ಬೇಕು ಎಂದು ಹೇಳಬಾರದು. ಭಿನ್ನತೆ ಇರಬಾರದು. ಸಂವಿಧಾನ ಅದನ್ನೇ ಹೇಳುತ್ತಿದೆ. ಸಂವಿಧಾನ ಎಲ್ಲಾ ರಾಷ್ಟ್ರಗಳಲ್ಲೂ ಇದೆ.ಈ ಸಂವಿಧಾನ ಬರಲು ಕಾರಣ ಕ್ರಾಂತಿ ಯಾಗಿದೆ. ಇದರಲ್ಲಿ ಎಲ್ಲಾ ಧರ್ಮಗಳ ,ಎಲ್ಲಾ ಧರ್ಮದ ಗ್ರಂಥಗಳ‌ ವಿಚಾರ ಇದೆ. ಎಲ್ಲದಕ್ಕೂ ಪರಿಹಾರ ಕೂಡ ಇದೆ ಎಂದರು.

ನಗರಸಭೆ ಅಧ್ಯಕ್ಷೆ ಶಶಿಕಲಾ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸ್ವಾಗತ ಅಧ್ಯಕ್ಷ ಮಾಜಿ ಶಾಸಕ ಕೆ.ಜಯರಾಮ್ ಶೆಟ್ಟಿ ಸಂವಿಧಾನದ ರೂಪುರೇಷೆ ಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಉಳ್ಳಾಲ ನಗರ ಸಭೆ ಅಧ್ಯಕ್ಷ ಕೆ ಶಶಿಕಲಾ, ಉಪಾಧ್ಯಕ್ಷ ಸಪ್ನಾ ಹರೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅಶ್ರಫ್, ಸೋಮೇಶ್ವರ ಪುರಸಭೆ ಅಧ್ಯಕ್ಷ ಕಮಲ, ಉಪಾಧ್ಯಕ್ಷ ರವಿಶಂಕರ್, ಕೋಟೆಕಾರ್ ಪಟ್ಟಣ ಪಂಚಾಯತ್ ಅಧ್ಯಕ್ಷ ದಿವ್ಯಾ ಸತೀಶ್ ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್, ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಕುಮಾರ್ ರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮ ದಲ್ಲಿ ನಗರ ಸಭೆ ಪೌರಾಯುಕ್ತ ಮತಡಿ, ವೀರ ರಾಣಿ ಅಬ್ಬಕ್ಕ ಉತ್ಸವ ಗೌರವ ಉಪಾಧ್ಯಕ್ಷ ಹೈದರ್ ಪರ್ತೀಪ್ಪಾಡಿ,ಸದಾನಂದ ಬಂಗೇರ, ಉಪಾಧ್ಯಕ್ಷ ದೇವಕಿ ಆರ್ ಉಳ್ಳಾಲ, ಕೆಎಂಕೆ ಮಂಜನಾಡಿ,ಆಲಿಯಬ್ಬ ಹುಸೇನ್, ದಿನಕರ್ ಉಳ್ಳಾಲ ಸ್ವಾಗತಿಸಿದರು. ಧನಲಕ್ಷ್ಮಿಗಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X