Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಲ್ಯರ ಪ್ರತಿಮೆ ತೆರವುಗೊಳಿಸಲು ರಾ.ಹೆ....

ಮಲ್ಯರ ಪ್ರತಿಮೆ ತೆರವುಗೊಳಿಸಲು ರಾ.ಹೆ. ಪ್ರಾಧಿಕಾರ ನಿರ್ಧಾರ: ಸರಿಯಾದ ಜಾಗದಲ್ಲಿ ಪ್ರತಿಸ್ಥಾಪನೆಗೆ ಕಾಂಗ್ರೆಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ30 Nov 2024 11:00 PM IST
share
ಮಲ್ಯರ ಪ್ರತಿಮೆ ತೆರವುಗೊಳಿಸಲು ರಾ.ಹೆ. ಪ್ರಾಧಿಕಾರ ನಿರ್ಧಾರ: ಸರಿಯಾದ ಜಾಗದಲ್ಲಿ ಪ್ರತಿಸ್ಥಾಪನೆಗೆ ಕಾಂಗ್ರೆಸ್  ಆಗ್ರಹ

ಮಂಗಳೂರು: ಅವಿಭಜಿತ ದ.ಕ.ಜಿಲ್ಲೆಯ ಅಭಿವೃದ್ಧಿಯ ರೂವಾರಿಯಾಗಿದ್ದ ಯು. ಶ್ರೀನಿವಾಸ ಮಲ್ಯರ ನಂತೂರಿನಲ್ಲಿನ ಪ್ರತಿಮೆಯನ್ನು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಉದ್ದೇಶಕ್ಕಾಗಿ ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದ್ದು, ಹೆದ್ದಾರಿಯ ಅಗಲೀಕರಣಕ್ಕೆ ತೀರಾ ಅನಿವಾರ್ಯವಾದರೆ ಪ್ರತಿಮೆಯನ್ನು ಈಗಿರುವ ಜಾಗದಿಂದ ತೆರವುಗೊಳಿಸಿ ಸೂಕ್ತ ಸ್ಥಳದಲ್ಲಿ ಪ್ರತಿಸ್ಥಾಪನೆ ಮಾಡುವಂತೆ ದ.ಕ. ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಮಾಜಿ ಶಾಸಕ ಜೆ. ಆರ್.ಲೋಬೊ ಆಗ್ರಹಿಸಿದ್ದಾರೆ.

ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶನಿವಾರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಅಭಿವೃದ್ಧಿಗೆ ನಾವು ವಿರೋಧ ಮಾಡುವುದಿಲ್ಲ. ಆದರೆ ಹೆದ್ದಾರಿ ಅಭಿವೃದ್ಧಿಯ ಉದ್ದೇಶಕ್ಕಾಗಿ ಶ್ರೀನಿವಾಸ ಮಲ್ಯರ ಈಗಿರುವ ಪ್ರತಿಮೆಯನ್ನು ಅಲ್ಲಿಂದ ಕಿತ್ತು ಬಿಸಾಡುವುದನ್ನು ಕಾಂಗ್ರೆಸ್ ಪಕ್ಷ ಸಹಿಸದು ಎಂದು ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಮಾತನಾಡಿ ಶ್ರೀನಿವಾಸ ಮಲ್ಯರು 18 ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿ ಜಿಲ್ಲೆಯ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ನವ ಮಂಗಳೂರು ಬಂದರು, ಮಂಗಳೂರು ವಿಮಾನ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ 66, ಕೆಆರ್‌ಇಸಿ(ಎನ್‌ಐಟಿಕೆ) , ಎಂಸಿಎಫ್, ಮಂಗಳೂರು-ಹಾಸನ ರೈಲ್ವೆ ಮಾರ್ಗ, ನೇತ್ರಾವತಿ ನದಿಗೆ ಉಳ್ಳಾಲದಲ್ಲಿ ಸೇತುವೆ, ಸರ್ಕ್ಯೂಟ್ ಹೌಸ್, ಮಂಗಳೂರು ಪುರಭವನ, ಆಕಾಶವಾಣಿ ಮಂಗಳೂರು ಮತ್ತಿತರ ಕೊಡುಗೆಗಳನ್ನು ಜಿಲ್ಲೆಗೆ ಮಲ್ಯರು ನೀಡಿದ್ದಾರೆ. ಇದರ ಬಗ್ಗೆ ಅವರಿಗೆ ಅಧಿಕಾರಿಗಳು ಅಗೌರವ ಮಾಡಿದರೆ ಕಾಂಗ್ರೆಸ್‌ನಿಂದ ಮತ್ತು ಜಿಲ್ಲೆಯ ಜನತೆಯಿಂದ ತೀವ್ರ ಪ್ರತಿಭಟನೆ ಎದುರಿಸಬೇಕಾದಿತು ಎಂದು ಎಚ್ಚರಿಸಿದರು.

ಮಲ್ಯರ ಪ್ರತಿಮೆಯನ್ನು ತೆರವುಗೊಳಿಸುವ ಮೊದಲು ಅದನ್ನು ಸೂಕ್ತ ಜಾಗದಲ್ಲಿ ಪ್ರತಿಸ್ಥಾಪನೆ ಮಾಡುವ ಬಗ್ಗೆ ಭರವಸೆ ನೀಡಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಜೆ.ಆರ್.ಲೋಬೊ ಮಾತನಾಡಿ ಮಲ್ಯರು ದ.ಕ. ಜಿಲ್ಲೆಯ ಅಭಿವೃದ್ಧಿಗೆ ಅಡಿಗಲ್ಲು ಹಾಕಿದವರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಅವರು ನೆಟ್ಟ ಮರದ ಹಣ್ಣುಗಳನ್ನು ಜಿಲ್ಲೆಯ ನಾವು ತಿನ್ನುತ್ತಿದ್ದೇವೆ. ತಾನು ಮಂಗಳೂರು ಪಾಲಿಕೆಯ ಆಯುಕ್ತನಾಗಿದ್ದಾಗ ಮಲ್ಯರ ಪ್ರತಿಮೆ ಇರುವ ಪಾರ್ಕ್‌ನ್ನು ಅಭಿವೃದ್ಧಿಪಡಿಸಲಾಗಿತ್ತು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ ಮಂಜುಳಾ ನಾಯಕ್, ಸುಭೋದಯ ಆಳ್ವ, ವಿಕಾಸ್ ಶೆಟ್ಟಿ, ಟಿ.ಕೆ.ಸುಧೀರ್, ರಮಾನಂದ ಪೂಜಾರಿ, ಅಪ್ಪಿ, ಸಮರ್ಥ್ ಭಟ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X