Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಗಾರುಬೆಟ್ಟು ಮಠದಲ್ಲಿ ಅಕ್ರಮ...

ಬಂಗಾರುಬೆಟ್ಟು ಮಠದಲ್ಲಿ ಅಕ್ರಮ ಮರಳುಗಾರಿಕೆ| ಗ್ರಾಮಸ್ಥರ ದೂರಿಗೂ ಸ್ಪಂದಿಸದ ಅಧಿಕಾರಿಗಳು: ಆರೋಪ

ವಾರ್ತಾಭಾರತಿವಾರ್ತಾಭಾರತಿ26 Dec 2024 9:11 PM IST
share
ಬಂಗಾರುಬೆಟ್ಟು ಮಠದಲ್ಲಿ ಅಕ್ರಮ ಮರಳುಗಾರಿಕೆ| ಗ್ರಾಮಸ್ಥರ ದೂರಿಗೂ ಸ್ಪಂದಿಸದ ಅಧಿಕಾರಿಗಳು: ಆರೋಪ

ಉಪ್ಪಿನಂಗಡಿ: ಪೆರ್ನೆ ಮತ್ತು ಗಡಿಯಾರ ಪ್ರದೇಶದ ಮಧ್ಯೆ ಪೆರ್ಲಾಪು ಸನಿಹದಲ್ಲಿರುವ ಬಂಗಾರುಬೆಟ್ಟು ಮಠ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ವ್ಯಕ್ತವಾಗಿವೆ.

ಉಪ್ಪಿನಂಗಡಿ ಕಡೆಯಿಂದ ಹರಿದು ಬರುವ ನೇತ್ರಾವತಿ ನದಿಯಲ್ಲಿ ನಚ್ಚಬೆಟ್ಟು ಮತ್ತು ಬಂಗಾರುಬೆಟ್ಟು ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯಲಾಗುತ್ತದೆ. ಹಗಲು ಮತ್ತು ರಾತ್ರಿಯಲ್ಲಿಯೂ ಮರಳು ತೆಗೆಯಲಾಗುತ್ತಿದ್ದು, ದಿನನಿತ್ಯ 30ರಿಂದ 40 ಲಾರಿ ಮರಳು ಅಕ್ರಮವಾಗಿ ಯಾವುದೇ ದಾಖಲೆ ಪತ್ರಗಳಿಲ್ಲದೆ ಇಲ್ಲಿಂದ ಉಪ್ಪಿನಂಗಡಿ, ಪುತ್ತೂರು, ಬಂಟ್ವಾಳ ಕಡೆಗೆ ಸಾಗಾಟ ನಡೆಯುತ್ತಿರುವುದಾಗಿ ದೂರುಗಳು ವ್ಯಕ್ತವಾಗಿವೆ.

ನದಿ ಪಾತ್ರ ಬಂಗಾರುಬೆಟ್ಟು ಮಠ ಎಂಬಲ್ಲಿಂದ ಹೊರ ಬರುವ ಮರಳು ತುಂಬಿದ ಲಾರಿ ಮತ್ತು ಟಿಪ್ಪರ್‍ಗಳು ಕೆಲವೊಮ್ಮೆ ಪೆರ್ಲಾಪು ಜಂಕ್ಷನ್‍ಗೆ ಬಂದು ಅಲ್ಲಿಂದ ಎಡಕ್ಕೆ ಕವಲೊಡೆದು ಅಮೈ ಸೇತುವೆ ಬಳಿ ಮತ್ತು ಕೆಲವೊಮ್ಮೆ ಬಲಕ್ಕೆ ಕವಲೊ ಡೆದು ಇನ್ನೊಂದು ರಸ್ತೆಯ ಮೂಲಕ ಗಡಿಯಾರ ಜಂಕ್ಷನ್ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75ನ್ನು ಸಂಪರ್ಕಿಸಿ ಯಥೇಚ್ಛ ವಾಗಿ ಮರಳು ಸಾಗಾಟ ನಡೆಯುತ್ತಿರುವುದು ಕಂಡು ಬಂದಿದೆ. ದಿನಂಪ್ರತಿ 2 ಕಡೆಯಿಂದಾಗಿ ಸುಮಾರು 30ರಿಂದ 40 ಲೋಡು ಮರಳು ಇಲ್ಲಿಂದ ಹೊರ ಹೋಗುತ್ತಿದ್ದು, ಸರಕಾರದ ಬೊಕ್ಕಸಕ್ಕೆ ದಿನಂಪ್ರತಿ ಲಕ್ಷಾಂತರ ರೂಪಾಯಿ ವಂಚನೆ ಆಗುತ್ತಿರುವುದರ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.

ಮರಳು ತುಂಬಿಸಲು ಹೋಗುವ ಲಾರಿಗಳು ನಾ ಮುಂದು ತಾ ಮುಂದು ಎಂಬ ತವಕದಲ್ಲಿ ಮತ್ತು ಮರಳು ತುಂಬಿಸಿ ಕೊಂಡು ಹೋಗುವಾಗ ಯಾವುದೇ ದಾಖಲೆ ಪತ್ರಗಳು ಇಲ್ಲದ್ದರಿಂದ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸಿ, ನಿಗದಿತ ಸ್ಥಳಕ್ಕೆ ಹೋಗುವ ಆತುರದಲ್ಲಿ ಅತಿ ವೇಗದಲ್ಲಿ ಹೋಗುತ್ತಿದ್ದು, ಶಾಲಾ ಮಕ್ಕಳ ಸಹಿತ ವೃದ್ಧರು, ಮಹಿಳೆಯರು ರಸ್ತೆ ಬದಿಯಲ್ಲಿ ಹೋಗುವುದಕ್ಕೂ ಭಯ ಪಡುವಂತಾಗಿದೆ ಎಂದು ಗ್ರಾಮಸ್ಥರು ಪುತ್ತೂರು ಉಪ ವಿಭಾಗಾಧಿಕಾರಿ ಮತ್ತು ಮಂಗಳೂರು ಗಣಿ ಇಲಾಖೆಗೆ ದೂರು ಸಲ್ಲಿಸಿದ್ದಾರೆ.

ಇನ್ನೊಂದೆಡೆ ಗ್ರಾಮದ ಒಳಗಿನ ರಸ್ತೆಯಲ್ಲಿ ಭಾರೀ ಮರಳು ಹೇರಿಕೊಂಡು ಹೋಗುವ ಲಾರಿಯಿಂದಾಗಿ ರಸ್ತೆಗಳು ಕುಲಗೆಡುತ್ತಿದೆ. ರಸ್ತೆ ತುಂಬಾ ಹೊಂಡ ನಿರ್ಮಾಣ ಆಗುತ್ತಿದ್ದು, ಕಾರು, ಅಟೋ ರಿಕ್ಷಾ, ದ್ವಿಚಕ್ರ ವಾಹನಗಳು ಹೋಗುವು ದಕ್ಕೂ ಸಮಸ್ಯೆ ಉಂಟಾಗುತ್ತಿದೆ, ರಸ್ತೆಯಲ್ಲಿ ದಿನೇ ಅಪಘಾತಗಳು ಹೆಚ್ಚಾಗಲಾರಂಭಿಸಿದೆ ಎಂಬ ದೂರುಗಳು ವ್ಯಕ್ತವಾಗಿವೆ. ಆದರೂ ಅಧಿಕಾರಿಗಳು ಈ ಬಗ್ಗೆ ಮೌನವಹಿಸಿರುವುದು ಸಾರ್ವಜನಿಕರ ಸಂಶಯಕ್ಕೆ ಕಾರಣವಾಗಿದೆ ಯಲ್ಲದೆ ನದಿಯಲ್ಲಿ ಇರುವ ಸಂಪತ್ತು ಈ ರೀತಿಯಾಗಿ ಲೂಟಿ ಆಗುತ್ತಿದ್ದರೂ ಯಾವೊಬ್ಬ ಅಧಿಕಾರಿಗಳೂ ಇತ್ತ ಗಮನ ಹರಿಸದೇ ಇರುವುದು ನಮ್ಮ ಮುಂದಿರುವ ವ್ಯವಸ್ಥೆಯ ದುರಂತ ಎಂಬ ಮಾರ್ಮಿಕವಾದ ಮಾತುಗಳನ್ನು ಅಧಿಕಾರಿಗಳಿಗೆ ಬರೆದ ದೂರು ಅರ್ಜಿಯಲ್ಲೂ ಗ್ರಾಮಸ್ಥರು ಉಲ್ಲೇಖಿಸಿದ್ದಾರೆ.

ಸೂಕ್ತ ಕಾನೂನು ಕ್ರಮ: ಕೃಷ್ಣವೇಣಿ

"ಸಾರ್ವಜನಿಕ ದೂರು ಆಧರಿಸಿ ಪ್ರದೇಶವಾರು ಅಧಿಕಾರಿಗೆ ನಿರ್ದೇಶನ ನೀಡಲಾಗುತ್ತದೆ. ಆದರೂ ಈ ನಿರ್ದಿಷ್ಟ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು"

-ಕೃಷ್ಣವೇಣಿ, ಹಿರಿಯ ಭೂವಿಜ್ಞಾನಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಮಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X