Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಅಮೆಚೂರು ಕಬಡ್ಡಿ ಸಂಸ್ಥೆಗೆ...

ದ.ಕ. ಅಮೆಚೂರು ಕಬಡ್ಡಿ ಸಂಸ್ಥೆಗೆ ಆಡಳಿತಾಧಿಕಾರಿ ನೇಮಕಕ್ಕೆ ಶಾಸಕ ಹರೀಶ್ ಪೂಂಜಾ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ27 Dec 2024 8:41 PM IST
share
ದ.ಕ. ಅಮೆಚೂರು ಕಬಡ್ಡಿ ಸಂಸ್ಥೆಗೆ ಆಡಳಿತಾಧಿಕಾರಿ ನೇಮಕಕ್ಕೆ ಶಾಸಕ ಹರೀಶ್ ಪೂಂಜಾ ಒತ್ತಾಯ

ಮಂಗಳೂರು, ಡಿ.27: ಹಲವು ಲೋಪದೋಷಗಳಿಂದ ಕೂಡಿರುವ ದ.ಕ. ಅಮೆಚೂರು ಕಬಡ್ಡಿ ಸಂಸ್ಥೆಗೆ ವಿಚಾರಣಾ ಅಧಿಕಾರಿಯ ಶಿಫಾರಸಿನಂತೆ ತಕ್ಷಣ ಆಡಳಿತಾಧಿಕಾರಿ ನೇಮಕ ಮಾಡಬೇಕು ಎಂದು ಸಂಸ್ಥೆಯ ಸದಸ್ಯ, ಶಾಸಕ ಹರೀಶ್ ಪೂಂಜಾ ಸರಕಾರವನ್ನು ಒತ್ತಾಯಿಸಿದ್ದಾರೆ.

ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದ.ಕ. ಅಮೆಚೂರು ಕಬಡ್ಡಿ ಸಂಸ್ಥೆಯ ಆಡಳಿತ ವ್ಯವಸ್ಥೆಯು ನಕಲಿ ದಾಖಲೆ ಸೃಷ್ಟಿ, ಅನಧಿಕೃತವಾಗಿ ಪದಾಧಿಕಾರಿಗಳ ನೇಮಕ, ಪೋರ್ಜರಿ ಸಹಿ, ಅವ್ಯವಹಾರ, ಅಧಿಕಾರ ದುರುಪಯೋಗ ಸಹಿತ ಅನೇಕ ಲೋಪದೋಷಗಳಿಂದ ಕೂಡಿರುವ ಬಗ್ಗೆ ಕೆಲ ಸದಸ್ಯರು ಕೋಆಪರೇಟಿವ್ ಸೊಸೈಟಿ ರಿಜಿಸ್ಟ್ರಾರ್‌ಗೆ ದೂರು ನೀಡಿರುತ್ತಾರೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿರುವ ವಿಚಾರಣಾ ಅಧಿಕಾರಿಯು ಸಂಸ್ಥೆಗೆ ಆಡಳಿತಾಧಿಕಾರಿ ನೇಮಿಸಲು ಶಿಫಾರಸು ಮಾಡಿರುತ್ತಾರೆ. ಅದರಂತೆ ಆಡಳಿತಾಧಿಕಾರಿಯನ್ನು ಸರಕಾರ ನೇಮಿಸಬೇಕು ಎಂದರು.

ರಾಜ್ಯದ ಕಬಡ್ಡಿ ಆಟಗಾರರ ಜೀವನಕ್ಕೆ ಶಕ್ತಿ ತುಂಬುವ ಉದ್ದೇಶದಿಂದ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಜಿಲ್ಲೆಯಲ್ಲಿ ಪ್ರತಿಭಾವಂತ ಆಟಗಾಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಸರಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದೇನೆ. ಆ ಬಗ್ಗೆ ನನ್ನ ವಿರುದ್ಧ ಇತ್ತೀಚೆಗೆ ಜಿಲ್ಲಾ ಅಮೆಚೂರು ಕಬಡ್ಡಿ ಸಂಸ್ಥೆಯ ಅಧ್ಯಕ್ಷ ರಾಕೇಶ್ ಮಲ್ಲಿ ಮತ್ತವರ ತಂಡ ಮಾಡಿರುವ ಎಲ್ಲಾ ಆರೋಪಗಳಿಗೆ ಉತ್ತರಿಸಲು ಸಿದ್ಧನಿದ್ದೇನೆ ಎಂದು ಹರೀಶ್ ಪೂಂಜಾ ಹೇಳಿದರು.

ಅಂತರ್‌ ವಿವಿ ಕಬಡ್ಡಿಯಲ್ಲಿ 33 ವರ್ಷ ಬಳಿಕ ಮಂಗಳೂರು ವಿವಿ ತಂಡ ಚಿನ್ನದ ಪದಕ ಗೆದ್ದಿದೆ. ಆದರೆ ಈ ಅಪರೂಪದ ಸಾಧನೆ ತೋರಿದ ತಂಡದಲ್ಲಿದ್ದ ಯಾವೊಬ್ಬ ಆಟಗಾರನೂ ರಾಜ್ಯ ತಂಡಕ್ಕೆ ಆಯ್ಕೆಯಾಗಿಲ್ಲ. ಜಿಲ್ಲೆಯಲ್ಲಿ ತುಂಬಾ ಮಂದಿ ಪ್ರತಿಭಾವಂತ ತೀರ್ಪುಗಾರರಿದ್ದಾರೆ. ಅವರಲ್ಲಿ ಎಷ್ಟು ಮಂದಿ ಪ್ರೊಕಬಡ್ಡಿಯಲ್ಲಿ ಅವಕಾಶ ಪಡೆಯಲು ಸಾಧ್ಯವಾಯಿತು? ಪ್ರೇಮನಾಥ ಉಳ್ಳಾಲ್ ಅವರನ್ನು ಹೊರತುಪಡಿಸಿದರೆ ಎಷ್ಟು ಮಂದಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿ ದ್ದಾರೆ? ಉರ್ವ ಮೈದಾನದ ಸಮೀಪ ಸ್ಮಾರ್ಟ್ ಸಿಟಿ ವತಿಯಿಂದ 35 ಕೋ.ರೂ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ನಿರ್ಮಿಸುತ್ತಿರುವ ಬಗ್ಗೆ ರಾಕೇಶ್ ಮಲ್ಲಿ ಹೇಳಿಕೊಂಡಿದ್ದಾರೆ. ಇದು ಬಿಜೆಪಿ ಸರಕಾರದ ಅವಧಿಯಲ್ಲಿ ಸಂಸದರಾಗಿದ್ದ ನಳಿನ್ ಕುಮಾರ್ ಕಟೀಲು ಮತ್ತು ಶಾಸಕ ವೇದವ್ಯಾಸ ಕಾಮತ್‌ರ ಮೂಲಕ ನಾವು ಶ್ರಮಿಸಿದ ಕಾರಣ ಸಾಧ್ಯವಾಯಿತು ಎಂದು ಹರೀಶ್ ಪೂಂಜಾ ನುಡಿದರು.

ರಾಕೇಶ್ ಮಲ್ಲಿ 2009ರಲ್ಲಿ ಸಂಸ್ಥೆಯ ಉಪಾಧ್ಯಕ್ಷರಾಗಿ ಕಾನೂನು ಬಾಹಿರವಾಗಿ ಆಯ್ಕೆಯಾಗಿದ್ದಾರೆ. ಯಾಕೆಂದರೆ ಅವರು 2012ರಲ್ಲಿ ಸಂಸ್ಥೆಯಲ್ಲಿ ಸದಸ್ಯತ್ವ ಪಡೆದಿರುವುದು. 2012ರಿಂದ 2024 ತನಕ ನಿರಂತರ ಅಧ್ಯಕ್ಷರಾಗಿರುವ ರಾಕೇಶ್ ಮಲ್ಲಿ ಸಂಸ್ಥೆಗೆ ಯಾವ ಕೊಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಿರುವ ಹರೀಶ್ ಪೂಂಜಾ ಅಂತಾರಾಷ್ಟ್ರೀಯ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಮಮತಾ ಪೂಜಾರಿ ಹಾಗೂ ಹಲವು ರಾಷ್ಟ್ರೀಯ ಮಟ್ಟದ ಆಟಗಾರರು ಇಲ್ಲಿ ಸಾಧನೆ ಮಾಡಿದ್ದಾರೆ. ಇಲ್ಲಿರುವ ಹೆಚ್ಚಿನ ಪ್ರತಿಭಾವಂತ ಆಟಗಾರರ ಸಾಧನೆಯ ಹಿಂದಿರುವುದು ಮೂಡಬಿದಿರೆಯ ಆಳ್ವಾಸ್, ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಂತಹ ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳು ಕಾರಣ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X