ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ: ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ

ಮಂಗಳೂರು, ಜ.3: ಪ್ರಸಕ್ತ (2024-25ನೇ) ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದೆ.
ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ 1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ (ನ್ಯಾಷನಲ್ ಓವರ್‌ಸೀಸ್ ಸ್ಕಾಲರ್‌ಶಿಪ್), ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ (IIT , IIM , IIIT , NIT , IISER , AIIMS , NLU , INI & IuSLA) ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಒಂದು ಬಾರಿಗೆ 2 ಲಕ್ಷ ರೂ.ಗಳ ಪ್ರೋತ್ಸಾಹಧನ, ಎಂ.ಫಿಲ್ ಮತ್ತು ಪಿಎಚ್‌ಡಿಗೆ ಪೂರ್ಣಕಾಲಿಕ ನೋಂದಣಿಯಾಗಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಫೆಲೋಶಿಪ್, ಜಿಎನ್‌ಎಂ ಮತ್ತು ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಜ.15ರವರೆಗೆ ವಿಸ್ತರಿಸಲಾಗಿದೆ. ವಿವಿಧ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹಧನದ ಬಗ್ಗೆ ಮಾಹಿತಿಗೆ ಇಲಾಖೆಯ ವೆಬ್‌ಸೈ https://dom.karnataka.gov.in





