Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಾ.ಡಿ. ಸೋಜ ಅನ್ಯರ ಪ್ರಭಾವವಿಲ್ಲದೆ...

ನಾ.ಡಿ. ಸೋಜ ಅನ್ಯರ ಪ್ರಭಾವವಿಲ್ಲದೆ ಮನ್ನಣೆ ಪಡೆದ ಶ್ರೇಷ್ಠ ಸಾಹಿತಿ: ಡಾ.ಬಿ.ಎ. ವಿವೇಕ ರೈ

ವಾರ್ತಾಭಾರತಿವಾರ್ತಾಭಾರತಿ8 Jan 2025 10:42 PM IST
share
ನಾ.ಡಿ. ಸೋಜ ಅನ್ಯರ ಪ್ರಭಾವವಿಲ್ಲದೆ ಮನ್ನಣೆ ಪಡೆದ ಶ್ರೇಷ್ಠ ಸಾಹಿತಿ: ಡಾ.ಬಿ.ಎ. ವಿವೇಕ ರೈ

ಮಂಗಳೂರು: ‘‘ಪರಿಸರ, ವೈಚಾರಿಕ ಸಾಹಿತ್ಯ, ವಿಡಂಬನೆ ಅಲ್ಲದೆ ವಿಶೇಷವಾಗಿ ಮಕ್ಕಳ ಸಾಹಿತ್ಯದಲ್ಲಿ ಮಹತ್ತರ ಸಾಧನೆಗೈಯುವ ಮೂಲಕ ಪರಮೋಚ್ಚ ಸಾಹಿತಿ ಎನಿಸಿಕೊಂಡವರು ನಾ.ಡಿ. ಸೋಜ ಎಂದು ಹಿರಿಯ ಸಾಹಿತಿ ಡಾ. ಬಿ.ಎ. ವಿವೇಕ ರೈ ಹೇಳಿದ್ದಾರೆ.

ಅಗಲಿದ ಸಾಹಿತಿ ನಾ.ಡಿ. ಸೋಜರಿಗೆ ಕಲ್ಕೂರ ಪ್ರತಿಷ್ಠಾನವು ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿದರು. ‘‘ಸಾರಸ್ವತ ಲೋಕದಲ್ಲಿ ಯಾರದೇ ಪ್ರಭಾವವಿಲ್ಲದೆ ಸ್ವಸಾಮರ್ಥ್ಯದಿಂದ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿಗಳನ್ನು ಪಡೆದುದಲ್ಲದೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನೂ ನಿರ್ವಹಿಸಿರುವುದು ಇವರ ಬರವಣಿಗೆಯ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ’’ ಎಂದರು.

ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ನಾ.ಡಿ. ಸೋಜ ಅವರೊಂದಿಗಿನ ತಮ್ಮ ನಿಕಟ ಸಂಬಂಧವನ್ನು ನೆನಪಿಸಿಕೊಂಡರಲ್ಲದೇ ಭಾರತೀಯ ಸಂಸ್ಕೃತಿಯ ಬಗ್ಗೆ ಯಾವುದೇ ಮತ ಭೇದವಿಲ್ಲದೆ ಅವರ ಸ್ವತಂತ್ರ ನಿಲುವು ಶ್ಲಾಘನೀಯವಾದದ್ದು ಎಂದರು.

ರಾತ್ರಿಯಿಡೀ ಯಕ್ಷಗಾನ ಪ್ರದರ್ಶನ ವೀಕ್ಷಿಸಿ ಸಂತಸಪಡುತ್ತಿದ್ದ ಅವರ ಯಕ್ಷಗಾನ ಪ್ರೀತಿಯನ್ನು ಸ್ಮರಿಸಿದರು.

ಈ ಸಂದರ್ಭ ಧರ್ಮದರ್ಶಿ ಹರಿಕೃಷ್ಣ ಪುನರೂರು, ಡಾ. ಎಂ.ಬಿ. ಪುರಾಣಿಕ್, ಎಸ್.ವಿ. ಪ್ರಭಾಕರ ಶರ್ಮ, ಪಿ. ಬಿ. ಹರೀಶ್ ರೈ, ಡಾ. ಎಂ.ಪ್ರಭಾಕರ ಜೋಶಿ, ಎಚ್. ಶಶಿಧರ ಶೆಟ್ಟಿ, ಸುಧಾಕರ ರಾವ್ ಪೇಜಾವರ, ಟಿ. ಸುಬ್ರಹ್ಮಣ್ಯ ರಾವ್, ಚಂದ್ರಶೇಖರ ಮಯ್ಯ, ಕೆ. ತಾರಾನಾಥ ಹೊಳ್ಳ., ಪ್ರಭಾಕರ ರಾವ್ ಪೇಜಾವರ, ಶೇಷಾದ್ರಿ ಪಿ. ಭಟ್,ಪ್ರಕಾಶ್ ನಾಯಕ್, ಸಿ. ರಮೇಶ ಆಚಾರ್ಯ, ಭುವನಾಭಿರಾಮ ಉಡುಪ, ಕೃಷ್ಣಮೂರ್ತಿ, ಜೆ.ಕೆ. ಭಟ್ ಸೇರಾಜೆ, ತಮ್ಮ ಲಕ್ಷ್ಮಣ, ಪಿ.ವಿ. ಪರಮೇಶ್, ಸುಮಾ ಪ್ರಸಾದ್, ಪೂರ್ಣಿಮಾ ರಾವ್ ಪೇಜಾವರ, ತೋನ್ಸೆ ಪುಷ್ಕಳ ಕುಮಾರ್, ಡಾ. ಪ್ರಸನ್ನ ರೈ. ಕೆ, ದಯಾನಂದ ಕಟೀಲ್ ಇವರು ಉಪಸ್ಥಿತರಿದ್ದು ನಾ.ಡಿ’ಸೋಜಾರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X