Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಿಎಂ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ...

ಪಿಎಂ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ರಾಜ್ಯ ಸರಕಾರ ಅಡ್ಡಗಾಲು: ಸಂಸದ ಬ್ರಿಜೇಶ್ ಚೌಟ ಆರೋಪ

ವಾರ್ತಾಭಾರತಿವಾರ್ತಾಭಾರತಿ8 Jan 2025 10:56 PM IST
share
ಪಿಎಂ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ರಾಜ್ಯ ಸರಕಾರ ಅಡ್ಡಗಾಲು: ಸಂಸದ ಬ್ರಿಜೇಶ್ ಚೌಟ ಆರೋಪ

ಮಂಗಳೂರು, ಜ.8: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರವು ದೇಶದಲ್ಲಿ 70ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಕ್ಕೆ ಪ್ರಾರಂಭಿಸಿರುವ ಪಿಎಂ-ಆಯುಷ್ಮಾನ್ ಭಾರತ್ ಯೋಜನೆಗೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಡ್ಡಗಾಲು ಹಾಕುವ ಮೂಲಕ ಹಿರಿಯ ನಾಗರಿಕರ ಜೀವದ ಜತೆಗೆ ಚೆಲ್ಲಾಟವಾಡುವ ಅತ್ಯಂತ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.

ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಆಯುಷ್ಮಾನ್ ಭಾರತ್ ಪಿಎಂ ಜನ್‌ಆರೋಗ್ಯ ಯೋಜನೆ(ಎಬಿ-ಪಿಎಂ-ಜೆಎವೈ)ಯನ್ನು ದೇಶಾದ್ಯಂತ 2024 ನವೆಂಬರ್ ತಿಂಗಳಲ್ಲಿ ಜಾರಿಗೊಳಿಸಲಾಗಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಇನ್ನು ಕೂಡ ಹಿರಿಯ ನಾಗರಿಕರ ಜೀವ ಕಾಪಾಡುವ ಅತ್ಯಮೂಲ್ಯವಾದ ಈ ಯೋಜನೆಯನ್ನು ಜಾರಿಗೆ ತಂದಿಲ್ಲ. ಈ ಯೋಜನೆಯನ್ನು ಅನುಷ್ಠಾನಗೊಳಿಸುವುದಕ್ಕೆ ರಾಜ್ಯ ಸರಕಾರ ಮೀನಾಮೇಷ ಎಣಿಸುತ್ತಿದೆ ಎಂದು ಚೌಟ ಹೇಳಿದ್ದಾರೆ.

ಸಿದ್ದರಾಮಯ್ಯ ಸರಕಾರವು ಕರ್ನಾಟಕದಲ್ಲಿ ಅತ್ಯಂತ ತುರ್ತಾಗಿ ಅಗತ್ಯವಿರುವ ಈ ಆರೋಗ್ಯ ಯೋಜನೆಯನ್ನು ಜಾರಿಗೊಳಿಸದೆ. ಇಲ್ಲಿನ ಕೋಟ್ಯಂತರ ಹಿರಿಯ ನಾಗರಿಕರ ಜೀವದ ಜತೆ ಕರುಣೆಯಿಲ್ಲದ ರೀತಿಯಲ್ಲಿ ನಡೆದುಕೊಳ್ಳುತ್ತಿರು ವುದು ದುರದೃಷ್ಟಕರ ಹಾಗೂ ಅತ್ಯಂತ ನೋವಿನ ವಿಚಾರ ಎಂದು ಹೇಳಿದ್ದಾರೆ.

ಆಸ್ಪತ್ರೆಗಳಿಗೆ ಕ್ಯಾನ್ಸರ್ ಸೇರಿದಂತೆ ಪ್ರಮುಖ ಕಾಯಿಲೆಗಳಿಗೆ ಚಿಕಿತ್ಸೆಗೆ ಬರುವ ಹಿರಿಯ, ಜೀವಗಳಿಗೆ ಚಿಕಿತ್ಸೆ ನಿರಾಕರಿಸು ತ್ತಿರುವ ಸರಕಾರದ ಈ ರೀತಿಯ ವರ್ತನೆ ಅತ್ಯಂತ ಅಮಾನವೀಯವಾಗಿದೆ ಎಂದು ಅಭಿಪಾಯಪಟ್ಟಿದ್ದಾರೆ.

ಕರ್ನಾಟಕದ ಎಲ್ಲ ಅರ್ಹ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಒದಗಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸರಕಾರದ ಇಚ್ಚಾಶಕ್ತಿಯ ಕೊರತೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿರುವುದು ಕಾಂಗ್ರೆಸ್ ಸರಕಾರದ ನಿಷ್ಕ್ರೀಯತೆಗೆ ಸಾಕ್ಷಿಯಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯನ್ನು ಕಾರ್ಯಗತಗೊಳಿಸಬೇ ಕಾಗಿದ್ದ ರಾಜ್ಯ ಸರಕಾರ ಅನುದಾನ ಹಂಚಿಕೆಯಲ್ಲಿ ಮಾಹಿತಿ ಕೊರತೆಯನ್ನು ಉಲ್ಲೇಖಿಸಿ ಕುಂಟುನೆಪ ಹೇಳುತ್ತಾ ಕಾಲಹರಣ ಮಾಡುತ್ತಿದ್ದು ಆರೋಗ್ಯ ಸೌಲಭ್ಯಗಳ ಪ್ರಯೋಜನ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಚೌಟ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಾಣಂತಿಯರ ಮತ್ತು ನವಜಾತ ಶಿಶುಗಳ ಸರಣಿ ಸಾವು ಸಂಭವಿಸುತ್ತಿದ್ದರೂ ಕಣ್ಮುಚ್ಚಿ ಕುಳಿತಿರುವ ರಾಜ್ಯ ಸರಕಾರ ಇದೀಗ ಆಯುಷ್ಮಾನ್ ಭಾರತ’ ಯೋಜನೆ ಜಾರಿಗೆ ಅಡ್ಡಗಾಲು ಹಾಕುತ್ತಿದೆ. ಮತ್ತೊಂದೆಡೆ, ಹಾಲು, ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಕೂಡ ನಿರಂತರವಾಗಿ ಏರಿಸುವ ಮೂಲಕ ಅಕ್ಷರಶಃ ಜನವಿರೋಧಿ ಮತ್ತು ಬಡವರ ವಿರೋಧಿ ಸರಕಾರ ಎನ್ನುವುದನ್ನು ಸಾಬೀತುಪಡಿಸುತ್ತಿದೆ. ಹಿರಿಯ ನಾಗರಿಕರಿಗೆ ಚಿಕಿತ್ಸೆ ನಿರಾಕರಿಸುವ ಜತೆಗೆ ಆಸ್ಪತ್ರೆಗೆ ಹೋಗುವ ಬಡವರ್ಗದ ಮೃತ ಬಾಣಂತಿಯರ ಕುಟುಂಬಗಳಲ್ಲಿ ಸೂತಕದ ಪರಿಸ್ಥಿತಿ ಯನ್ನು ಕಾಂಗ್ರೆಸ್ ಸರಕಾರ ಮಾಡುತ್ತಿರುವುದು ಖೇದಕರ ಎಂದು ಚೌಟ ಕಳವಳ ವ್ಯಕ್ತಪಡಿಸಿದ್ದಾರೆ.

ಅಮೂಲ್ಯವಾದ ಜನರ ಜೀವಗಳನ್ನು ಪಣಕ್ಕಿಟ್ಟು ರಾಜಕೀಯ ಮಾಡುವುದನ್ನು ಬಿಟ್ಟು ರಾಜ್ಯ ಸರಕಾರ ತುರ್ತಾಗಿ ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ಚೌಟ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X