Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್: ರಾಷ್ಟ್ರಮಟ್ಟದ ವಾಲಿಬಾಲ್...

ಸುರತ್ಕಲ್: ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

ವಾರ್ತಾಭಾರತಿವಾರ್ತಾಭಾರತಿ12 Jan 2025 7:08 PM IST
share
ಸುರತ್ಕಲ್: ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

ಸುರತ್ಕಲ್: ವೀರಕೇಸರಿ ತಡಂಬೈಲ್ ಸುರತ್ಕಲ್ ಇದರ ಆಶ್ರಯದಲ್ಲಿ ಡಾ. ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ಹಾಗೂ ಮಾಜಿ ಮೇಯರ್ ರಜನಿ ದುಗ್ಗಣ್ಣ ಅವರ ಸ್ಮರಣಾರ್ಥ ಪುರುಷರ ಮುಕ್ತ ರಾಷ್ಟ್ರೀಯ ಮಟ್ಟದ ಆಹ್ವಾನಿತ ಆರು ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವೀರಕೇಸರಿ ಟ್ರೋಫಿ-2025 ಇದರ ಉದ್ಘಾಟನಾ ಸಮಾರಂಭ ಶನಿವಾರ ಸಂಜೆ ಸುರತ್ಕಲ್ ಬಂಟರ ಭವನದ ಬಳಿ ನಡೆಯಿತು.

ಕಾರ್ಯಕ್ರಮವನ್ನು ಉದ್ಯಮಿ ಮಧ್ಯಗುತ್ತು ಕರುಣಾಕರ ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, ಕ್ರೀಡೆ ಮಾತ್ರವಲ್ಲದೆ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ವೀರಕೇಸರಿ ಸಂಘಟನೆ ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಪರ ಕಾಳಜಿಯೊಂದಿಗೆ ಕೆಲಸ ಮಾಡಲಿ ಎಂದು ಶುಭಹಾರೈಸಿದರು.

ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಸತೀಶ್ ಮಾತನಾಡಿ, ರಾಜ್ಯದಲ್ಲಿ ಬೇರೆಲ್ಲೂ ನಮ್ಮ ಜಿಲ್ಲೆಯಲ್ಲಿ ನಡೆಯು ವಂತೆ ಶಿಸ್ತುಬದ್ಧವಾಗಿ ವಾಲಿಬಾಲ್ ಪಂದ್ಯಾಟ ನಡೆಯುವುದಿಲ್ಲ. ಕೇರಳದಲ್ಲಿ ಕ್ರೀಡಾಕೂಟಗಳು ಸಾಮಾನ್ಯವಾಗಿ ನಡೆಯುತ್ತದೆ. ಯಾಕೆಂದರೆ ನಮ್ಮಲ್ಲಿ ಕ್ರೀಡೆಗೆ ಸಹಕಾರ ನೀಡುವವರು ಕಡಿಮೆ. ಆದರೆ ಇಲ್ಲಿ ಬಹಳಷ್ಟು ಮಂದಿ ಬೆಂಬಲ ನೀಡುತ್ತಿದ್ದಾರೆ. ಇದು ನಿಜಕ್ಕೂ ಶ್ಲಾಘನೀಯ ಎಂದರು.

ವೇದಿಕೆಯಲ್ಲಿ ಬಿಎಎಸ್ ಎಫ್ ನ ಸೀನಿಯರ್ ಮ್ಯಾನೇಜರ್ ಸಂತೋಷ್ ಪೈ, ವೈದ್ಯ ಶಶಿರಾಜ್ ಶೆಟ್ಟಿ, ಅಂಜನಾ ಎಂ. ಶೆಟ್ಟಿ, ಯಜ್ನೇಶ್ವರ್ ಬರ್ಕೆ, ಉದ್ಯಮಿ ಸತೀಶ್ ಮುಂಚೂರು, ಮನಪಾ ಸದಸ್ಯ ಲೋಕೇಶ್ ಬೊಳ್ಳಾಜೆ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಉದ್ಯಮಿಗಳಾದ ಗಿರೀಶ್ ಶೆಟ್ಟಿ ಕಟೀಲ್, ಸುಧಾಕರ್ ಪೂಂಜಾ, ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಟ್ರಸ್ಟಿ ಸಹನಾ ರಾಜೇಶ್ ರೈ, ಸಂಘಟನೆಯ ಗೌರವಾಧ್ಯಕ್ಷ ಸಂಚಾಲಕ ಮಹಾಬಲ ಪೂಜಾರಿ ಕಡಂಬೋಡಿ, ಅಧ್ಯಕ್ಷ ಸುಕುಮಾರ್ ತಡಂಬೈಲ್, ಕಾರ್ಯದರ್ಶಿ ರೂಪೇಶ್ ರೈ, ಕೈಲಾಸ್ ತಡಂಬೈಲ್, ಪದ್ಮನಾಭ ಕರ್ಕೇರ, ರಾಘವೇಂದ್ರ ಶೆಟ್ಟಿ ತಡಂಬೈಲ್ ಮತ್ತಿತರರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಉದ್ಯಮಿ ಮಧ್ಯಗುತ್ತು ಕರುಣಾಕರ ಎಂ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಶಾಸಕ ಡಾ ವೈ ಭರತ್ ಶೆಟ್ಟಿ, ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ , ಪಾಂಡುರಂಗ ಕೆ ಪ್ರಭು ಕೊಡಿಪಾಡಿ, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್ ಭಾಗವಹಿಸಿದ್ದರು.

ಅನುಪ್ ಶೆಟ್ಟಿ ಸ್ತುತಿಸಿದರು. ಅಶೋಕ್ ಶೆಟ್ಟಿ ತಡಂಬೈಲ್ ಅತಿಥಿಗಳನ್ನು ಸ್ವಾಗತಿಸಿದರು. ನಿತೇಶ್ ಶೆಟ್ಟಿ ಎಕ್ಕಾರ್, ಬಿಂದಿಯ ಶೆಟ್ಟಿ, ಅನೂಪ್ ಶೆಟ್ಟಿ, ರಾಮಚಂದ್ರ ಶೆಟ್ಟಿ ತಡಂಬೈಲ್ ಕಾರ್ಯಕ್ರಮ ನಿರೂಪಿಸಿದರು.

ಪಂದ್ಯಾಟದಲ್ಲಿ ಆರು ತಂಡಗಳು ಭಾಗವಹಿಸಿದ್ದು ಪ್ರಥಮ‌ ಬಹುಮಾನವನ್ನು ಪಂಜ ಫ್ರೆಂಡ್ಸ್, ರನ್ನರ್ಸ್ ಅಪ್ ಪ್ರಶಸ್ತಿಯನ್ನು ಸುರತ್ಕಲ್ ಸ್ಟೈಕರ್ಸ್ ತೃತೀಯ ಪ್ರಶಸ್ತಿಯನ್ನು ಐಎಎಮ್ ಟೈಗರ್ ತಂಡ ಚತುರ್ಥ ಪ್ರಶಸ್ತಿಯನ್ನು ಎಂಎಫ್ ಸಿ ಮುಂಚೂರು ತಂಡ ಪಡೆದುಕೊಂಡಿತು. ಮಹಿಳಾ ವಿಭಾಗದಲ್ಲಿ ಉಜಿರೆ ಪ್ರಥಮ ಉಡುಪಿ ದ್ವಿತೀಯ ಪ್ರಶಸ್ತಿ ಪಡೆಯಿತು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X