Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಡಿ ಬೆಂಗ್ರೆ: ಸಿಗಾರ್ ಲೈಟರ್...

ಕೋಡಿ ಬೆಂಗ್ರೆ: ಸಿಗಾರ್ ಲೈಟರ್ ವಿಚಾರದಲ್ಲಿ ಇತ್ತಂಡಗಳ ನಡುವೆ ಘರ್ಷಣೆ; ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ13 Jan 2025 8:46 PM IST
share
ಕೋಡಿ ಬೆಂಗ್ರೆ: ಸಿಗಾರ್ ಲೈಟರ್ ವಿಚಾರದಲ್ಲಿ ಇತ್ತಂಡಗಳ ನಡುವೆ ಘರ್ಷಣೆ; ಪ್ರಕರಣ ದಾಖಲು

ಮಂಗಳೂರು: ತಣ್ಣಿರುಬಾವಿ ಗಣೇಶ ಕಟ್ಟೆ ಎಂಬಲ್ಲಿ ರವಿವಾರ ರಾತ್ರಿ ಕೋಡಿ ಬೆಂಗ್ರೆಯಲ್ಲಿ ಸಿಗಾರ್ ಲೈಟರ್ ವಿಚಾರದಲ್ಲಿ ಇತ್ತಂಡಗಳ ನಡುವೆ ಹೊಡೆದಾಟ ಸಂಭವಿಸಿದ ಘಟನೆ ವರದಿಯಾಗಿದೆ.

ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನುನ ಪೊಲೀಸರು ಬಂಧಿಸಿದ್ದಾರೆ.

ಘಟನೆಯ ವಿವರ ಇಂತಿವೆ: ರವಿವಾರ ರಾತ್ರಿ 11:45 ರ ಹೊತ್ತಿಗೆ ತಣ್ಣಿರುಬಾವಿ ಗಣೇಶ ಕಟ್ಟೆ ಎಂಬಲ್ಲಿ ವೆಂಕಟೇಶ, ಕಾರ್ತಿಕ್, ಸಂತೋಷ್, ಸೈಫ್, ಧನುಷ್, ಪ್ರಜ್ವಲ್ ಎಂಬವರು ಪಾನಮತ್ತರಾಗಿ ಸಿಗರೇಟ್ ಸೇದುತ್ತಿದ್ದಾಗ ಅಲ್ಲಿಗೆ ಆಗಮಿಸಿದ ಪ್ರೀತಂ ಮತ್ತು ಸನ್ವೀತ್ ಇವರಿಂದ ಸಿಗಾರ್ ಲೈಟರ್ ಕೇಳಿದ್ದಾರೆ.

ಆಗ ಪ್ರಜ್ವಲ್ ಲೈಟರ್‌ನ್ನು ಪ್ರೀತಂ ತಂಡಕ್ಕೆ ನೀಡಿದ್ದಾರೆ ಎನ್ನಲಾಗಿದೆ. ಬಳಿಕ ಸಿಗಾರ್ ಲೈಟರ್ ವಾಪಾಸು ಕೊಡದೇ ಇದ್ದಾಗ ಲೈಟರ್ ಕೊಡಿ ಎಂದು ಅವರಲ್ಲಿ ಪ್ರಜ್ವಲ್ ಕೇಳಿದ್ದಾನೆ. ಆಗ ‘ನೀವು ಯಾಕೆ ಧಮ್ಕಿ ಹಾಕುತ್ತಿರೀ ’ ಎಂದು ಹೇಳಿ ಅವರಲೊಬ್ಬ ಪ್ರಜ್ವಲ್‌ನೊಂದಿಗಿದ್ದ ಕಾರ್ತಿಕ್ ತಲೆಗೆ ಬೀಯರ್ ಬಾಟ್ಲಿಯಿಂದ ಹಲ್ಲೆ ನಡೆಸಿದ್ದಾನೆ. ಆಗ ಇತ್ತಂಡಗಳ ನಡುವೆ ಹೊಡೆದಾಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪಣಂಬೂರು ಠಾಣೆಯಲ್ಲಿ 2 ಪ್ರತ್ಯೆಕ ಪ್ರಕರಣಗಳು ದಾಖಲಾಗಿದೆ ಈ ಸಂಬಂಧ ಪ್ರೀತಂ ಎಂಬವರು ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ವೆಂಕಟೇಶ್, ಕಾರ್ತಿಕ್, ಸಂತೋಷ್, ಸೈಪ್, ಧನುಷ್, ಪ್ರಜ್ವಲ್ ಎಂಬವರು ಆರೋಪಿಗಳಾಗಿದ್ದು , ಇವರಲ್ಲಿ ಕಾರ್ತಿಕ್, ಸಂತೋಷ್, ಧನುಷ್, ಪ್ರಜ್ವಲ್ ಎಂಬವರನ್ನು ಬಂಧಿಸಲಾಗಿದೆ.

ಪ್ರಜ್ವಲ್ ಎಂಬಾತನು ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಇನ್ನೊಂದು ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಪ್ರೀತಂ ಮತ್ತು ಸನ್ವೀತ್ ಹಾಗೂ ಇತರರು ಆರೋಪಿಗಳಾಗಿರುತ್ತಾರೆ

ವಾಟ್ಸಪ್‌ನಲ್ಲಿ ಹರದಾಡಿದ ಸುಳ್ಳು ಸುದ್ದಿ: ಈ ಘಟನೆಯ ಬೆನ್ನೆಲ್ಲೆ ವಾಟ್ಸಪ್‌ನಲ್ಲಿ ಬೆಂಗ್ರೆ ಪರಿಸರದಲ್ಲಿ ಸುಳ್ಳು ಸುದ್ದಿ ಹರಿದಾಡಲಾರಂಭಿಸಿದೆ ಎಂದು ನಗರ ಪೊಲೀಸ್ ಆಯುಕ್ತರು ಈ ಸಂಬಂಧ ಸ್ಪಷ್ಟನೆ ನೀಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಡಿಸಿಪಿ (ಕಾನೂನು ಹಾಗೂ ಸುವ್ಯವಸ್ಥೆ) ಸಿದ್ದಾರ್ಥ್ ಗೋಯಲ್ , ಮಂಗಳೂರು ನಗರ ಹಾಗೂ ಎಸಿಪಿ, ಸಿಸಿಬಿ, ಎಸಿಪಿ ಉತ್ತರ ಉಪ ವಿಭಾಗ, ಪಣಂಬೂರು ಪೊಲೀಸ್ ನಿರೀಕ್ಷಕರು ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ವಾಟ್ಸಪ್‌ನಲ್ಲಿ ಹರದಾಡುತ್ತಿರುವುದು ಸುಳ್ಳು ಸುದ್ದಿಯಾಗಿ ರುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X