Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್...

ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಬ್ರಿಜೇಶ್ ಚೌಟ ಸೂಚನೆ

ವಾರ್ತಾಭಾರತಿವಾರ್ತಾಭಾರತಿ14 Jan 2025 6:38 PM IST
share
ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ  ಬ್ರಿಜೇಶ್ ಚೌಟ ಸೂಚನೆ

ಮಂಗಳೂರು: ಸವಣೂರು, ಸುಬ್ರಹ್ಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿ ಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಶೀಲ್ದಾರ್‌ಗೆ ಸೂಚನೆ ನೀಡಿದ್ದಾರೆ.

ಕಡಬ ತಾಲೂಕು ಕಚೇರಿಯಲ್ಲಿ ಜನವರಿ ೧೩ ರಂದು ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ‘‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿ.ಎಂ. ಕುಸುಮ್ ಯೋಜನೆಯಡಿ ದೇಶದೆಲ್ಲೆಡೆ ಸೋಲಾರ್ ಪಾರ್ಕ್‌ಗಳನ್ನು ಸ್ಥಾಪಿಸಿ ಗ್ರೀನ್ ಎನರ್ಜಿಗೆ ಒತ್ತು ನೀಡುವಂತೆ ಕರೆ ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಇದೀಗ ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸಲು ಜಾಗ ಗುರುತಿಸುವಂತೆ ಸಚಿವಾಲಯದಿಂದ ಮೆಸ್ಕಾಂಗೆ ಪತ್ರ ಬಂದಿದೆ. ಹೀಗಾಗಿ, ಒಂದು ವಾರದೊಳಗೆ ಕಡಬ ತಾಲೂಕು ವ್ಯಾಪ್ತಿಯಲ್ಲಿ ಪಿ.ಎಂ. ಕುಸುಮ್ ಸೋಲಾರ್ ಪಾರ್ಕ್ ಸ್ಥಾಪನೆಗೆ ಸೂಕ್ತ ಸ್ಥಳಾವಕಾಶದ ಬಗ್ಗೆ ಪರಿಶೀಲಿಸಿ ಅದರ ಸಾಧಕ-ಬಾಧಕಗಳ ಬಗ್ಗೆ ವರದಿ ನೀಡಬೇಕಾಗಿದೆ ’’ ಎಂದರು.

ಕೋಡಿಂಬಾಳ ರೈಲು ಅಭಿವೃದ್ಧಿಯ ಭರವಸೆ

ಸಂಸದರು ಕಡಬ ಲಾಲೂಕಿನ ಆಡಳಿತ ಸೌಧದಲ್ಲಿ ತಾಲೂಕಿನ ಜನತೆಯ ಕುಂದು-ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿ ಸುವ ವೇಳೆ, ಕಡಬ ತಾಲೂಕಿನ ಕೋಡಿಂಬಾಳದ ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಿದರೆ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸ್ಥಳೀಯರು ಮನವಿ ನೀಡಿದ್ದಾರೆ.

ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಂಸದ ಕ್ಯಾ.ಚೌಟ ಸಂಬಂಧಪಟ್ಟವರ ಜತೆಗೆ ಚರ್ಚಿಸಿ ರೈಲು ನಿಲ್ದಾಣದ ಉನ್ನತೀಕರಣಕ್ಕೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ,ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ,ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಬಿಜೆಪಿ ಪ್ರಮುಖರಾದ ಪುಲಸ್ತ್ಯ ರೈ, ಪ್ರಕಾಶ್ ಎನ್.ಕೆ, ಮಧುಸೂದನ್ ಕೊಂಬಾರು,ರವಿಪ್ರಸಾದ್ ಶೆಟ್ಟಿ ನೆಲ್ಯಾಡಿ, ಸುರೇಶ್ ದೆಂತಾರು,ರಮೇಶ ಕಲ್ಪುರೆ, ಆಶೋಕ್ ನೆಕ್ಕರೆ, ವಾಡ್ಯಪ್ಪ ಗೌಡ,ಸದಾಶಿವ ಶೆಟ್ಟಿ ಮಾರಂಗ, ಲಕ್ಷ್ಮೀಶ ಪೆಲತ್ತಾರು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X