Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದ್ಯಾರ್ಥಿಗಳಿಗೆ ಹಾಸ್ಟೆಲ್‌...

ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಸೌಲಭ್ಯಕ್ಕೆ ಹೆಚ್ಚು ಹೊತ್ತು ನೀಡಲು ಶಾಸಕ ಭರತ್ ಶೆಟ್ಟಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Jan 2025 5:13 PM IST
share
ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಸೌಲಭ್ಯಕ್ಕೆ ಹೆಚ್ಚು ಹೊತ್ತು ನೀಡಲು ಶಾಸಕ ಭರತ್ ಶೆಟ್ಟಿ ಸೂಚನೆ

ಮಂಗಳೂರು, ಜ.16: ಮಂಗಳೂರು ನಗರ ಶಿಕ್ಷಣದ ಕೇಂದ್ರವಾಗಿರುವ ಹಿನ್ನೆಲೆಯಲ್ಲಿ ಇಲ್ಲಿಗೆ ದ.ಕ. ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮತ್ತು ರಾಜ್ಯದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಆಗಮಿಸುತ್ತಿದ್ದಾರೆ. ಹೀಗಾಗಿ ಇಲ್ಲಿ ಇನ್ನಷ್ಟು ಹಾಸ್ಟೆಲ್‌ಗಳ ಆವಶ್ಯಕತೆ ಇದೆ. ಆದ ಕಾರಣ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಐದು ವರ್ಷಗಳಿಗೆ ಯೋಜನೆ ತಯಾರಿಸುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ .ಭರತ್ ಶೆಟ್ಟಿ ಸೂಚನೆ ನೀಡಿದ್ದಾರೆ.

ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಾಸ್ಟೆಲ್ ಸೀಟ್‌ಗಳಿಗೆ ಬೇರೆ ಕಡೆಗಳಿಂದ ಬರುವ ವಿದ್ಯಾರ್ಥಿಗಳಿಂದ ಸಿಗುತ್ತಿಲ್ಲ ಎಂಬ ಕೊರಗು ಇದೆ. ಅದನ್ನು ನಿವಾರಿ ಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ. ನಾವು ವರ್ಷದಲ್ಲಿ ಎಷ್ಟು ಬೇಡಿಕೆ ಹೆಚ್ಚಾಗುತ್ತದೆ ಎಂಬ ವಿಚಾರವನ್ನು ತಿಳಿದು ಕೊಂಡು ಮುಂದಿನ ಐದು ವರ್ಷಗಳಿಗೆ ಯೋಜನೆ ರೂಪಿಸಬೇಕಾಗಿದೆ.

ಬೇರೆ ಜಿಲ್ಲೆಗಳ ಶಾಸಕರು ಕೂಡಾ ಮಂಗಳೂರಿನ ಶಾಸಕರಲ್ಲಿ ತಮ್ಮಲ್ಲಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೀಟ್ ದೊರಕಿಕೊ ಡುವಂತೆ ಕೇಳುತ್ತಿದ್ದಾರೆ. ಈಗಾಗಲೇ ಬಿಸಿಎಂ ಎರಡು ಹಾಸ್ಟೆಲ್‌ಗಳು ನಿರ್ಮಾಣವಾಗುತ್ತಿದೆ. ಆದರೆ ಅದು ಸಾಲದು ಎಂದರು.

ಜಿಲ್ಲೆಯ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ಸೀಟು ಸಿಕ್ಕಿದರೆ ಹೆಚ್ಚು ಅನುಕೂಲವಾಗುತ್ತದೆ. ಕಡಿಮೆ ಖರ್ಚಿನಲ್ಲಿ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರಕಿಸಿಕೊಡುವ ನಿಟ್ಟಿನಲ್ಲಿ ಹಾಸ್ಟೆಲ್‌ಗಳ ವ್ಯವಸ್ಥೆಯ ಕಡೆಗೆ ನಾವು ಹೆಚ್ಚು ಗಮನ ನೀಡಬೇಕಾಗಿದೆ. ಹಾಸ್ಟೆಲ್‌ಗಳ ಕಟ್ಟಡ ನಿರ್ಮಾಣಕ್ಕೆ ಜಾಗದ ಸಮಸ್ಯೆ ಇಲ್ಲ ಎಂದು ಅವರು ಹೇಳಿದರು.

*ಸರಕಾರಿ ಆಯುರ್ವೇದ ಆಸ್ಪತ್ರೆ: ಮಂಗಳೂರಿನಲ್ಲಿ ಸುಸಜ್ಜಿತವಾದ ನೂರು ಹಾಸಿಗೆಯ ಆಯುರ್ವೇದ ಆಸ್ಪತ್ರೆಯ ಅಗತ್ಯತೆ ಇದೆ. ಈಗ ಖಾಸಗಿ ಆಯುರ್ವೇದ ಆಸ್ಪತ್ರೆಗಳು ಚೆನ್ನಾಗಿ ನಡೆಯುತ್ತಿದೆ. ಆನೇಕ ಖಾಸಗಿ ಆಯುರ್ವೇದ ಆಸ್ಪತ್ರೆ ಗಳು ಇದ್ದರೂ ಇಲ್ಲಿನ ಬೇಡಿಕೆ ಈಡೇರಿಕೆ ಸಾಧ್ಯವಾಗುತ್ತಿಲ್ಲ. ರೋಗಿಗಳಿಗೆ ವೈದ್ಯರ ಭೇಟಿಗೆ ಅವಕಾಶ ಬೇಗನೆ ಸಿಗುತ್ತಿಲ್ಲ. ಅಷ್ಟೊಂದು ಬೇಡಿಕೆ ಇದೆ. ಸರಕಾರಿ ಆಯುರ್ವೇದ ಆಸ್ಪತ್ರೆಗೆ ಆಯುಷ್ ಇಲಾಖೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಶಾಸಕ ಭರತ್ ಶೆಟ್ಟಿ ಸಲಹೆ ನೀಡಿದರು.

ಉತ್ತಮ ಸರಕಾರಿ ಆಯುರ್ವೇದ ಆಸ್ಪತ್ರೆ ಇದ್ದರೆ ಸರಕಾರಿ ಆಯುರ್ವೇದ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮುಂದೆ ಅನುಕೂಲವಾಗುತ್ತದೆ ಎಂದರು. ಮಲೇರಿಯಾ ನಿಯಂತ್ರಣದಲ್ಲಿದೆ. ಆದರೆ ಡೆಂಗ್ಯು ನಿಯಂತ್ರಣಕ್ಕೆ ಇಲಾಖೆ ಗಮನ ಹರಿಸಬೇಕು ಎಂದು ಹೇಳಿದರು.

ಮಂಗಳೂರು ತಾಲೂಕು ಪಂಚಾಯತ್ ಆಡಳಿತ ಅಧಿಕಾರಿ ರವಿ ಕುಮಾರ್, ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ , ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X