Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಮೀಫ್ ಶಾಲಾಡಳಿತ ಮಂಡಳಿ...

ಮಂಗಳೂರು: ಮೀಫ್ ಶಾಲಾಡಳಿತ ಮಂಡಳಿ ಪ್ರತಿನಿಧಿಗಳ ವಿಶೇಷ ಸಭೆ

ವಾರ್ತಾಭಾರತಿವಾರ್ತಾಭಾರತಿ16 Jan 2025 9:33 PM IST
share
ಮಂಗಳೂರು: ಮೀಫ್ ಶಾಲಾಡಳಿತ ಮಂಡಳಿ ಪ್ರತಿನಿಧಿಗಳ ವಿಶೇಷ ಸಭೆ

ಮಂಗಳೂರು: ದ.ಕ ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಎಲ್ಲಾ ಅಧ್ಯಕ್ಷರು/ಸಂಚಾಲಕರು/ ಪ್ರಾಂಶುಪಾಲರು/ಮುಖ್ಯ ಶಿಕ್ಷಕರ ಸಭೆಯು ಬುಧವಾರನಗರದ ಕಂಕನಾಡಿಯಲ್ಲಿರುವ ಜಂಇಯ್ಯತುಲ್ ಫಲಾಹ್ ಸಭಾಂಗಣದಲ್ಲಿ ಜರುಗಿತು.

ಸಂಸ್ಥೆಯ ಗೌರವಾಧ್ಯಕ್ಷ ಉಮರ್ ಟೀಕೆ ಮಾತನಾಡಿ ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಿ, ಜಾತ್ಯತೀತ ನೆಲೆಯಲ್ಲಿ ಈ ಸಂಸ್ಥೆಗಳನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಸಲಹೆ ನೀಡಿದರು.

ವಿಶೇಷ ಆಮಂತ್ರಿತರಾಗಿ ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಉಳ್ಳಾಲ ಇದರ ಅಧ್ಯಕ್ಷ ಬಿ.ಜೆ ಇಬ್ರಾಹಿಂ ಹಾಜಿ ಮತ್ತು ಯೆನೆಪೊಯ ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ ಬಹರೈನ್ ಇದರ ನಿರ್ದೇಶಕ ಪ್ರೊ.ಸಿನಾನ್ ಝಕರಿಯಾ ಭಾಗವಹಿಸಿದ್ದರು.

ನಾಗರಿಕ ಸೇವಾ ಪರೀಕ್ಷೆಗಳಾದ IAS / IPS ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸಲು ಮುಂದಿನ ವರ್ಷದಿಂದ ಮೀಫ್ ವಿದ್ಯಾ ಸಂಸ್ಥೆಗಳಲ್ಲಿ 8, 9 ಮತ್ತು ಪ್ರಥಮ ಪಿಯುಸಿ ತರಗತಿಗಳಿಗೆ IAS / IPS ಪಠ್ಯಕ್ರಮಗಳನ್ನು ಅಳವಡಿಸಿ ವಿದ್ಯಾರ್ಥಿಗಳನ್ನು ಉತ್ತೇಜಿಸಿ ಆ ಮೂಲಕ ಹೆಚ್ಚಿನ ತರಬೇತಿಗೆ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಸಭೆ ನಿರ್ಧರಿಸಿತು.

ಉಭಯ ಜಿಲ್ಲೆಗಳಲ್ಲಿ ನಡೆಸುತ್ತಿರುವ ಎಸೆಸ್ಸೆಲ್ಸಿ ನಿಧಾನ ಕಲಿಕಾ ಕಾರ್ಯಾಗಾರಗಳು ಅತ್ಯಂತ ಪರಿಣಾಮಕಾರಿಯಾಗಿ ಮೂಡಿ ಬಂದಿರುವುದರಿಂದ ಇದನ್ನು ಮುಂದುವರಿಸಲು, ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಎಪ್ರಿಲ್ ತಿಂಗಳಿನಿಂದ ಯೆನೆಪೊಯ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ 50 ದಿವಸಗಳ CRASH COURSE ನಡೆಸಲು, ಪಿಯುಸಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಮಂಗಳೂರಿನಲ್ಲಿ IBM CERTIFIED COURSE ನಡೆಸಲು ತೀರ್ಮಾನಿಸಲಾಯಿತು.

ಈಗಾಗಲೆ ವಿವಿಧ ವಿದ್ಯಾ ಸಂಸ್ಥೆಗಳಿಂದ ಪ್ರಾಯೋಜಕತ್ವವನ್ನು ಪಡೆದು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ 297 ವಿದ್ಯಾರ್ಥಿಗಳಿಗೆ ವಿವಿಧ ವಿಭಾಗದಲ್ಲಿ ಮೀಫ್ ಮೂಲಕ ಉಚಿತ ಶಿಕ್ಷಣವನ್ನು ನೀಡುತ್ತಿದೆ. ಈ ಸಂಖ್ಯೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಇನ್ನಷ್ಟು ಹೆಚ್ಚಿಸಿ ಪಿಯುಸಿ ಮತ್ತು ಇಂಜಿನಿಯರಿಂಗ್ ಒಳಗೊಂಡು B.COM , BCA, BSC, BBA ವಿಭಾಗಗಳಲ್ಲಿಯೂ ಪ್ರತಿಭಾವಂತ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸುವಂತೆ ಉಚಿತ ಸೀಟುಗಳ ವ್ಯವಸ್ಥೆ ಮಾಡಲು ಹಾಗೂ ವಿದ್ಯಾ ಸಂಸ್ಥೆಗಳಲ್ಲಿ ಶಿಸ್ತು ಬದ್ಧತೆಯನ್ನು ರೂಪಿಸಲು ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ SCOUT ಮತ್ತು GUIDE ತರಗತಿಗಳನ್ನು ಪ್ರಾರಂಭಿಸಲು ನಿರ್ಧರಿಸಲಾಯಿತು.

ಕೊಡಗು ಜಿಲ್ಲೆಯ UMMATH ONE ಸಂಸ್ಥೆಯ ಕೋರಿಕೆಯಂತೆ ಮೀಫ್ ಕಾರ್ಯ ವ್ಯಾಪ್ತಿಯನ್ನು ಕೊಡಗು ಜಿಲ್ಲೆಗೆ ವಿಸ್ತರಿಸುವ ನಿಟ್ಟಿನಲ್ಲಿ ಮೀಫ್ ನಿಯೋಗವೊಂದು ಕೊಡಗು ಜಿಲ್ಲೆಗೆ ಶೀಘ್ರವೇ ಭೇಟಿ ನೀಡಿ ಪರಿಶೀಲಿಸಲು ನಿರ್ಧರಿಸಲಾಯಿತು.

ಮುಂದಿನ ವರ್ಷದಿಂದ CLAT (COMMON LAW AWARENESS TEST) ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಜಾಗೃತಿ ಶಿಬಿರ ನಡೆಸಲು ನಿರ್ಧರಿಸಲಾಯಿತು.

ಮೀಫ್ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ರಿಯಾಝ್ ಅಹ್ಮದ್ ಕಣ್ಣೂರು, ಉಪಾಧ್ಯಕ್ಷರಾದ ಮುಸ್ತಫ ಸುಳ್ಯ ಮತ್ತು ಶಾಬಿ ಅಹ್ಮದ್ ಕಾಝಿ, ಕೋಶಾಧಿಕಾರಿ ನಿಸಾರ್ ಫಕೀರ್ ಮುಹಮ್ಮದ್, ಆಡಳಿತ ಕಾರ್ಯದರ್ಶಿ ಅನ್ವರ್ ಹುಸೈನ್, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಒಕ್ಕೂಟದ ೮೦ ವಿದ್ಯಾಸಂಸ್ಥೆಗಳ 135 ಪ್ರತಿನಿಧಿಗಳು ಭಾಗವಹಿಸಿದ್ದರು.

ಮೀಫ್ ಕಾರ್ಯಕ್ರಮ ಕಾರ್ಯದರ್ಶಿ ಮುಹಮ್ಮದ್ ಶಾರಿಕ್ ಕಾರ್ಯಕ್ರಮ ನಿರೂಪಿಸಿದರು. ಸದಸ್ಯ ಪರ್ವೇಝ್ ಅಲಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X