Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಸಾಧ್ಯ ಎನ್ನುವುದು ಸೃಷ್ಟಿಯಲ್ಲೇ ಇಲ್ಲ:...

ಅಸಾಧ್ಯ ಎನ್ನುವುದು ಸೃಷ್ಟಿಯಲ್ಲೇ ಇಲ್ಲ: ನಿರ್ಭಯಾನಂದ ಸರಸ್ವತಿ

ವಾರ್ತಾಭಾರತಿವಾರ್ತಾಭಾರತಿ17 Jan 2025 9:04 PM IST
share
ಅಸಾಧ್ಯ ಎನ್ನುವುದು ಸೃಷ್ಟಿಯಲ್ಲೇ ಇಲ್ಲ: ನಿರ್ಭಯಾನಂದ ಸರಸ್ವತಿ

ಮೂಡುಬಿದಿರೆ : ಸಂಕಲ್ಪ ಶಕ್ತಿ, ಕ್ರಿಯಾ ಶಕ್ತಿ ಹಾಗೂ ಜ್ಞಾನ ಶಕ್ತಿ ಸಮ್ಮಿಳಿತಗೊಂಡಾಗ ಜಗತ್ತಿನಲ್ಲಿ ಯಾವುದು ಅಸಾಧ್ಯ ವಲ್ಲ. ನಮ್ಮಿಂದ ಅಸಾಧ್ಯ ಎಂಬ ವಿಚಾರವು ಸೃಷ್ಟಿಯಲ್ಲೇ ಇಲ್ಲ. ಸಕಾರತ್ಮಕ ಮನಸ್ಥಿತಿ ಇಂದಿನ ಯುವ ಸಮುದಾಯದ ಮಂತ್ರವಾಗಬೇಕು ಎಂದು ಗದಗದ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ ಹೇಳಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಟೀಮ್ ಮ್ಯಾಟ್ರಿಕ್ಸ್ ಸಹಯೋಗದಲ್ಲಿ ಶುಕ್ರವಾರ ನಡೆದ “ನಾಯಕನ ಹೆಜ್ಜೆಯಲ್ಲಿ - ಸ್ವಾಮಿ ವಿವೇಕಾನಂದರ ಭೋದನೆಗಳನ್ನು ಜೀವನದಲ್ಲಿ ಹೇಗೆ ಅಳವಡಿಸುವುದು’ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನನ್ನಿಂದ ಅಸಾಧ್ಯ ಎನ್ನುವುದು ಪ್ರಪಂಚದ ಅತ್ಯಂತ ದೊಡ್ಡ ತಪ್ಪು ಎಂದು ವಿವೇಕಾನಂದರು ಹೇಳಿದ್ದಾರೆ. ನಮ್ಮಲ್ಲಿ ಯಶಸ್ಸಿಗೆ ಬೇಕಾದ ಎಲ್ಲಾ ಸತ್ವಗಳು ಇರುತ್ತವೆ. ಅದನ್ನು ನಾವು ಸರಿಯಾದ ರೀತಿಯಲ್ಲಿ ಆಯೋಜಿಸಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ತಮ್ಮ ಎಲ್ಲಾ ನ್ಯೂನತೆಗಳನ್ನು ಮೀರಿ, ಸಾಧನೆ ಮೆರೆದ ಮೇಡಂ ಕ್ಯೂರಿ, ಥಾಮಸ್ ಅಲ್ವಾ ಎಡಿಸನ್, ನೆಪೋಲಿಯನ್, ಅಬ್ರಹಾಂ ಲಿಂಕನ್ ಮತ್ತಿತರರ ಸಾಧನೆಗಳನ್ನು ವಿವರಿಸಿದರು.

ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳಾದರೂ ಮೆಕಾಲೆ ಶಿಕ್ಷಣ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ. ಇಂದಿನ ಶಿಕ್ಷಣ ವ್ಯವಸ್ಥೆ ಮಕ್ಕಳಿಗೆ ಈ ನೆಲದ ಮೂಲ ಮೌಲ್ಯಗಳನ್ನು ತಿಳಿಸಿಕೊಡುವುದರಲ್ಲಿ ಸಂಪೂರ್ಣ ಎಡವಿದೆ. ಈ ಅಂಶಗಳಿಗೆ ಒತ್ತು ನೀಡುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತಂದ ಹೊಸ ಶಿಕ್ಷಣ ನೀತಿಯನ್ನು ಹಲವು ರಾಜ್ಯಗಳು ನಿರಾಕರಿಸುತ್ತಿವೆ. ಇದು ಸಲ್ಲದು ಎಂದು ವಿಷಾದ ವ್ಯಕ್ತಪಡಿಸಿದರು.

ಜೀವನದಲ್ಲಿ ಭರವಸೆ ಮುಖ್ಯವಾದದ್ದು. ನಮ್ಮ ಶ್ರಮ ನಮಗೆ ಉತ್ತಮ ಫಲಿತಾಂಶ ನೀಡುತ್ತದೆ ಎಂಬ ಭರವಸೆಯಿರ ಬೇಕು. ನಾವು ದೈಹಿಕವಾಗಿ ದುರ್ಬಲರಾಗಿರಬಹುದು. ಆದರೆ ಮಾನಸಿಕವಾಗಿ ದುರ್ಬಲರಾಗಿರಬಾರದು. ನಮ್ಮಲ್ಲಿ ಆತ್ಮವಿಶ್ವಾಸ ಯಾವಾಗಲು ಎತ್ತರದಲ್ಲಿರಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ನಮಗೆ ಎಲ್ಲವನ್ನು ಒಪ್ಪಿಕೊಳ್ಳಲು ಗೊತ್ತಿದೆ. ಆದರೆ ಪ್ರಶ್ನಿಸಲು ಗೊತ್ತಿಲ್ಲ. ಎಲ್ಲಿವರೆಗೆ ನಾವು ಪ್ರಶ್ನೆ ಮಾಡುವುದಿಲ್ಲವೋ ಅಲ್ಲಿವರೆಗೂ ಗುಲಾಮರಾಗಿರುತ್ತೇವೆ ಎಂದರು.

ಸ್ವಾಮಿ ವಿವೇಕಾನಂದರ ಬೋಧನಗಳನ್ನು ಪಾಲಿಸಬೇಕು ಅವರ ಹೆಜ್ಜೆಯಲ್ಲಿ ನಡೆಯಬೇಕು ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ ಆಳ್ವ, ಕಾಲೇಜಿನ ಆಡಳಿತಧಿಕಾರಿ ಬಾಲಕೃಷ್ಣ ಶೆಟ್ಟಿ, ಪ್ರಾಧ್ಯಾಪಕ ಸುಹಾಸ್ ಶೆಟ್ಟಿ, ರೂಪೇಶ್ ಶೆಟ್ಟಿ, ವಿದ್ಯಾರ್ಥಿ ಆದಿತ್ಯ ನಾಯಕ್ ಮತ್ತು ಧೀರಜ್ ಬಂಗೇರ ಇದ್ದರು. ಪ್ರತೀಕ್ಷಾ ಶೆಣೈ ಸ್ವಾಗತಿಸಿದರು. ಖುಷಿ ಬಾಲಕೃಷ್ಣ ಶೆಟ್ಟಿ ನಿರೂಪಿಸಿದರು. ಸಂತೃಪ್ತಿ ರಾವ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X