Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಮು ಸೌಹಾರ್ದಕ್ಕಾಗಿ ರಾಜ್ಯಾದ್ಯಂತ...

ಕೋಮು ಸೌಹಾರ್ದಕ್ಕಾಗಿ ರಾಜ್ಯಾದ್ಯಂತ ಸಮಾವೇಶ: ನಿಸಾರ್ ಅಹ್ಮದ್

ಕರ್ನಾಟಕ ಅಲ್ಪಸಂಖ್ಯಾತ ಆಯೋಗದಿಂದ ಅಹವಾಲು ಸಭೆ

ವಾರ್ತಾಭಾರತಿವಾರ್ತಾಭಾರತಿ18 Jan 2025 9:38 PM IST
share
ಕೋಮು ಸೌಹಾರ್ದಕ್ಕಾಗಿ ರಾಜ್ಯಾದ್ಯಂತ ಸಮಾವೇಶ: ನಿಸಾರ್ ಅಹ್ಮದ್

ಮಂಗಳೂರು: ಸಮಾಜದಲ್ಲಿ ಕೋಮು ಸೌಹಾರ್ದಕ್ಕಾಗಿ ಫೆಬ್ರವರಿಯಲ್ಲಿ ರಾಜ್ಯವ್ಯಾಪಿ ಸಮಾವೇಶ ಹಮ್ಮಿಕೊಳ್ಳಲಾಗು ವುದು ಎಂದು ಕರ್ನಾಟಕ ಅಲ್ಪಸಂಖ್ಯಾತ ಆಯೋಗ ಅಧ್ಯಕ್ಷ ನಿಸಾರ್ ಅಹ್ಮದ್ ತಿಳಿಸಿದ್ದಾರೆ.

ಮುಂದಿನ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರ ಕೈಗೊಳ್ಳಬಹುದಾದ ಸವಲತ್ತುಗಳ ಕುರಿತು ದ.ಕ. ಮತ್ತು ಉಡುಪಿ ಜಿಲ್ಲೆಯ ಅಲ್ಪಸಂಖ್ಯಾತ ಮುಖಂಡರೊಂದಿಗೆ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು.

ಸಮಾಜದಲ್ಲಿ ಕೋಮು ಸಾಮರಸ್ಯ ಅಗತ್ಯವಾಗಿದೆ. ಅದಕ್ಕಾಗಿ ಎಲ್ಲ ಸಮುದಾಯದ ಮುಖಂಡರನ್ನು ಕರೆಸಿ ಚಿಂತನೆ ನಡೆಸಲಾಗುತ್ತಿದೆ. ಮುಂದಿನ ಕ್ರಿಯಾಯೋಜನೆಯಲ್ಲಿ ಗ್ರಾಮಮಟ್ಟದಿಂದ ರಾಜ್ಯಮಟ್ಟದವರೆಗೆ ಪ್ರತ್ಯೇಕ ಕಾರ್ಯಕ್ರಮ ನಡೆಸುವ ಅಗತ್ಯತೆ ಇದೆ. ಎಲ್ಲಾ ಸಮುದಾಯದ ಜನರೂ ಮುಖ್ಯವಾಹಿನಿಯಲ್ಲಿ ಸೇರಬೇಕು ಎಂಬುದು ಆಯೋಗದ ಉದ್ದೇಶವಾಗಿದೆ ಎಂದರು.

ಕೇಂದ್ರ ಸರಕಾರದ ಯೋಜನೆಯಡಿ ಸೀ ಡಾಕ್ ಕಂಪನಿಯಿಂದ 200 ಮಂದಿ ಅಲ್ಪಸಂಖ್ಯಾತ ಇಂಜಿನಿಯರಿಂಗ್ ವಿದ್ಯಾರ್ಥಿ ಗಳಿಗೆ ಉದ್ಯೋಗಕ್ಕಾಗಿ ಒಂದು ತಿಂಗಳ ಉಚಿತ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಬಗ್ಗೆ ಕಂಪನಿಯ ಕಾರ್ಯನಿರ್ವಾಹಕ ಅಧಿಕಾರಿಯ ಜೊತೆ ಮಾತುಕತೆ ನಡೆಸಲಾಗಿದೆ. ಇದರಿಂದ ಅಲ್ಪಸಂಖ್ಯಾತ ವಿದ್ಯಾರ್ಥಿ ಗಳಿಗೆ ಉದ್ಯೋಗ ಸೇರ್ಪಡೆಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ನಿಸಾರ್ ಅಹ್ಮದ್ ಹೇಳಿದರು.

ಮಾಜಿ ಪೊಲೀಸ್ ಅಧಿಕಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ ಮಾತನಾಡಿ ವಿದೇಶದಿಂದ ಆಗಮಿಸುವವ ಅಲ್ಪಸಂಖ್ಯಾತರಿಗೆ ಸ್ವಉದ್ಯೋಗಕ್ಕೆ ಸರಕಾರ ನೆರವಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಲ್ಗೊಳ್ಳಲು ಶುಲ್ಕ ವಿನಾಯ್ತಿ ನೀಡಬೇಕು. ಅಲ್ಪಸಂಖ್ಯಾತರಿಗೆ ವೃತ್ತಿಪರ ತರಬೇತಿ ಸಿಗಬೇಕು. ಅಲ್ಪಸಂಖ್ಯಾತರಿಗೆ ವ್ಯಾಪಾರ ನಡೆಸಲು ಆರ್ಥಿಕ ನೆರವು ನೀಡಬೇಕು ಎಂದರು.

ಶಾಂತಿ ಕದಡಿದ ಬಳಿಕ ಶಾಂತಿ ಸಮಿತಿಯು ಸಭೆ ಆಗಬಾರದು. ಪ್ರತಿ ಗ್ರಾಮ ಮಟ್ಟದಲ್ಲಿ 2 ತಿಂಗಳಿಗೊಮ್ಮೆ ಶಾಂತಿ ಸಮಿತಿ ಸಭೆ ನಡೆಸಬೇಕು. ಅಲ್ಪಸಂಖ್ಯಾತರಿಗೆ ನೀಡುವ ಸ್ಕಾಲರ್‌ಶಿಪ್‌ನ ಮೊತ್ತವನ್ನು ಹೆಚ್ಚಿಸಬೇಕು. ಜಾತಿ ಸರ್ಟಿಫಿಕೆಟ್ ಪಡೆಯುವಾಗಿನ ಆದಾಯದ ಮಾನದಂಡವನ್ನು ಕೂಡ ಹೆಚ್ಚಿಸಬೇಕು. ಸ್ಕಾಲಲ್‌ಶಿಪ್‌ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಒಂದು ತಿಂಗಳಿಗೆ ವಿಸ್ತರಿಸಬೇಕು. ಅಲ್ಪಸಂಖ್ಯಾತ ಇಲಾಖಾ ವ್ಯಾಪ್ತಿಗೆ ಒಳಪಡುವ ಮುಸ್ಲಿಂ, ಕ್ರೈಸ್ತ, ಜೈನ, ಬುದ್ಧ, ಪಾರ್ಸಿ ಮುಂತಾದ ಸಮುದಾಯಗಳಿಗೂ ಸಮಾನ ಸವಲತ್ತು ಒದಗಿಸಬೇಕು ಎಂಬ ಆಗ್ರಹ ಸಭೆಯಲ್ಲಿ ಕೇಳಿಬಂತು. ಆಯೋಗದ ವಿಶೇಷ ಅಧಿಕಾರಿ ಜಫಾರಿ ವೇದಿಕೆಯಲ್ಲಿದ್ದರು.

ಬಿಜೆಪಿ ಜನಪ್ರತಿನಿಧಿಗಳಿರುವಲ್ಲಿ ಅಲ್ಪಸಂಖ್ಯಾತರಿಗೆ ಸವಲತ್ತಿಲ್ಲ

ಅಲ್ಪಸಂಖ್ಯಾತರಿಗೆ ಎಲ್ಲಾ ಇಲಾಖೆಗಳಲ್ಲೂ ವಿವಿಧ ಯೋಜನೆಗಳನ್ನು ಪಡೆದುಕೊಳ್ಳಲು ಅವಕಾಶ ಇದೆ. ಆದರೆ ಸಮಪರ್ಕ ವಾಗಿ ಅನುಷ್ಠಾನವಾಗುತ್ತಿಲ್ಲ. ಅದರಲ್ಲೂ ಬಿಜೆಪಿ ಸಂಸದರು, ಶಾಸಕರು ಇರುವಲ್ಲಿ ಅಲ್ಪಸಂಖ್ಯಾತರು ಸವಲತ್ತುಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಮೊಯ್ದಿನಬ್ಬ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಉಡುಪಿಯಲ್ಲಿ ಕಳೆದ 10 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಸರಿಯಾದ ಸವಲತ್ತುಗಳು ಸಿಗುತ್ತಿಲ್ಲ. ಅಲ್ಪಸಂಖ್ಯಾತರ ಅನುದಾನವನ್ನು ಬಂಟ ಹಾಗೂ ಬಿಲ್ಲವ ಸಮುದಾಯ ಹೆಚ್ಚಾಗಿ ಇರುವ ರಸ್ತೆಗಳಿಗೆ ವರ್ಗಾಯಿಸಲಾಗುತ್ತಿದೆ. ಮಾಹಿತಿ ಹಕ್ಕಿನಲ್ಲಿ ಕೇಳಿದರೂ ಉತ್ತರ ಸಿಗುತ್ತಿಲ್ಲ. ಶಾಸಕರ ಅಧ್ಯಕ್ಷತೆಯ ಸಮಿತಿಯಲ್ಲಿ ಅವರಿಗೆ ಬೇಕಾದವರಿಗೆ ಅನುಕೂಲ ಮಾಡಿಕೊಡುತ್ತಾರೆ. ಇದರ ಬದಲು ಡಿಸಿ ಅಧ್ಯಕ್ಷತೆಯ ಸಮಿತಿ ಫಲಾನುಭವಿಗಳನ್ನು ಆಯ್ಕೆ ಮಾಡುವಂತಾಗಬೇಕು. ಹೊಸದಾಗಿ ಮಸೀದಿ, ಚರ್ಚ್ ನಿರ್ಮಾಣಕ್ಕೂ ಜನಪ್ರತಿನಿಧಿಗಳು, ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ. ಮೊಗವೀರರು ಮಾತ್ರ ಮೀನುಗಾರರಲ್ಲ, ಮುಸ್ಲಿಮರು ಕೂಡ ಮೀನುಗಾರಿಕೆ ಮಾಡುತ್ತಾರೆ. ಹಾಗಾಗಿ ಮೀನುಗಾರರ ಸವಲತ್ತು ಮುಸ್ಲಿಮರಿಗೂ ಸಿಗಬೇಕು ಎಂದು ಒತ್ತಾಯಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X