ವಿಕಲಚೇತನರ ಹಾಗೂ ಹಿರಿಯ ನಾಗರಿಕರ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

ಮಂಗಳೂರು,ಜ.20: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂಉದ್ಯೋಗಕ್ಕಾಗಿ ಹೊಲಿಗೆಯಂತ್ರ ನೀಡುವಯೋಜನೆ ಹಾಗೂ ಅಂಧ ವಿಕಲಚೇತನ ವಿದ್ಯಾರ್ಥಿಗಳಿಗೆ ಬ್ರೈಲ್‌ಕಿಟ್ ನೀಡುವ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಗೆ ಬರುವ ಪಂಚಾಯತ್‌ನಲ್ಲಿ ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ನೀಡಬೇಕು ಮತ್ತು ಯೋಜನೆಯ ಅರ್ಜಿಗಳನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ, ದ.ಕ. ಮಂಗಳೂರು ಅಥವಾ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಲ್ಲಿ ಪಡೆದು ಕೊಳ್ಳಬಹುದು. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ ದೂ.ಸಂ:0824-2458173 ಅಥವಾ ಮಂಗಳೂರು ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಮೊ:9110897458, ಬಂಟ್ವಾಳ ಮೊ:9164645616, ಪುತ್ತೂರು/ಕಡಬ ಮೊ:9686682251, ಬೆಳ್ತಂಗಡಿ ಮೊ:7975199473, ಸುಳ್ಯ ಮೊ:8105300057 ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





