Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಿ.ಲೋಕಯ್ಯ ಶೆಟ್ಟಿಯವರ ದೇಶಪ್ರೇಮ ಸದಾ...

ದಿ.ಲೋಕಯ್ಯ ಶೆಟ್ಟಿಯವರ ದೇಶಪ್ರೇಮ ಸದಾ ಪ್ರೇರಣೆ: ಸತೀಶ್ ಪೈ

ವಾರ್ತಾಭಾರತಿವಾರ್ತಾಭಾರತಿ21 Jan 2025 6:44 PM IST
share
ದಿ.ಲೋಕಯ್ಯ ಶೆಟ್ಟಿಯವರ ದೇಶಪ್ರೇಮ ಸದಾ ಪ್ರೇರಣೆ: ಸತೀಶ್ ಪೈ

ಮಂಗಳೂರು: ಹದಿ ಹರೆಯದಲ್ಲೇ ಕೆಚ್ಚೆದೆಯಿಂದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿದ ದಿ.ಲೋಕಯ್ಯ ಶೆಟ್ಟಿ ಅವರ ದೇಶಪ್ರೇಮ ಸಮಾಜಕ್ಕೆ ಪ್ರೇರಣೆಯಾಗಿದೆ. ಶಾಸಕರಾಗಿ, ಕಾರ್ಮಿಕ ನಾಯಕರಾಗಿ, ಕ್ರೀಡಾ ಸಂಘಟಕರಾಗಿ ಹತ್ತು ಹಲವು ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಲೋಕಯ್ಯ ಶೆಟ್ಟಿ ಅವರ ಮೇರು ವ್ಯಕ್ತಿತ್ವ ಸದಾ ಸ್ಮರಣೀಯ ಎಂದು ಭಾರತ್ ಬೀಡಿ ವರ್ಕ್ಸ್ ಸಮೂಹ ಸಂಸ್ಥೆಯ ನಿರ್ದೇಶಕ ಸತೀಶ್ ಪೈ ಹೇಳಿದ್ದಾರೆ.

ದಿ.ಎಂ.ಲೋಕಯ್ಯ ಶೆಟ್ಟಿ ಅವರ 22ನೇ ವರ್ಷದ ಸಂಸ್ಮರಣಾರ್ಥ ದಿ.ಎಂ.ಲೋಕಯ್ಯ ಶೆಟ್ಟಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಎ.ಜೆ.ಆಸ್ಪತ್ರೆಯ ಸಹಯೋಗದಲ್ಲಿ ನಗರದ ಮಣ್ಣಗುಡ್ಡೆಯ ದ.ಕ.ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ ಉಚಿತ ದಂತ ಹಾಗೂ ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಎ.ಜೆ.ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್‌ನ ಪ್ರಾಧ್ಯಾಪಕ ಡಾ.ರೋಷನ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ನೇತ್ರ ತಜ್ಞ ಡಾ.ಜಯರಾಮ ಶೆಟ್ಟಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ , ಉದ್ಯಮಿ ಗಣೇಶ್ ಶೆಟ್ಟಿ, ಮಣ್ಣಗುಡ್ಡೆ ದ.ಕ.ಜಿಪಂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಗಣೇಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಎಂ.ಲೋಕಯ್ಯ ಶೆಟ್ಟಿ ಮೆಮೋರಿಯಲ್ ಟ್ರಸ್ಟ್‌ನ ಕಾರ್ಯದರ್ಶಿ ಡಾ.ಕಿಶೋರ್‌ಚಂದ್ರ ಶೆಟ್ಟಿ, ನಿರ್ದೇಶಕರಾದ ಸತೀಶ್‌ಚಂದ್ರ ಶೆಟ್ಟಿ, ಡಾ.ಧೀರಜ್, ಪ್ರಶಾಂತ್ ಶೆಟ್ಟಿ, ಡಾ.ಶ್ರವಣ್ ಶೆಟ್ಟಿ, ಶೋಧನ್ ಶೆಟ್ಟಿ ಉಪಸ್ಥಿತರಿದ್ದರು. ಇದೇ ಸಂದರ್ಭ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಶಾಲಾ ಸಲಕರಣೆಗಳನ್ನು ವಿತರಿಸಲಾಯಿತು.

ಟ್ರಸ್ಟ್‌ನ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ ಸ್ವಾಗತಿಸಿದರು. ಶಾಲೆಯ ಸಹ ಶಿಕ್ಷಕ ಸುಬ್ರಮಣ್ಯ ಬಿ.ವಿ. ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X