Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ...

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ: ಸಂಸದ ಬ್ರಿಜೇಶ್ ಚೌಟ ಆರೋಪ

ವಾರ್ತಾಭಾರತಿವಾರ್ತಾಭಾರತಿ23 Jan 2025 8:34 PM IST
share
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ: ಸಂಸದ ಬ್ರಿಜೇಶ್ ಚೌಟ ಆರೋಪ

ಮಂಗಳೂರು : ಕರ್ನಾಟಕದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಸರಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳ ಸಂಖ್ಯೆ ಮಿತಿ ಮೀರು ತ್ತಿದೆ. ಸೈಬರ್ ಕೇಸ್‌ನಲ್ಲಿ ಜನರು 2600 ಕೋಟಿ ರೂ. ಕಳೆದುಕೊಂಡಿದ್ದರೂ, ಸರಕಾರ ಮೌನವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ದಿಕ್ಕು ದೆಸೆ ಇಲ್ಲದ, ಸಾಂಸ್ಕೃತಿಕ ಪರಂಪರೆ ಗೊತ್ತಿಲ್ಲದ, ಹಿಂದೂ ಭಾವನೆ ಘಾಸಿಗೊಳಿಸಿ, ಜಿಹಾದಿ ಮನಃಸ್ಥಿತಿ ಬೆಂಬಲಿಸಿ, ಹಣಕಾಸು ದಿವಾಳಿ ಮಾಡಿದ ದಾರಿದ್ರ್ಯದ ಡ್ರಗ್ಸ್ ದಂದೆ ಪೋಷಿಸುವ ಸರಕಾರ ಆಡಳಿತ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸಿನ ಸೋತ ಅಭ್ಯರ್ಥಿಗಳು ಪೊಲೀಸರ ವರ್ಗಾವಣೆ ಮಾಡುವ ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ. ಮಹಿಳೆಯರು, ದನಗಳು, ಉದ್ಯಮಿಗಳು, ಗುತ್ತಿಗೆದಾರರಿಗೆ ಸುರಕ್ಷೆ ಇಲ್ಲದಂತಾಗಿದೆ. ಬೆಂಗಳೂರು ಅಪರಾಧಗಳ ರಾಜಧಾನಿಯಾಗುತ್ತಿದೆ. ಕ್ರಿಮಿನಲ್‌ಗಳಿಗೆ ಬೆಂಬಲ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದರು.

ದನಗಳ ಕೆಚ್ಚಲು ಕೊಯ್ಯುವ ಮಾನಸಿಕತೆ ಹೆಚ್ಚುತ್ತಿದೆ. ಪಿಎಫ್‌ಐ, ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆಕೋರರ ಕೇಸು ವಾಪಸ್ ಪಡೆಯಲಾಗಿದೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದಾಗಲೂ, ಸಿಎಂ, ಡಿಸಿಎಂ, ಗೃಹ ಸಚಿವರು ಮೌನವಹಿಸಿ, ಪರೋಕ್ಷ ಬೆಂಬಲ ನೀಡಿದ್ದರು. ಕ್ರಿಮಿನಲ್, ಮೂಲಭೂತವಾದಿ, ಜಿಹಾದಿಗಳಿಗೆ ಪರೋಕ್ಷವಾಗಿ ಬೆಂಬಲಿಸಲಾಗುತ್ತಿದೆ ಎಂದು ಆಪಾದಿಸಿದ ಅವರು ಇದನ್ನೆಲ್ಲ ಮುಂಬರುವ ಲೋಕಸಭೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡಲಿರುವುದಾಗಿ ತಿಳಿಸಿದರು.

*ನಮ್ಮಲ್ಲಿ ಮನಸ್ತಾಪ ಇಲ್ಲ : ಶಾಸಕ ವೇದವ್ಯಾಸ ಕಾಮತ್

ಸಂಸದ ಬ್ರಿಜೇಶ್ ಚೌಟ ಜತೆ ಯಾವುದೇ ಮನಸ್ತಾಪ ಇಲ್ಲ. ಮನೆಗೆ ಬೆಂಕಿ ಬಿದ್ದಾಗ ಕೆಲವರು ಅದೇ ಬೆಂಕಿಯಿಂದ ಬೀಡಿ ಸೇದುವ ಪ್ರಯತ್ನ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ಚರ್ಚೆ ನಡೆಯುತ್ತವೆ. ಅದನ್ನು ಹೊರಗೆ ಬಿಂಬಿಸುವುದು ಸರಿಯಲ್ಲ. ಸುಮ್ಮನೆ ಗಾಸಿಪ್‌ಗಳಿಗೆ ಆಸ್ಪದ ಕೊಡಬಾರದು. ನಮ್ಮದು ಸಂಘಟನಾತ್ಮ ಜಿಲ್ಲೆ ಎಂದು ಪತ್ರಕರ್ತರ ಪ್ರಶ್ನೆಗೆ ಶಾಸಕ ಡಿ.ವೇದವ್ಯಾಸ ಕಾಮತ್ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು.

*ದರೋಡೆಯಲ್ಲಿ ಸ್ಥಳೀಯರ ಕೈವಾಡ: ಭರತ್ ಶೆಟ್ಟಿ

ವಾಮಂಜೂರು ಶೂಟೌಟ್ ಪ್ರಕರಣದಲ್ಲಿ ರಿವಾಲ್ವರ್ ಯಾರದ್ದು ಎಂಬ ಬಗ್ಗೆ ಪೊಲೀಸರು ಸರಿಯಾಗಿ ತನಿಖೆ ನಡೆಸದೆ ಮುಚ್ಚಿ ಹಾಕಿದ್ದಾರೆ. ಕೋಟೆಕಾರು ದರೋಡೆ ಪ್ರಕರಣದಲ್ಲೂ ಸ್ಥಳೀಯರ ಕೈವಾಡ ಎಂದು ಶಾಸಕ ಭರತ್ ಶೆಟ್ಟಿ ಅಭಿಪ್ರಾಯಪಟ್ಟರು

ಸುದ್ದಿಗೋಷ್ಠಿಯಲ್ಲಿಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ತಿಲಕ್‌ ರಾಜ್, ಮನೋಹರ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X