Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಣಾಜೆ| 'ಶಾಲೆಯ ಬಳಿ ಗುಡ್ಡ ಕುಸಿತದ...

ಕೊಣಾಜೆ| 'ಶಾಲೆಯ ಬಳಿ ಗುಡ್ಡ ಕುಸಿತದ ಭೀತಿ, ದಯವಿಟ್ಟು ಸರಿಪಡಿಸಿ'

ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆಯಲ್ಲಿ ವಿದ್ಯಾರ್ಥಿನಿಯ ಅಳಲು

ವಾರ್ತಾಭಾರತಿವಾರ್ತಾಭಾರತಿ23 Jan 2025 8:45 PM IST
share
ಕೊಣಾಜೆ| ಶಾಲೆಯ ಬಳಿ ಗುಡ್ಡ ಕುಸಿತದ ಭೀತಿ, ದಯವಿಟ್ಟು ಸರಿಪಡಿಸಿ

ಕೊಣಾಜೆ: ಶಾಲೆಯ ಬಳಿ ಗುಡ್ಡ ಕುಸಿಯುವ ಹಂತದಲ್ಲಿದ್ದು, ಮಳೆಗಾಲದಲ್ಲಿ ವಿದ್ಯಾರ್ಥಿಗಳೆಲ್ಲರೂ ಭೀತಿಯಿಂದಲೇ ಪಾಠ ಕೇಳುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ದಯವಿಟ್ಟು ತಡೆಗೋಡೆಯನ್ನು ನಿರ್ಮಿಸಿ ಆತಂಕವನ್ನು ದೂರಗೊಳಿಸಿ ಎಂದು ಕೊಣಾಜೆ ಪದವು ಶಾಲೆಯ ವಿದ್ಯಾರ್ಥಿನಿ ಫಾತಿಮತ್ ಧೈಫಾ ಅಳಲು ತೋಡಿಕೊಂಡಳು.

ಗುರುವಾರದಂದು ಕೊಣಾಜೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆ ಆಯೋಜಿಸ ಲಾಗಿತ್ತು. ಸಭೆಯಲ್ಲಿ ಗ್ರಾಮದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ತಮ್ಮ ಶಾಲೆ ಹಾಗೂ ಪರಿಸರದ ಸಮಸ್ಯೆಯ ಬಗ್ಗೆ ಅಳವತ್ತುಕೊಂಡರು.

ಗುಡ್ಡ ಕುಸಿತದ ಭೀತಿಯ ಬಗ್ಗೆ ವಿದ್ಯಾರ್ಥಿನಿಯ ಪ್ರಶ್ನೆಗೆ ಉತ್ತರಿಸಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮುತ್ತಪ್ಪ ಅವರು, ಈ ಬಗ್ಗೆ ಕೂಡಲೇ ಸಮಸ್ಯೆಯ ಬಗ್ಗೆ ಸಂಬಧಪಟ್ಟ ಇಲಾಖೆ, ಅಧಿಕಾರಿಗಳಿಗೆ ತಿಳಿಸಿ ಸಮಸ್ಯೆ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ವಿಶ್ವಮಂಗಳ ಶಾಲೆಯ ವಿದ್ಯಾರ್ಥಿನಿ ಅನನ್ಯಾ ಅವರು, ಶಾಲೆಯ ಪರಿಸರದಲ್ಲಿ ಕೆಲವರು ದೂಮಪಾನ ಮಾಡುತ್ತಾರೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದಾಗ, ಇದಕ್ಕೆ ಉತ್ತರಿಸಿದ ಪಿಡಿಒ ಇವತ್ತೇ ಶಾಲೆಯ ಪರಿಸರಕ್ಕೆ ಭೇಟಿ ನೀಡಿ ಸ್ಪಾಟ್ ಚೆಕ್ ಮಾಡಿ ಶೀಘ್ರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಯುಬಿಎಂಸಿ ಶಾಲೆಯ ರಝಿಮಾ ಶಾಲೆಯ ಬಳಿ ವಾಹನಗಳು ಅತಿ ವೇಗವಾಗಿ, ಭಯಾನಕವಾಗಿ ಹೋಗುತ್ತವೆ ಆದ್ದರಿಂದ ರಸ್ತೆ ಗೆ ಹಂಪ್ಸ್ ಅಳವಡಿಸಿ ಎಂದು ಬೇಡಿಕೆ ಸಲ್ಲಿಸಿದರೆ, ವಿದ್ಯಾರ್ಥಿನಿ ನಿಧಿಶ್ರೀ ಶಾಲೆಯ ಪರಿಸರದಲ್ಲಿ ಸುರಕ್ಷತೆಯ ದೃಷ್ಟಿಯಿಂದ ಬೀಟ್ ಪೋಲೀಸರು‌ ಬಂದು ಹೋಗುವ ವ್ಯವಸ್ಥೆ ಮಾಡಿ ಎಂದು ಕೇಳಿಕೊಂಡಳು.

ಅಡ್ಕರೆ ಪಡ್ಪು ಶಾಲೆಯ ವಿದ್ಯಾರ್ಥಿನಿ ಆಯಿಷತ್ ಶಿಫಾ ಅಡ್ಕರೆ ಪಡ್ಪು ಬಳಿ ಹೆಚ್ಚು ಬಸ್ ಓಡಾಟ ಇಲ್ಲ. ಇದರಿಂದ ವಿದ್ಯಾರ್ಥಿಗಳಿಗೆ, ಸ್ಥಳೀಯರಿಗೆ ತೊಂದರೆಯಾಗುತ್ತಿದೆ ಆದ್ದರಿಂದ ಹೆಚ್ಚಿನ ಬಸ್ ಸೌಲಭ್ಯ ಒದಗಿಸಿ ಎಂದು ಬೇಡಿಕೆಯಿಟ್ಟಳು.

ಕೊಣಾಜೆ ಪದವು ಶಾಲೆಯ ವಿದ್ಯಾರ್ಥಿ ಡೆಲ್ವಿನ್ ಮೋಸೆಸ್ ಮಾತನಾಡಿ ನಮ್ಮ ಶಾಲೆಯ ಬಳಿ ಕಸದ ತೊಟ್ಟಿ ಇಲ್ಲದೆ ಕಸಗಳ ರಾಶಿ ತುಂಬುತ್ತವೆ. ಆದ್ದದ್ದರಿಂದ ಕಸದ ತೊಟ್ಟಿ ಅಳವಡಿಸಿ ವಿದ್ಯಾರ್ಥಿಗಳೇ ಅದರ ನಿರ್ವಹಣೆ ಮಾಡುತ್ತೇವೆ ಎಂದು ಹೇಳಿದಾಗ ಸಭಿಕರಿಂದ ಚಪ್ಪಾಳೆ ಸದ್ದು ಕೇಳಿಸಿತು.

ಹೀಗೆ ಕೊಣಾಜೆ ಗ್ರಾಮದಲ್ಲಿ ಮಕ್ಕಳ ಗ್ರಾಮಸಭೆಯಲ್ಲಿ ಅನೇಕ ಶಾಲೆಯ ವಿದ್ಯಾರ್ಥಿಗಳು ಅವಕಾಶಗಳನ್ನು ಬಳಸಿಕೊಂಡು ಪ್ರಶ್ನೆಗಳ ಸುರಿಮಳೆಗೈದರು. ಬಳಿಕ ಪಂಚಾಯತಿ ಅಧಿಕಾರಿಗಳು ವಿದ್ಯಾರ್ಥಿಗಳ ಎಲ್ಲಾ ಸಮಸ್ಯೆಗಳಿಗೆ ಉತ್ತರಿಸಿ ಬಗೆ ಹರಿಸುವ ಭರವಸೆ ನೀಡಿದರು.

ಸಭೆಯಲ್ಲಿ ಎಪಿಡಿ ಫೌಂಡೇಶನ್ ನ ಗೀತಾ ಅವರು ಸ್ವಚ್ಚ ಭಾರತ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಸಭೆಯ ಅಧ್ಯಕ್ಷತೆನ್ನು ಕೊಣಾಜೆ ಪದವು ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿ ಯಜ್ಞೇಶ್ ಅವರು ವಹಿಸಿ ಮಾತನಾಡಿ, ಅಧಿಕಾರಿಗಳು ವಿದ್ಯಾರ್ಥಿಗಳ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದಿರಿ, ಹಾಗೆಯೇ ಅದನ್ನು ಅನುಷ್ಠಾನಗೊಳಿಸಬೇಕು ಎಂಬುದು ನಮ್ಮೆಲ್ಲರ ಬೇಡಿಕೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಕೊಣಾಜೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೀತಾ ದಾಮೋದರ್ ಕುಂದರ್, ಮಂಗಳೂರು ವಿವಿ ಸಮಾಜಕಾರ್ಯ ವಿಭಾಗದ ಉಪನ್ಯಾಸಕಿ ವಿನುತಾ ಪಂಚಾಯತಿ ಸದಸ್ಯ ರವಿ, ಅಂಗನವಾಡಿ ಮೇಲ್ವೀಚಾರಕಿ ನಳಿನಿ, ಪಂಚಾಯತಿ ಸದಸ್ಯ ಇಕ್ಬಾಲ್, ಪಂಚಾಯತಿ ಮಾಜಿ ಉಪಾಧ್ಯಕ್ಷ ರಾಮಕೃಷ್ಣ ಪಟ್ಟೋರಿ, ಪಂಚಾಯತಿ ಕಾರ್ಯದರ್ಶಿ ಚಿತ್ರಾ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ಅಚ್ಯುತ ಗಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕೊಣಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುತ್ತಪ್ಪ ಅವರು ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

"ಇಂದಿನ ಮಕ್ಕಳೇ ನಾಳೆಯ ಸುಂದರ ಭವಿಷ್ಯ. ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸದೃಢವಾಗಿಡ ಬೇಕಾದರೆ ಮೊಬೈಲ್ ನಿಂದ ದೂರವಿದ್ದು ಅದರ ಬಳಕೆಯ ಬಗ್ಗೆ ಎಚ್ಚರವಹಿಸಿ. ಮೊಬೈಲ್ ಅತಿಯಾದ ಬಳಕೆಯಿಂದಾಗಿ ವಿದ್ಯಾರ್ಥಿಗಳ ವರ್ತನೆಗಳಲ್ಲಿ ಬದಲಾವಣೆಗಳಾಗುತ್ತಿವೆ. ಕೇರಳ ಶಾಲೆಗಳಂತೆ ಕರ್ನಾಟಕದ ಶಾಲೆಗಳಲ್ಲೂ ಆಪ್ತ‌ಸಮಾಲೋಚಕರ ನೇಮಕವಾಗಬೇಕಿದೆ".

-ವಿನುತಾ, ಉಪನ್ಯಾಸಕಿ,‌ಮಂಗಳೂರು ವಿವಿ








share
ವಾರ್ತಾಭಾರತಿ
ವಾರ್ತಾಭಾರತಿ
Next Story
X