ಮಂಗಳೂರು: ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗಳು ಪೊಲೀಸ್ ಕಸ್ಟಡಿಗೆ

ಉಳ್ಳಾಲ: ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಗಳಾದ ಮುರುಗನ್ ಮತ್ತು ಯೊಸಾವೊ ರಾಜೇಂದ್ರನ್‌ರನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗಿದೆ. ವಿಚಾರಣೆಯ ಬಳಿಕ ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು ವಾರಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.
ದರೋಡೆಕೋರರಿಂದ ಕಾರು, ಎರಡು ಪಿಸ್ತೂಲು, 4 ಲೈವ್ ಬುಲೆಟ್, 3 ಲಕ್ಷ ರೂ. ನಗದು ಹಾಗೂ 2 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಕುರಿತು ತಮಿಳುನಾಡಿನ ಅಂಬಸಮುತ್ರಮ್ ನ್ಯಾಯಾಲಯಕ್ಕೆ ಪೊಲೀಸರು ಮಾಹಿತಿ ನೀಡಿದ್ದರು. ಇದೀಗ ಉಳಿದ ಚಿನ್ನಾಭರಣಕ್ಕಾಗಿ ತಮಿಳುನಾಡು ಕಲಕ್ಕಾಡ್ ಸುತ್ತ ಪೊಲೀಸರು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ. ಅಲ್ಲದೆ ತಲೆಮರೆಸಿಕೊಂಡಿರುವ ದರೋಡೆಕೋರರ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬಂಧಿತ ಇಬ್ಬರು ಆರೋಪಿಗಳನ್ನು ಗುರುವಾರ ರಾತ್ರಿ ಕೃತ್ಯವೆಸಗಿದ ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಲು ಕರೆ ತರಲಾಗಿತ್ತು. ಈ ಸಂದರ್ಭ ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
Next Story





