Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಏಕಕಾಲಿಕ ಚುನಾವಣೆ ಪ್ರಜಾಪ್ರಭುತ್ವಕ್ಕೆ...

ಏಕಕಾಲಿಕ ಚುನಾವಣೆ ಪ್ರಜಾಪ್ರಭುತ್ವಕ್ಕೆ ವಿರುದ್ಧ: ಡಾ. ಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ24 Jan 2025 8:08 PM IST
share
ಏಕಕಾಲಿಕ ಚುನಾವಣೆ ಪ್ರಜಾಪ್ರಭುತ್ವಕ್ಕೆ ವಿರುದ್ಧ: ಡಾ. ಪ್ರಕಾಶ್

ಮಂಗಳೂರು: ಲೋಕಸಭೆ ಮತ್ತು ರಾಜ್ಯ ಶಾಸಕಾಂಗಳಿಗೆ ಏಕ ಕಾಲದಲ್ಲಿ ಚುನಾವಣೆ ನಡೆಸಲು ಮೋದಿ ಸರಕಾರ ಸಂಸತ್ತಿನಲ್ಲಿ ಮಂಡಿಸಿದ ಶಾಸನಗಳು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಡಾ. ಪ್ರಕಾಶ್ ಕೆ. ಹೇಳಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಲೋಕಸಭೆಯ ಐದು ವರ್ಷಗಳ ಅವಧಿಯ ನಡುವೆ ಮೂರು ವರ್ಷಗಳಲ್ಲಿ ವಿಸರ್ಜಿಸಲ್ಪಟ್ಟರೆ ಬಳಿಕ ನಡೆಯುವ ಚುನಾವಣೆ ಎರಡು ವರ್ಷಗಳ ಅವಧಿಗೆ ಮಾತ್ರ ವಿರುತ್ತದೆ. ರಾಜ್ಯ ವಿಧಾನಸಭೆಯನ್ನು ಮಧ್ಯಂತರದಲ್ಲಿ ವಿಸರ್ಜಿಸಿದರೆ ಉಳಿದ ಅವಧಿಗೆ ಮಾತ್ರ ಚುನಾವಣೆ ನಡೆಸಲಾಗುತ್ತದೆ. ಇದು ಸಂವಿಧಾನದಲ್ಲಿ ನಿಗದಿಪಡಿಸಿದ ಸಂಸದೀಯ ಪ್ರಜಾಪ್ರಭುತ್ವದ ಮೂಲ ಯೋಜನೆಗೆ ವಿರುದ್ಧ ವಾಗಿದ್ದು, ಈ ಎರಡೂ ಮಸೂದೆಗಳನ್ನು ಹೆಚ್ಚಿನ ಪರಿಶೀಲನೆ ಮತ್ತು ಪರಿಗಣನೆಗಾಗಿ ಜಂಟಿ ಸಂಸದೀಯ ಸಮಿತಿಗೆ ವಹಿಸಲಾಗಿದೆ. ಸಿಪಿಎಂ ಇದರ ವಿರುದ್ಧ ಪ್ರಚಾರಾಂದೋಲನ ನಡೆಸುತ್ತಿದೆ ಎಂದು ಅವರು ಹೇಳಿದರು.

ಮೋದಿ ಸರಕಾರದ ಕೃಷಿ ಮಾರುಕಟ್ಟೆ ಕುರಿತ ಕರಡು ರಾಷ್ಟ್ರೀಯ ನೀತಿ ಚೌಕಟ್ಟನ್ನು ಕೂಡಾ ಸಿಪಿಎಂ ರಾಜ್ಯ ಸಮಿತಿ ಖಂಡಿಸಿದೆ. ಈ ಕರಡು ಖಾಸಗಿ ಸಗಟು ಮಾರುಕಟ್ಟೆಗಳ ಸ್ಥಾಪನೆ, ಕಾರ್ಪೊರೇಟ್ ಸಂಸ್ಕರಣಾಕಾರರು ಮತ್ತು ರಫ್ತುದಾರರಿಂದ ನೇರವಾಗಿ ಗದ್ದೆಗಳಿಂದಲೇ ಖರೀದಿ, ಸಾಂಪ್ರದಾಯಿಕ ಮಾರುಕಟ್ಟೆ ಯಾರ್ಡ್‌ಗಳನ್ನು ಕಾರ್ಪೊರೇಟ್ ನಿಯಂತ್ರಣದೊಂದಿಗೆ ಬದಲಾಯಿಸುವುದು, ಗೋದಾಮು ಮತ್ತು ಬೃಹತ್ ಕಣಜಗಳು, ಏಕೀಕೃತ ರಾಜ್ಯವ್ಯಾಪಿ ಮಾರುಕಟ್ಟೆ ಶುಲ್ಕ ಮತ್ತು ವ್ಯಾಪಾರ ಪರವಾನಿಗೆ ವ್ಯವಸ್ಥೆಯನ್ನು ಪರಿಚಯಿಸುವ ಬಗ್ಗೆ ಪ್ರಸ್ತಾಪಿಸುತ್ತದೆ. ಕಾರ್ಪೊರೇಟ್ ಸಂಸ್ಥೆಗಳು ಎಪಿಎಂಸಿ ಮಾರುಕಟ್ಟೆ ಯಾರ್ಡ್‌ಗಳನ್ನು ಬದಿಗೊತ್ತಿ ರೈತರಿಂದ ನೇರವಾಗಿ ಉತ್ಪನ್ನಗಳನ್ನು ಖರೀದಿಸಬಹುದು ಎಂಬುದನ್ನೂ ಪ್ರಸ್ತಾಪಿಸುತ್ತದೆ. ಈ ಕರಡು ನೀತಿಯ ವಿರುದ್ಧ ಕಿಸಾನ್ ಸಭಾ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ ಪ್ರಾರಂಭಿಸಿರುವ ಆಂದೋಲನಕ್ಕೆ ಸಿಪಿಎಂ ಬೆಂಬ ನೀಡಿದೆ ಎಂದು ಅವರು ಹೇಳಿದರು.

ಚುನಾವಣಾ ಆಯೋಗವು ಚುನಾವಣಾ ನಿಯಮಗಳಲ್ಲಿ ಬದಲಾವಣೆಗಳನ್ನು ಘೋಷಿಸಿದ್ದು, ಇದು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮತ್ತು ಕಾಳಜಿಯಿರುವ ನಾಗರಿಕರಿಗೆ ವೀಡಿಯೋ ಮತ್ತು ಇತರ ಡಿಜಿಟಲ್ ವೀಡಿಯೋ ಮತ್ತು ಇತರ ಡಿಜಿಟಲ್ ಸೇರಿದಂತೆ ಇಲೆಕ್ಟ್ರಾನಿಕ್ ದಾಖಲೆಗಳ ಲಭ್ಯತೆ ಅವಕಾಶ ಕಸಿದುಕೊಳ್ಳಲಿದೆ. ಈ ಬಗ್ಗೆ ಚರ್ಚಿಸಲು ಮತ್ತು ಸರಿಪಡಿಸುವ ಕ್ರಮಗಳ ಬಗ್ಗೆ ರಾಜಕೀಯ ಪಕ್ಷಗಳ ಸಭೆ ಕರೆಯುವಂತೆ ಸಿಪಿಎಂ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಅವರು ಹೇಳಿದರು.

1991ರ ಪೂಜಾ ಸ್ಥಳಗಳ ಕಾಯ್ದೆಯನ್ನು ಉಲ್ಲಂಘಿಸಿ ವಿವಿಧ ಮಸೀದಿಗಳ ಸ್ವರೂಪ ಪ್ರಶ್ನಿಸಿ ಮತ್ತು ಅವುಗಳಡಿ ದೇವಾಲಯಗಳ ಅಸ್ತಿತ್ವದ ಆರೋಪದಲ್ಲಿ ಸ್ಥಳೀಯ ನ್ಯಾಯಾಲಯಗಳಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದಲ್ಲಿ ನಡೆಯುತ್ತಿರುವ ಎಲ್ಲಾ ಮೊಕದ್ದಮೆ ಮತ್ತು ಸಮೀಕ್ಷೆಗಳಿಗೆ ತಡೆ ಹಾಕಿದೆ. ಹಾಗಾಗಿ 1991ರ ಪೂಜಾ ಸ್ಥಳಗಳ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿಯಬೇಕು ಮತ್ತು ಧಾರ್ಮಿಕ ಪೂಜಾ ಸ್ಥಳಗಳ ಮೇಲೆ ವಿವಾದ ಎತ್ತುವ ಪ್ರಯತ್ನಗಳ ಮೇಲೆ ಆ ಕಾಯ್ದೆ ಜಾರಿಗೊಳಿಸಲು ನಿರ್ದೇಶಿಸುವಂತೆ ಸಿಪಿಎಂ ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದೆ ಎಂದೂ ಅವರು ಹೇಳಿದರು.

ಕರಡು ವಿಶ್ವವಿದ್ಯಾಲಯ ಅನುದಾನ ಆಯೋಗದ ನಿಬಂಧನೆಗಳು ೨೦೨೫ನ್ನು ಕೂಡಾ ಸಿಪಿಎಂ ವಿರೋಧಿಸಿದೆ. ಇದು ರಾಜ್ಯ ಸರಕಾರಗಳು ನಡೆಸುವ ವಿವಿಗಳಲ್ಲಿ ಉಪ ಕುಲಪತಿಗಳನ್ನು ಆಯ್ಕೆ ಮಾಡುವ ಹಕ್ಕುಗಳನ್ನು ಕಸಿದುಕೊಳ್ಳುವ ಈ ನಿಬಂಧನೆಗಳನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಈಗಾಗಲೇ ಕೇಂದ್ರ ಸರಕಾರದಿಂದ ನಿಯೋಜಿಸಲ್ಪಡುವ ರಾಜ್ಯಪಾಲರು ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ ಎಂಬುದು ತಿಳಿದಿರುವಾಗ ಇದು ಅಪಾಯಕಾರಿಯಾಗಿದ್ದು, ಇದನ್ನು ಬಿಜೆಪಿಯೇತರ ರಾಜ್ಯ ಸರಕಾರಗಳು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.

ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಒಪ್ಪಂದವನ್ನು ಸಿಪಿಎಂ ಸ್ವಾಗತಿಸಿದ್ದು, ಗಾಜಾದಲ್ಲಿ ಶಾಂತಿ ಸ್ಥಾಪನೆಯಾಗುವುದನ್ನು ಖಚಿತಗೊಳಿಸಲು ಭಾರತ ಸರಕಾರ ರಾಜತಾಂತ್ರಿಕವಾಗಿ ಕಾರ್ಯ ನಿರ್ವಹಿಸಬೇಕು ಎಂಬುದು ಸಿಪಿಎಂ ಒತ್ತಾಯವಾಗಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರಕಾರ ಜಾರಿಗೊಳಿಸಿದ್ದ ರೈತ ಮತ್ತು ಕೃಷಿ ವಿರೋಧಿ ತಿದ್ದುಪಡಿಗಳನ್ನು ವಾಪಾಸ್ ಪಡೆಯುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದರೂ ಆ ಕಾರ್ಯ ಮಾಡಿಲ್ಲ. ಇದನ್ನು ವಿರೋಧಿಸಿ ಪೆ. 10ರಿಂದ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯುವ ಧರಣಿಗೆ ಸಿಪಿಎಂ ಬೆಂಬಲ ನೀಡಲಿದೆ ಎಂದವರು ಹೇಳಿದರು.

ಕೆಲಸದ ಅವಧಿಯನ್ನು 12 ಗಂಟೆ ಹಾಗೂ ಐಟಿ ಕಾರ್ಮಿಕರ ಕೆಲಸದ ಅವಧಿ 14 ಗಂಟೆಗಳಿಗೆ ಏರಿಕೆ ಮಾಡುವ ಹಾಗೂ ಅಸಂಘಟಿತ ಕಾರ್ಮಿಕರ ಕಲ್ಯಾಣ ನಿರ್ಲಕ್ಷಿಸುತ್ತಿರುವ ಕಾಂಗ್ರೆಸ್ ಸರಕಾರ ದ ಕಾರ್ಮಿಕ ವಿರೋಧಿ ನೀತಿ ಪ್ರತಿಭಟಿಸಿ ಮಾ. ೩ರಿಂದ ನಡೆಯುವ ಅನಿರ್ದಿಷ್ಟ ಹೋರಾಟವನ್ನು ಕೂಡಾ ಸಿಪಿಎಂ ಬೆಂಬಲಿಸಲು ತೀರ್ಮಾನಿಸಿದೆ ಎಂದು ಡಾ. ಪ್ರಕಾಶ್ ಹೇಳಿದರು.

ಗೋಷ್ಟಿಯಲ್ಲಿ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಯಾದವ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ರಾಜ್ಯ ಸಮಿತಿ ಸದಸ್ಯ ಸುನಿಲ್ ಕುಮಾರ್ ಬಜಾಲ್, ಮುಖಂಡ ಬಿ.ಎಂ. ಭಟ್ ಉಪಸ್ಥಿತರಿದ್ದರು.

ರಾಜ್ಯದ ಸುಮಾರು 8 ಲಕ್ಷದಷ್ಟು ಬೀಡಿ ಕಾರ್ಮಿಕರಿಗೆ ಸುಮಾರು ಏಳು ವರ್ಷಗಳಿಂದ ಕನಿಷ್ಟ ಕೂಲಿ ಜಾರಿಯಾಗಿಲ್ಲ. ಬೀಡಿ ಕಾರ್ಮಿಕರಿಗೆ ನ್ಯಾಯೋಜಿತ ಕೂಲಿ ಜಾರಿಗೆ ರಾಜ್ಯ ಸರಕಾರ ತಕ್ಷಣ ಕ್ರಮ ವಹಿಸಬೇಕು. ಹಾಗೂ ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗಕ್ಕೆ ಸಂಬಂಧಿಸಿ ರಾಜ್ಯ ಸರಕಾರ ಕ್ರಮ ವಹಿಸಬೇಕು ಎಂದು ಸಿಪಿಎಂ ಕಾರ್ಯದರ್ಶಿ ಮಂಡಳಿ ಸದಸ್ಯ ಸೈಯದ್ ಮುಜೀಬ್ ಒತ್ತಾಯಿಸಿದರು.

ರಾಜ್ಯದಲ್ಲಿ ಅವ್ಯಾಹತವಾಗಿರುವ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾಕಷ್ಟು ಸಾವುಗಳು ಸಂಭವಿಸುತ್ತಿದೆ. ಇದು ವ್ಯವಸ್ಥಿತ ಸಾಂಸ್ಥಿಕ ಕೊಲೆಯಾಗಿದ್ದು, ಇಂತಹ ಬಲವಂತದ ಸಾಲ ವಸೂಲಾತಿ ಕಟ್ಟು ನಿಟ್ಟಾಗಿ ನಿಷೇಧಿಸಿ ಕ್ರಮ ವಹಿಸಬೇಕು. ರಾಷ್ಟ್ರೀಕೃತ ಬ್ಯಾಂಕುಗಳು ಮತ್ತು ಗ್ರಾಮೀಣ ಬ್ಯಾಂಕ್ ವ್ಯವಸ್ಥೆಯ ಜಾಲ ಬಲಪಡಿಸಿ ಕಿರು ಸಾಲಗಳನ್ನು ಬಡವರಿಗೆ ಕಿರುಕುಳ ಇಲ್ಲದಂತೆ ನೀಡಲು ಕ್ರಮ ವಹಿಸಬೇಕು ಎಂಬುದು ಸಿಪಿಎಂ ಆಗ್ರಹವಾಗಿದೆ ಎಂದು ಎಂದು ಡಾ. ಪ್ರಕಾಶ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X