Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ...

ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸುವರ್ಣ ಮಹೋತ್ಸವ

ವಿಶ್ವ ಸಮ್ಮೇಳನ ಉದ್ಘಾಟನೆ, ಬಿಲ್ಲವ ರತ್ನ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ25 Jan 2025 8:43 PM IST
share
ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸುವರ್ಣ ಮಹೋತ್ಸವ

ಸುರತ್ಕಲ್:‌ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸುವರ್ಣ ಮಹೋತ್ಸವ ಪ್ರಯುಕ್ತ ಬಿಲ್ಲವರ 26 ಪಂಗಡಗಳ ವಿಶ್ವ ಸಮ್ಮೇಳನ ಉದ್ಘಾಟನೆ ಹಾಗೂ ಬಿಲ್ಲವ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಶನಿವಾರ ಸಸಿಹಿತ್ಲು ಕಡಲಕಿನಾರೆಯ ದಿ.ಕಾಂತು ಲಕ್ಕಣ್ಣ ಗುರಿಕಾರರು ಯಾನೇ ಪಠೇಲ್ ಯಾದವ ಜಿ.ಬಂಗೇರ ವೇದಿಕೆಯಲ್ಲಿ ಜರುಗಿತು.

ಸಮ್ಮೇಳನವನ್ನು ಭಾಗವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ಸಭಾಧ್ಯಕ್ಷ ಯು.ಟಿ. ಖಾದರ್‌ ಅವರು, ವಿಶ್ವ ಸಮ್ಮೇಳನ ಕೇವಲ ಸಮ್ಮೇಳನವಾಗಿ ಉಳಿಯದೇ ಸಮಸ್ತ ಬಿಲ್ಲವರ ಒಗ್ಗಟ್ಟಿನ ಆರಂಭವಾಗಬೇಕು. ಬಿಲ್ಲವ ಸಮಾಜ ಸ್ವಾಭಿಮಾನಿ ಸಮಾಜವಾಗಿದ್ದು, ಸಮಸಮಾಜದಲ್ಲಿನ ಸಣ್ಣ ಸಮಾಜದವರಿಗೆ ಆತ್ಮವಿಶ್ವಾಸ ನೀಡಿ ಅವುಗಳನ್ನು ಶಕ್ತಿವಂತರನ್ನಾಗಿಸುವ ಶಕ್ತಿ ಬಿಲ್ಲವ ಸಮಾಜಕ್ಕಿದೆ. ಪ್ರತೀ ಕುಟುಂಬ ಸಂತೃಪ್ತರಾಗಿ ಬಲಿಷ್ಠವಾಗಿದ್ದರೆ ದೇಶವೂ ಸಂತೃಪ್ತವಾಗಿ ಬಲಿಷ್ಠವಾಗಲಿದೆ. ಆ ನಿಟ್ಟಿನಲ್ಲಿ ಬಿಲ್ಲವ ಸಮುದಾಯ ಸಕಾರಾತ್ಮಕ ಚಿಂತನೆಗಳೊಂದಿಗೆ ಎಲ್ಲರ ಕಷ್ಟ ಸುಖಗಳಲ್ಲಿ ಭಾಗಿಗಳಾಗಬೇಕು ಎಂದರು.

ಶೈಕ್ಷಿಕವಾಗಿ ‌ಮುಂದಿರುವ ಆರ್ಥಿಕವಾಗಿ ಹಿನ್ನಡೆಯಿಂದ ಶಿಕ್ಷಣ ವಂಚಿತಗುವ ಮಕ್ಕಳನ್ನು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲರಮೇಲಿದೆ. ಜಾತಿ, ಧರ್ಮಗಳನ್ನು ಬದಿಗಿಟ್ಟು ಎಲ್ಲರನ್ನೂ ಪ್ರೀತಿಸುತ್ತಾ ಸಮಾನ ದೃಷ್ಟಿ ಯಿಂದ ಒಗ್ಗೂಡಿಸುವ ಕೆಲಸ ಆಗಬೇಕೆಂದು ನುಡಿದ ಅವರು, ಹಿರಿಯರು ಹುಟ್ಟುಹಾಕಿರುವ ಸಂಘವನ್ನು ಮುಂದಿನ ತಲೆ ಮಾರಿಗೂ ಮುಟ್ಟಿಸಿ ಅವರೂ ಇಂದಿನಂತೆ ಸಮಾಜಮುಖಿ ಕೆಲಸಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಅಗ್ಗಿದ ಕಳಿಯ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘಕ್ಕೆ ಶುಭಹಾರೈಸಿದರು.

ಶಿವಗಿರಿ ಮಠದ ಸಚ್ಚಿದಾನಂದ ಸ್ವಾಮೀಜಿ, ವಿಖ್ಯಾತನಂದ ಸ್ವಾಮೀಜಿ, ಸುವರ್ಣ ಬಾಬ ಸ್ವಾಮೀಜಿ, ನಿಪ್ಪಾಣಿ ಮಠದ ಅರುಣಾನಂದ ಸ್ವಾಮೀಜಿ ಅವರು ಆಶೀರ್ವಾದದ ನುಡಿಗಳನ್ನಾಡಿದರು. ಬ್ರಹ್ಮಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸತ್ಯಜಿತ್ ಸುರತ್ಕಲ್ ಪ್ರಾಸ್ತಾವಿಕ ಮಾತನಾಡಿದರು.

ಇದೇ ಸಂದರ್ಭ ಬಿಲ್ಲವ ಚೇಂಬರ್‌ ಆಫ್‌ ಕಾಮರ್ಸ್‌ ಮುಂಬೈ ಇದರ ಅಧ್ಯಕ್ಷ ನಾರಾಯಣ ಟಿ. ಪೂಜಾರಿ ಅವರಿಗೆ ಬಿಲ್ಲವರತ್ನ, ಗುಜರಾತ್‌ ಉದ್ಯಮಿ ದಯಾನಂದ ಬೋಂಟ್ರ ಅವರಿಗೆ ಬಿಲ್ಲವ ಸುವರ್ಣ ರತ್ನ, ಒಮಾನ್‌ ಬಿಲ್ಲವಾಸ್‌ ನ ಮಾಜಿ ಅಧ್ಯಕ್ಷ ಎಸ್.ಕೆ. ಪೂಜಾರಿ ಹಾಗೂ ಬಿಲ್ಲವ ಫ್ಯಾಮಿಲಿ ದುಬೈ ಸಂಘಟನೆಗೆ ಬಿಲ್ಲವ ಸೇವಾರತ್ನ, ಗರೋಡಿ ಸ್ಟೀಲ್‌ ಮಾಲಕ ಮನೋಜ್‌ ಸಲಿಪಳ್ಳ ಅವರಿಗೆ ಬಿಲ್ಲವ ಯುವ ರತ್ನ ಪ್ರಶಸ್ತಿಯನ್ನು ಪ್ರದಾನಿಸಲಾಯಿತು.

ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಸುನೀಲ್ ಕುಮಾರ್, ಸಾಗರದ ಶಾಸಕ ಬೇಲೂರು ಗೋಪಾಲಕೃಷ್ಣ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಸಂಸ್ಥೆಯ ಗೌರವಾಧ್ಯಕ್ಷ ಚಂದಯ್ಯ ಬಿ. ಕರ್ಕೇರ, ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಅಖಿಲ ಭಾರತ ಬಿಲ್ಲವ ಯೂನಿಯನ್ ನ ನವೀನ್ ಚಂದ್ರ ಸುವರ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಶ್ರೀನಾಥ್, ನಟ ಸುಮನ್ ತಲ್ವಾರ್, ಶ್ರೀಕ್ಷೇತ್ರ ಕುದ್ರೋಳಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಮ್, ಬಿಲ್ಲವ ಸಮುದಾಯದ ಪ್ರಮುಖರಾದ ಬಿ.ಎನ್. ಶಂಕರ್, ಹರೀಶ್ ಜಿ.ಅಮೀನ್, ವೇದ ಕುಮಾರ್, ವಿಶ್ವನಾಥ ಪೂಜಾರಿ, ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, ಮನೋಜ್ ಕುಮಾರ್, ಚಂದ್ರಹಾಸ್ ಅಮೀನ್, ಲೋಕೇಶ್ ಕೋಟ್ಯಾನ್, ದೀಪಕ್ ಪೂಜಾರಿ, ಸಂದೀಪ್ ಪೂಜಾರಿ, ಕೃಷ್ಣ ಸುವರ್ಣ, ಶಾರದಾ ಸೂರು ಕರ್ಕೇರ, ಸತೀಶ್ ಪೂಜಾರಿ, ಬಾಬು ಶಿವ ಪೂಜಾರಿ, ಅಚ್ಯುತ್ ಅಮೀನ್ ಕಲ್ಮಾಡಿ, ಎಸ್.ಕೆ. ಸಾಲಿಯಾನ್, ಪದ್ಮರಾಜ್, ಶೇಖರ ಪೂಜಾರಿ ಪೂನಾ ನಾಗರಾಜ್, ವೆಂಕಟೇಶ್, ನಾರಾಯಣ ಗುತ್ತೆದಾರ್, ಸಮಿತಿಯ ರಮೇಶ್ ಪೂಜಾರಿ ಚೇಳಾಯರು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಪ್ರಕಾಶ್ ಬಿ.ಎನ್. ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ನರೇಶ್ ಕುಮಾರ್ ವಂದಿಸಿದರು. ಚಂದ್ರಹಾಸ್, ಸ್ಮಿತೇಶ್ ನಿರೂಪಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X