ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ: ಅಧ್ಯಕ್ಷರಾಗಿ ಜಗದೀಶ್ಚಂದ್ರ ಅಂಚನ್ ಪುನರಾಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್ ಸಿಡಿಸಿಸಿ ಬ್ಯಾಂಕಿನ ಬ್ಯಾಂಕ್‌ನ ನಿರೀಕ್ಷಕ ಎಸ್. ಜಗದೀಶ್ಚಂದ್ರ ಅಂಚನ್ ಹಾಗೂ ಉಪಾಧ್ಯಕ್ಷರಾಗಿ ಶ್ರೀ ಭಗವತಿ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ರಾಘವ ಆರ್.ಉಚ್ಚಿಲ್ ಇವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಶನಿವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷ ಚುನಾವಣಾ ಪ್ರಕ್ರಿಯೆಯಲ್ಲಿ ಎಸ್. ಜಗದೀಶ್ಚಂದ್ರ ಅಂಚನ್ ಅಧ್ಯಕ್ಷರಾಗಿ ಎರಡನೇ ಅವಧಿಗೆ ಪುನರಾಯ್ಕೆ ಗೊಂಡರೆ, ರಾಘವ ಆರ್. ಉಚ್ಚಿಲ್ ಮೊದಲ ಬಾರಿ ಉಪಾಧ್ಯಕ್ಷ ರಾಗಿ ಅವಿರೋಧವಾಗಿ ಆಯ್ಕೆಗೊಂಡರು. ಚುನಾವಣೆಯನ್ನು ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ. ನಡೆಸಿಕೊಟ್ಟರು.
ಜಗದೀಶ್ಚಂದ್ರ ಅಂಚನ್ ಕಳೆದ 20 ವರ್ಷಗಳಿಂದ ಸಂಘದ ನಿರ್ದೇಶಕರಾಗಿ, 2007ರಲ್ಲಿ ಉಪಾಧ್ಯಕ್ಷರಾಗಿ , 2020-25ನೇ ಸಾಲಿನಲ್ಲಿ ಅಧ್ಯಕ್ಷರಾಗಿ, ಇದೀಗ ಮುಂದಿನ ಅವಧಿಗೂ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ರಾಘವ ಆರ್.ಉಚ್ಚಿಲ್ ಕಳೆದ ಹತ್ತು ವರ್ಷಗಳಿಂದ ನಿರ್ದೇಶಕರಾಗಿದ್ದು , ಈ ಬಾರಿ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ನಿರ್ದೇಶಕರಾದ ದಿವಾಕರ ಶೆಟ್ಟಿ ಕೆ. ಕಾರ್ಕಳ, ವಿಶ್ವೇಶ್ವರ ಐತಾಳ್ ಎಸ್. ಕುಂದಾಪುರ, ಜಯಪ್ರಕಾಶ್ ರೈ ಸಿ. ಪುತ್ತೂರು, ವಿಶ್ವನಾಥ್ ಕೆ.ಟಿ. ಸುಳ್ಯ, ವಿಶ್ವನಾಥ್ ಎನ್. ಅಮೀನ್ ಉಡುಪಿ, ಶಿವಾನಂದ ಪಿ. ಬಂಟ್ವಾಳ, ಗಿರಿಧರ್ ಕೆ. ಬೆಳ್ತಂಗಡಿ, ಚಂದ್ರಕಲಾ ಕೆ. ಮಂಗಳೂರು, ಗೀತಾಕ್ಷಿ ಮಂಗಳೂರು, ಕಿರಣ್ ಕುಮಾರ್ ಶೆಟ್ಟಿ ಮಂಗಳೂರು, ನಿಶಿತಾ ಜಯರಾಮ್ ಮಂಗಳೂರು, ಮೋಹನ್ ಎಸ್. ಮಂಗಳೂರು, ಪ್ರೇಮರಾಜ್ ಭಂಡಾರಿ ಮಂಗಳೂರು ಹಾಗೂ ಸಂಘದ ಮುಖ್ಯಕಾರ್ಯನಿರ್ಹಣಾಧಿಕಾರಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.