ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ಪ್ರಮೀಳಾ ರಾವ್‌ಗೆ ಪ್ರಶಸ್ತಿ

ಮಂಗಳೂರು, ಜ.25: ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್‌ನಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ (ಎಸ್‌ಎಲ್‌ಎಂಟಿ ) ಪ್ರಮೀಳಾ ರಾವ್ ಅವರಿಗೆ ಕಳೆದ ಲೋಕಸಭಾ ಚುನಾವಣೆಯ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಶನಿವಾರ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉಪಸ್ಥಿತರಿದ್ದರು.
Next Story





