Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಕ್ಫ್ ತಿದ್ದುಪಡಿ ವಿಧೇಯಕ ಮತ್ತು ಯುಸಿಸಿ...

ವಕ್ಫ್ ತಿದ್ದುಪಡಿ ವಿಧೇಯಕ ಮತ್ತು ಯುಸಿಸಿ ಜಾರಿಗೆ ಸುನ್ನಿ ಸಂಘಟನೆಗಳಿಂದ ಖಂಡನೆ

ವಾರ್ತಾಭಾರತಿವಾರ್ತಾಭಾರತಿ29 Jan 2025 8:40 PM IST
share
ವಕ್ಫ್ ತಿದ್ದುಪಡಿ ವಿಧೇಯಕ ಮತ್ತು ಯುಸಿಸಿ ಜಾರಿಗೆ ಸುನ್ನಿ ಸಂಘಟನೆಗಳಿಂದ ಖಂಡನೆ

ಮಂಗಳೂರು, ಜ.29: ವಕ್ಫ್ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿಯ ಮೂಲಕ ಮುಸ್ಲಿಂ ಸಮುದಾಯವನ್ನು ತೀವ್ರ ಆತಂಕಕ್ಕೆ ತಳ್ಳಿದ ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ವಿಧೇಯಕವನ್ನು ಯಾವುದೇ ಬದಲಾವಣೆಯಿಲ್ಲದೆ ಅನುಮೋದಿಸಿರುವುದು ಅತ್ಯಂತ ನಿರಾಶಾದಾಯಕ ಬೆಳವಣಿಗೆಯಾಗಿದೆ. ವಿರೋಧ ಪಕ್ಷಗಳ ಸದಸ್ಯರ ಅಭಿಪ್ರಾಯಗಳನ್ನು ನಿರ್ಲಕ್ಷಿಸಿ ಏಕಾಏಕಿ ತೀರ್ಮಾನ ಕೈಗೊಂಡಿರುವುದು ಆಡಳಿತ ಪಕ್ಷದ ಸರ್ವಾಧಿಕಾರಿ ಧೋರಣೆ ಎಂದು ಸುನ್ನಿ ಸಂಘಟನೆಗಳ ಒಕ್ಕೂಟವು ಖಂಡಿಸಿದೆ.

ಭಾರತದ ಅತ್ಯಂತ ದೊಡ್ಡ ಅಲ್ಪಸಂಖ್ಯಾತ ಸಮುದಾಯವಾಗಿರುವ ದೇಶದ ಸ್ವಾತಂತ್ರ್ಯ ಹೋರಾಟದಲ್ಲೂ ಭಾಗಿಯಾಗಿದ್ದ ಮುಸ್ಲಿಂ ಸಮುದಾಯವು ಆಡಳಿತ ವರ್ಗದಿಂದ ಅನ್ಯಾಯಕ್ಕೊಳಗಾಗುತ್ತಲೇ ಇದೆ. ಇದೀಗ ಕೇಂದ್ರ ಸರಕಾರವು ವಕ್ಫ್ ಕಾಯಿದೆಯನ್ನು ಬದಲಿಸಲು ಮುಂದಾದರೆ ಉತ್ತರಾಖಾಂಡ ಸರಕಾರವು ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿ ಸಿದೆ. ಸರಕಾರಗಳ ಈ ನಡೆಗಳು ಸಂವಿಧಾನದತ್ತ ಹಕ್ಕುಗಳನ್ನು ಕಬಳಿಸುವ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗಾಳಿಗೆ ತೂರುವ ಕೃತ್ಯವಾಗಿದೆ. ವಿಶೇಷವಾಗಿ ಮುಸ್ಲಿಮರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಎಲ್ಲರ ಹಕ್ಕುಗಳನ್ನು ರಕ್ಷಿಸುವ ಸಂವಿಧಾನವನ್ನು ಗೌರವಿಸಿ ಇಂತಹ ಕೃತ್ಯಗಳಿಂದ ಸರಕಾರ ಹಿಂದೆ ಸರಿಯಬೇಕು ಎಂದು ಸುನ್ನಿ ನಾಯಕರು ಮನವಿ ಮಾಡಿದ್ದಾರೆ.

ಬಂಟ್ವಾಳದ ಕಾವಲಕಟ್ಟೆ ಅಲ್ ಖಾದಿಸ ವಿದ್ಯಾಲಯದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಎನ್‌ಕೆಎಂ ಶಾಫಿ ಸಅದಿ ಠರಾವು ಮಂಡಿಸಿದರು. ಸುನ್ನಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಪಿ.ಪಿ. ಅಹ್ಮದ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. ಸುನ್ನಿ ಉಲಮಾ ಒಕ್ಕೂಟದ ಕಾರ್ಯದರ್ಶಿ ಎಸ್.ಪಿ. ಹಂಝ ಸಖಾಫಿ ಉದ್ಘಾಟಿಸಿದರು. ಮುಸ್ಲಿಂ ಜಮಾಅತ್ ನಾಯಕರಾದ ಜಿ.ಎಂ. ಕಾಮಿಲ್ ಸಖಾಫಿ, ಎಸ್‌ವೈಎಸ್ ನಾಯಕ ಡಾ. ಝೈನಿ ಕಾಮಿಲ್, ರಾಜ್ಯಾಧ್ಯಕ್ಷ ಅಬ್ದುಲ್ ಹಫೀಳ್ ಸಅದಿ, ಕಾರ್ಯದರ್ಶಿ ಕೆ.ಎಂ. ಅಬೂಬಕರ್ ಸಿದ್ದೀಕ್, ಎಸ್‌ಜೆಎಂ ಪ್ರಧಾನ ಕಾರ್ಯದರ್ಶಿ ಕೆ.ಕೆ.ಎಂ. ಕಾಮಿಲ್ ಸಖಾಫಿ, ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಹಮೀದ್ ಬಜಪೆ, ಅಶ್ರಫ್ ಕಿನಾರ, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಉಪಸ್ಥಿತರಿದ್ದರು.

ಎಸ್‌ವೈಎಸ್ ಪ್ರಧಾನ ಕಾರ್ಯದರ್ಶಿ ಎಂ.ಬಿ.ಎಂ. ಸಾದಿಕ್ ಸ್ವಾಗತಿಸಿದರು. ಎಸ್‌ಎಸ್‌ಎಫ್ ಪ್ರಧಾನ ಕಾರ್ಯದರ್ಶಿ ಸಫ್ವಾನ್ ಚಿಕ್ಕಮಗಳೂರು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X