ಮಂಗಳೂರು| ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಕಿಶೋರ್ ಶೆಟ್ಟಿ
ಮಂಗಳೂರು, ಜ.29: ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ಈ ಪ್ರಕರಣವನ್ನು LPC ಪ್ರಕರಣವೆಂದು ಪರಿಗಣಿಸಿತ್ತು. ಅದರಂತೆ ಆರೋಪಿಯ ಪತ್ತೆಗಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಎಎಸ್ಸೈ ಗಂಗಾಧರ ಎನ್, ಎಚ್.ಸಿ ಚಂದ್ರಹಾಸ್ ಸನೀಲ್, ಎಚ್ಸಿ ಪುರುಷೊತ್ತಮ ಅವರನ್ನು ಒಳಗೊಂಡ ತಂಡವು ಕಾರ್ಯಾಚರಣೆ ನಡೆಸಿ ಬುಧವಾರ ಸಕಲೇಶಪುರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
Next Story





