Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಮಾಜದ ಪಿಡುಗುಗಳ ನಿವಾರಣೆಗೆ ಮಡಿವಾಳ...

ಸಮಾಜದ ಪಿಡುಗುಗಳ ನಿವಾರಣೆಗೆ ಮಡಿವಾಳ ಮಾಚಿದೇವ ಕೊಡುಗೆ ಅಪಾರ: ಮೇಯರ್ ಮನೋಜ್ ಕುಮಾರ್

ಮಡಿವಾಳ ಮಾಚಿದೇವ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ1 Feb 2025 8:04 PM IST
share
ಸಮಾಜದ ಪಿಡುಗುಗಳ ನಿವಾರಣೆಗೆ ಮಡಿವಾಳ ಮಾಚಿದೇವ ಕೊಡುಗೆ ಅಪಾರ: ಮೇಯರ್ ಮನೋಜ್ ಕುಮಾರ್

ಮಂಗಳೂರು: ಸಾಮಾಜಿಕ ಕ್ರಾಂತಿಕಾರರಾದ ಮಾಚಿದೇವ ಮೇಲು-ಕೀಳು, ಜಾತಿಭೇದ, ಮಹಿಳೆಯರ ಶೋಷಣೆ, ಅಸಮಾನತೆ ಇದರ ವಿರುದ್ಧವಾಗಿ ಹೋರಾಡಿದ್ದಾರೆ. ಸಮಾಜದಲ್ಲಿನ ಎಲ್ಲಾ ಪಿಡುಗುಗಳನ್ನು ತೊಲಗಿಸುವ ಕಾರ್ಯದಲ್ಲಿ ಮಾಚಿದೇವರ ಕೊಡುಗೆ ಅಪಾರ ಎಂದು ಮೇಯರ್ ಮನೋಜ್ ಕುಮಾರ್ ಹೇಳಿದ್ದಾರೆ.

ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ದ. ಕ ಮಡಿವಾಳ ಸಂಘದ ಸಹಕಾರದೊಂದಿಗೆ ಶನಿವಾರ ನಗರದ ತುಳುಭವನದಲ್ಲಿ ನಡೆದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾದ ಕೆನರಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಘು ಇಡ್ಕಿದು ಮಾತನಾಡಿ, ಮಡಿವಾಳ ಮಾಚಯ್ಯನವರು ಜನಾಂಗದ ನೆಲೆಯಿಂದ ಗುರುತಿಸಿಕೊಂಡವರಲ್ಲ, ಸಾಮಾಜಿಕ ಕ್ರಾಂತಿಗಳನ್ನು ಮತ್ತು ಸಮಾಜಕ್ಕೆ ಒಳಿತಾಗುವಂತಹ ಕೆಲಸವನ್ನು ಮಾಡಿ ಗುರುತಿಸಿಕೊಂಡವರು. ಸಮಾಜ ಕಟ್ಟುವ ಕೆಲಸವನ್ನು ಅವರು ಮಾಡಿದ್ದಾರೆ. ಸಮಾಜದಲ್ಲಿ ಜನರು ಹೇಗೆ ಬೆಳೆಯಬೇಕು ಎಂಬ ಅಗತ್ಯ ವಿಷಯಗಳನ್ನು ಅವರು ತಮ್ಮ ವಚನದಲ್ಲಿ ಸಾರಿದ್ದಾರೆ ಎಂದರು.

ವೃತ್ತಿಯಲ್ಲಿ ಎಲ್ಲವೂ ಶ್ರೇಷ್ಠವಾದದ್ದು ಎಂದು ಮಡಿವಾಳ ಮಾಚಿದೇವ ‘ಅರಸುತನ ಮೇಲಲ್ಲ ಅಗಸತನ ಕೀಳಲ್ಲ’ ಎಂಬ ಮಾತಿನಲ್ಲಿ ವೃತ್ತಿಯ ಶ್ರೇಷ್ಠತೆಯನ್ನು ಸಾರಿದ್ದಾರೆ.ತಮ್ಮ ಶರಣ ತತ್ವಗಳನ್ನು, ವಚನಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಾಕಷ್ಟು ಸಂಘರ್ಷಗಳು ನಡೆದಾಗ ಅವುಗಳನ್ನು ಉಳಿಸಿಕೊಳ್ಳುವಲ್ಲಿ ಮಾಚಿದೇವರ ಪಾತ್ರ ಮಹತ್ವವಾದದ್ದು. ಮನುಷ್ಯರು ಮಾನವ ತತ್ವಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕು. ಕೆಟ್ಟ ವಿಚಾರಗಳಿಂದ ದೂರವಿದ್ದು ಒಳ್ಳೆಯ ಗುಣಗಳನ್ನು ಬೆಳೆಸಿ ದರೆ ಸಮಾಜ ಕಟ್ಟುವ ಕೆಲಸವಾಗುತ್ತದೆ ಎಂದು ಅವರು ಹೇಳಿದರು. ತಮ್ಮ ವಚನಗಳ ಮೂಲಕ ಮೂಢನಂಬಿಕೆ, ಕೆಟ್ಟ ಆಚಾರ ವಿಚಾರಗಳನ್ನು ನಾವು ಬದಿಗಿಟ್ಟು ವೈಚಾರಿಕತೆಯನ್ನು ರೂಢಿಸಿಕೊಳ್ಳಬೇಕು. ಮಾಚಿದೇವ ತೋರಿಸಿದಂತಹ ಬದುಕು ಕಟ್ಟಿಕೊಳ್ಳುವ ವೈಚಾರಿಕ ನೆಲೆಗಳನ್ನು ನಮ್ಮೊಳಗೆ ತುಂಬಿಕೊಂಡು ಬದುಕನ್ನು ಯಶಸ್ವಿಗೊಳಿಸಬೇಕು. ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಮಾತ ನಾಡಿ, ವಚನಗಳನ್ನು ನಾಶ ಮಾಡುವ ಕ್ರಾಂತಿ ನಡೆದಾಗ ಅವುಗಳನ್ನು ಎದುರಿಸಿ ವಚನಗಳನ್ನು ಉಳಿಸಿದಂತಹ ಶಕ್ತಿವಂತ, ಧೀರತ್ವದ ವ್ಯಕ್ತಿ ಮಡಿವಾಳ ಮಾಚಿದೇವ. ಅವರ ತತ್ವಗಳನ್ನು, ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಮಡಿವಾಳ ಸಂಘದ ಅಧ್ಯಕ್ಷ ಪ್ರಕಾಶ್ ಬಿ.ಎನ್ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿ, ವಾರುಣಿ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X