ಗಣಿ ಇಲಾಖೆಯಲ್ಲಿ ಸಾರ್ವಜನಿಕ ಅರ್ಜಿ ಸ್ವೀಕಾರ ‘ಅದಾಲತ್’

ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಪಟ್ಟ ಸಾರ್ವಜನಿಕ ಮನವಿ ಅಥವಾ ದೂರುಗಳ ಕುರಿತಂತೆ ಹಾಗೂ ಉಪಖನಿಜ ಗಣಿ ಗುತ್ತಿಗೆಗೆ ಸಂಬಂಧಪಟ್ಟ ಕಡತ ಅಥವಾ ಅರ್ಜಿಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಲು ಹಾಗೂ ಇತ್ಯರ್ಥಪಡಿಸಿ ತ್ವರಿತವಾಗಿ ವಿಲೇವಾರಿ ಮಾಡಲು ಪ್ರತೀ ತಿಂಗಳ ಮೊದಲನೇ ವಾರದಲ್ಲಿ (ಸಾರ್ವತ್ರಿಕ ರಜಾದಿನಗಳನ್ನು ಹೊರತುಪಡಿಸಿ) ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕ ಮನವಿ ಅಥವಾ ದೂರುಗಳ ಕುರಿತಂತೆ ಅಹವಾಲುಗಳನ್ನು ನಗರದ ಮಲ್ಲಿಕಟ್ಟೆಯಲ್ಲಿರುವ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಚೇರಿಗೆ ಖುದ್ದಾಗಿ ಲಿಖಿತ ರೂಪದಲ್ಲಿ ಸಲ್ಲಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಪ್ರಕಟನೆ ತಿಳಿಸಿದೆ.
Next Story





