ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಬಾಲಕ-ಬಾಲಕಿಯರ ಕ್ರೀಡಾಕೂಟ

ಮಂಗಳೂರು: ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಆರೋಗ್ಯವಂತರಾಗಿರಬಹುದು. ಕ್ರೀಡೆಯಿಂದ ಉತ್ತಮ ಆರೋಗ್ಯ ಸಾಧ್ಯವಿದೆ. ಕ್ರೀಡೆಯು ಬದುಕಿಗೆ ಚೈತನ್ಯ ನೀಡುತ್ತವೆ ಎಂದು ದ.ಕ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಬಿಂದಿಯ ನಾಯಕ್ ಹೇಳಿದರು.
ದ.ಕ. ಜಿಪಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ಬಾಲಕ, ಬಾಲಕಿಯರ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿಂದುಳಿದ ವರ್ಗಗಳ ಜಿಲ್ಲಾ ಕಚೇರಿಯ ನಿವೃತ್ತ ಅಧಿಕ್ಷಕ ಪರಮೇಶ್ವರ್ ಪೂಜಾರಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಮಹಾಲಕ್ಷ್ಮಿ ಬೋಳಾರ್, ದೈಹಿಕ ಶಿಕ್ಷಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಗಿರೀಶ್, ನಿವೃತ್ತ ತಾಲೂಕ ಕಚೇರಿ ಅಧಿಕ್ಷಕ ತಾರಾನಾಥ್, ವಿವಿಧ ನಿಲಯ ಮೇಲ್ವಿಚಾರಕರುಗಳು, ಹಿಂದುಳಿದ ವರ್ಗಗಳ ಇಲಾಖೆ ವಿವಿಧ ಅಧಿಕಾರಿ ಉಪಸ್ಥಿತರಿದ್ದರು.
ಹಿರಿಯ ವಾರ್ಡನ್ ಹೇಮಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಭವಾನಿ ವಂದಿಸಿದರು.