ಮಂಗಳೂರು: ಸಹಕಾರಿ ಸಂಘಗಳ ಪ್ರಮುಖರ ಜೊತೆ ಪೊಲೀಸ್ ಕಮಿಷನರ್ ಸಭೆ

ಅನುಪಮ್ ಅಗರ್ವಾಲ್
ಮಂಗಳೂರು: ನಗರ ವ್ಯಾಪ್ತಿಯ ವಿವಿಧ ಸಹಕಾರ ಸಂಸ್ಥೆಗಳ ಪ್ರಮುಖರ ಸಭೆಯು ನಗರ ಪೊಲೀಸ್ ಆಯುಕ್ತರ ಕಚೇರಿ ಯಲ್ಲಿ ಮಂಗಳವಾರ ನಡೆಯಿತು.
ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಹಕಾರ ಸಂಸ್ಥೆಗಳಲ್ಲಿ ಕೈಗೊಳ್ಳ ಬೇಕಾದ ಸುರಕ್ಷತಾ ಕ್ರಮಗಳ ಕುರಿತಂತೆ ಚರ್ಚಿಸಲಾಯಿತು.
ಸಿಸಿ ಕ್ಯಾಮರಾಗಳ ಅಳವಡಿಕೆ, ನಿರ್ವಹಣೆ, ಡಾಟಾ ಸಂಗ್ರಹಣೆ ಮತ್ತು ಭದ್ರತಾ ಸಿಬ್ಬಂದಿಯ ನಿಯೋಜನೆಯನ್ನು ಕಟ್ಟು ನಿಟ್ಟಾಗಿ ಮಾಡುವಂತೆ ಪೊಲೀಸ್ ಆಯುಕ್ತರು ಸೂಚಿಸಿದರಲ್ಲದೆ ಭದ್ರತೆಯ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು ಎಂದು ಎಚ್ಚರಿಸಿದರು.
ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಸಹಕಾರ ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.
Next Story