ಮುಲ್ಕಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ವಿಲೇವಾರಿ ಶಿಬಿರ
ಮಂಗಳೂರು ಫೆ.5: ಸರಕಾರದ ಪಂಚ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳ ವಿಲೇವಾರಿ ಶಿಬಿರವನ್ನು ವಿವಿಧ ಕಡೆ ಆಯೋಜಿಸಲಾಗಿದೆ.
ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮತ್ತು ಐಕಳ, ಬಳ್ಕುಂಜೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಸಂಬಂಧಪಟ್ಟಂತೆ ವಿಲೇವಾರಿ ಶಿಬಿರವನ್ನು ಫೆ.6ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1:30ರವರೆಗೆ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕೆಮ್ರಾಲ್,ಹಳೆಯಂಗಡಿ, ಪಡುಪಣಂಬೂರು ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಸಂಬಂಧಪಟ್ಟಂತೆ ವಿಲೇವಾರಿ ಶಿಬಿರವನ್ನು ಫೆ.12ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1:30ರವೆಗೆ ಪಡುಪಣಂಬೂರು ಗ್ರಾಪಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಮುಲ್ಕಿ ಪಟ್ಟಣ ಪಂಚಾಯತ್ ಮತ್ತು ಅತಿಕಾರಿಬೆಟ್ಟು, ಕಿಲ್ಪಾಡಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಸಂಬಂಧಪಟ್ಟಂತೆ ವಿಲೇವಾರಿ ಶಿಬಿರವನ್ನು ಫೆ.19ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1:30ರವರೆಗೆ ಮುಲ್ಕಿ ಪಟ್ಟಣ ಪಂಚಾಯತ್ ಮುಂಭಾಗದ ಮುಲ್ಕಿ ಗಾಂಧಿ ಮೈದಾನ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.
ಶಿಬಿರದಲ್ಲಿ ಸಂಬಂಧಪಟ್ಟ ಗ್ರಾಮಗಳಲ್ಲಿ ಈವರೆಗೆ ನೋಂದಣಿಗೆ ಬಾಕಿ ಇರುವ ಮತ್ತು ತಾಂತ್ರಿಕ ಸಮಸ್ಯೆ ಇರುವ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಜನೆಗಳ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.