ಗುರುಪುರ: ಬಸ್ ತಂಗುದಾಣಕ್ಕೆ ಲಾರಿ ಢಿಕ್ಕಿ; ಇಬ್ಬರಿಗೆ ಗಾಯ

ಮಂಗಳೂರು: ನಗರಕ್ಕೆ ಮಣ್ಣು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ಗುರುಪುರ ಜಂಕ್ಷನ್‌ನಲ್ಲಿ ಶುಕ್ರವಾರ ಅಪರಾಹ್ನ ಬಸ್ ತಂಗುದಾಣ ಮತ್ತು ಪಕ್ಕದ ಶ್ರೀ ಶನೀಶ್ವರ ಪೂಜಾ ಸಮಿತಿಯ ಕಚೇರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬಸ್ ತಂಗುದಾಣ ಮತ್ತು ಕಚೇರಿಗೆ ಹಾನಿಯಾಗಿದೆ. ಈ ಸಂದರ್ಭ ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು, ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಬಳಿಕ ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಿದ್ದು, ಸ್ಥಳೀಯರು ಬೆನ್ನಟ್ಟಿ ಅಲೈಗುಡ್ಡೆಯಲ್ಲಿ ತಡೆದು ನಿಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಬಜ್ಪೆ ಪೊಲೀಸರು ತನಿಖೆ ನಡೆಸಿದ್ದಾರೆ.
Next Story





