ಬೊಂಡಾಲ ಪ್ರಶಸ್ತಿಗೆ ಹಾಸ್ಯಗಾರ ರವಿಶಂಕರ್ ವಳಕುಂಜ ಆಯ್ಕೆ

ಮಂಗಳೂರು, ಫೆ.7: ಹಿರಿಯ ಯಕ್ಷಗಾನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಹವ್ಯಾಸಿ ಯಕ್ಷಗಾನ ಕಲಾವಿದ, ನಿವೃತ್ತ ಭೂಮಾಪನ ಅಧಿಕಾರಿ ಬೊಂಡಾಲ ರಾಮಣ್ಣ ಶೆಟ್ಟಿಯ ಸ್ಮರಣಾರ್ಥ ನೀಡಲಾಗುವ ’ಬೊಂಡಾಲ ಪ್ರಶಸ್ತಿ’ಗೆ ಕಟೀಲು ಮೇಳದ ಕಲಾವಿದ, ಯಕ್ಷಗಾನ ಹಾಸ್ಯಗಾರ ರವಿಶಂಕರ ವಳಕುಂಜ ಆಯ್ಕೆಯಾಗಿದ್ದಾರೆ.
ರವಿಶಂಕರ ವಳಕುಂಜ ಸುಮಾರು 27 ವರ್ಷಗಳಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮೇಳದಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಫೆ.14ರಂದು ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಬೊಂಡಾಲದಲ್ಲಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿ ವತಿಯಿಂದ ನಡೆಯುವ ದಿ.ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಸಂಸ್ಮರಣಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





