ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಬಶೀರ್ ಕಣ್ಣೂರು ಆಯ್ಕೆ

ಮಂಗಳೂರು, ಫೆ,10: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಗೆ ಅನ್‌ಲೈನ್‌ನಲ್ಲಿ ನಡೆದಿದ್ದ ಚುನಾವಣೆಯಲ್ಲಿ 9035 ಮತ ಪಡೆಯುವ ಮೂಲಕ ಮುಹಮ್ಮದ್ ಬಶೀರ್ ಕಣ್ಣೂರು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಬೀಯಿಂಗ್ ಹ್ಯೂಮನ್ ಫೌಂಡೇಶನ್‌ನ ಮಂಗಳೂರು ನಗರ ಅಧ್ಯಕ್ಷರಾಗಿ, ಮಂಗಳೂರು ಬ್ಯಾರಿ ಸೆಂಟ್ರಲ್ ಕಮಿಟಿಯ ಸದಸ್ಯರಾಗಿ, ಮೇಕ್ ಎ ಚೇಂಜ್‌ನ ಸಹ ಸ್ಥಾಪಕರಾಗಿದ್ದರು.
Next Story





